Shubman Gill Health Update: ಏಕದಿನ ವಿಶ್ವಕಪ್’ಗೆ ಭಾರತವು ಆತಿಥ್ಯ ವಹಿಸುತ್ತಿದೆ. ಈ ಟೂರ್ನಿಯಲ್ಲಿ ಭಾರತದ ಮೊದಲ ಪಂದ್ಯ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಇನ್ನು ಈ ಬಾರಿ ಟ್ರೋಫಿ ಗೆಲ್ಲುವಲ್ಲಿ, ಭಾರತವನ್ನು ಪ್ರಬಲ ಸ್ಪರ್ಧಿ ಎಂದೇ ಪರಿಗಣಿಸಲಾಗಿದೆ. ಈ ಮಧ್ಯೆ, ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ತೆರೆಯಿತು 28ರ ಹರೆಯದ ಆಟಗಾರನ ಅದೃಷ್ಟದ ಬಾಗಿಲು..! ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಆಲ್’ರೌಂಡರ್


ವಿಶ್ವಕಪ್ ಪಂದ್ಯಕ್ಕೂ ಮುನ್ನವೇ ಭಾರತದ ಸ್ಟಾರ್ ಆಟಗಾರ ಶುಭಮನ್ ಗಿಲ್ ಡೆಂಗ್ಯೂಗೆ ತುತ್ತಾಗಿದ್ದಾರೆ. ಈ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶುಭ್‌ಮನ್ ಆಡುವ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ. ಇದೀಗ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಗಿಲ್ ಬಗ್ಗೆ ಮಾಹಿತಿ ನೀಡಿದ್ದಾರೆ.


ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್, “ಪಂದ್ಯಕ್ಕೆ ಇನ್ನೂ 72 ಗಂಟೆ ಬಾಕಿ ಇದೆ. ಕೊನೆಯ ಕ್ಷಣದವರೆಗೂ ಶುಭ್‌ಮನ್ ಗಿಲ್‌’ಗಾಗಿ ಕಾಯುತ್ತೇವೆ. ಸದ್ಯ ಅವರ ಆಟದ ಬಗ್ಗೆ ಏನನ್ನೂ ಹೇಳಲಾರೆ. ವೈದ್ಯಕೀಯ ತಂಡ ನಿಗಾ ಇರಿಸಿದೆ. ಪಂದ್ಯಕ್ಕೂ ಮುನ್ನ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಭರವಸೆ ಇದೆ” ಎಂದಿದ್ದಾರೆ.


ಭಾರತ 1983 ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. 2011ರ ಫೈನಲ್‌’ನಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸಿತ್ತು. ಇದೀಗ 12 ವರ್ಷಗಳ ಬಳಿಕ ಮತ್ತೊಮ್ಮೆ ಏಕದಿನದಲ್ಲಿ ವಿಶ್ವ ಚಾಂಪಿಯನ್ ಆಗುವ ಅವಕಾಶ ಟೀಂ ಇಂಡಿಯಾಕ್ಕಿದೆ.


ಇನ್ನು ಆಸ್ಟ್ರೇಲಿಯಾ ಇದುವರೆಗಿನ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ. ಆದರೆ, 2015 ರಿಂದ ಈ ತಂಡಕ್ಕೆ ವಿಶ್ವಕಪ್ ಗೆಲ್ಲಲು ಸಾಧ್ಯವಾಗಲಿಲ್ಲ.


ಇದನ್ನೂ ಓದಿ: "ಆಸ್ಪತ್ರೆಯಲ್ಲಿ ನಾನು ಬೆತ್ತಲಾಗಿದ್ದಾಗಲೂ ವೈದ್ಯರು, ನರ್ಸ್ ವಿಡಿಯೋ ತೆಗೆದಿದ್ರು": ಸಿದ್ದಾರ್ಥ್


ವಿಶ್ವಕಪ್‌’ಗೆ ಭಾರತ ತಂಡ:


ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಮತ್ತು ರವಿಚಂದ್ರನ್ ಅಶ್ವಿನ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ