ವಿಶ್ವಕಪ್‌ ಮೊದಲ ಪಂದ್ಯಕ್ಕೂ ಮುನ್ನವೇ ಇಂಗ್ಲೆಂಡ್ ತಂಡಕ್ಕೆ ಬಿಗ್‌ ಶಾಕ್‌.!!

World Cup 2023: ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ತಂಡದ ಸ್ಟಾರ್ ಆಲ್ ರೌಂಡರ್ ಗಾಯಗೊಂಡಿದ್ದಾರೆ. ಇದನ್ನು ಸ್ವತಃ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಖಚಿತಪಡಿಸಿದ್ದಾರೆ.  

Written by - Chetana Devarmani | Last Updated : Oct 5, 2023, 08:15 AM IST
  • ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಪೆಟ್ಟು
  • ತಂಡದ ಸ್ಟಾರ್ ಆಲ್ ರೌಂಡರ್ ಗಾಯ
  • ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಹೇಳಿಕೆ
ವಿಶ್ವಕಪ್‌ ಮೊದಲ ಪಂದ್ಯಕ್ಕೂ ಮುನ್ನವೇ ಇಂಗ್ಲೆಂಡ್ ತಂಡಕ್ಕೆ ಬಿಗ್‌ ಶಾಕ್‌.!!  title=

ಅಹಮದಾಬಾದ್: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಪಂದ್ಯವು ಪ್ರಸ್ತುತ ರನ್ನರ್ ಅಪ್ ನ್ಯೂಜಿಲೆಂಡ್ ಮತ್ತು ಹಾಲಿ ಚಾಂಪಿಯನ್ ಇಂಗ್ಲೆಂಡ್ (ENG vs NZ) ನಡುವೆ ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದ ಆರಂಭಕ್ಕೂ ಮುನ್ನವೇ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ಗೆ ಭಾರಿ ಪೆಟ್ಟು ಬಿದ್ದಿದೆ. ತಂಡದ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಗಾಯಗೊಂಡಿದ್ದಾರೆ. ಇದನ್ನು ಸ್ವತಃ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಖಚಿತಪಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ 2019 ರ ವಿಶ್ವಕಪ್ ಫೈನಲ್‌ನಲ್ಲಿ ಸ್ಟೋಕ್ಸ್ ಪಂದ್ಯದ ಆಟಗಾರರಾಗಿದ್ದರು ಮತ್ತು ತಂಡದ ಮ್ಯಾಚ್ ವಿನ್ನರ್ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ಗೈರು ಇಂಗ್ಲೆಂಡ್‌ ತಂಡಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಇಂಗ್ಲೆಂಡ್ ತನ್ನ ವಿಶ್ವ ಚಾಂಪಿಯನ್‌ ಪಟ್ಟವನ್ನು ಉಳಿಸಿಕೊಳ್ಳಬೇಕಾದರೆ ಸ್ಟೋಕ್ಸ್ ಆಡುವುದು ಅವಶ್ಯಕ. ಆದರೆ ಹಾಗೆ ಕಾಣುತ್ತಿಲ್ಲ. ಆಗಸ್ಟ್‌ನಲ್ಲಿ ODI ಕ್ರಿಕೆಟ್‌ನಿಂದ ನಿವೃತ್ತಿಯ ನಿರ್ಧಾರವನ್ನು ಹಿಂತೆಗೆದುಕೊಂಡ ನಂತರ, ಸ್ಟೋಕ್ಸ್ ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ 182 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

ಇದನ್ನೂ ಓದಿ : ವಿಶ್ವಕಪ್’ಗೂ ಮುನ್ನ ನಾಯಕತ್ವ ಕಳೆದುಕೊಂಡ ರೋಹಿತ್! ಇನ್ಮುಂದೆ 35 ಹರೆಯದ ಈ ಸ್ಟಾರ್ ಬ್ಯಾಟ್ಸ್’ಮನ್’ ಕ್ಯಾಪ್ಟನ್ 

ಸೊಂಟದ ಗಾಯದಿಂದಾಗಿ, ಸ್ಟೋಕ್ಸ್ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ನ ಪ್ಲೇಯಿಂಗ್ XI ನ ಭಾಗವಾಗಿರುವುದಿಲ್ಲ ಎಂದು ಹೇಳಲಾಗಿದೆ. ಸ್ಟೋಕ್ಸ್ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದನ್ನು ನಂತರ ನಿರ್ಧರಿಸಲಾಗುವುದು ಎಂದು ಬಟ್ಲರ್ ಹೇಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದ ನಂತರ ಬಟ್ಲರ್ ಈ ಗಾಯಕ್ಕೆ ಒಳಗಾಗಿದ್ದರು.

ಪಂದ್ಯಾವಳಿಯ ಆರಂಭದಲ್ಲಿ ಇಂಗ್ಲೆಂಡ್ ತಮ್ಮ ಆಟಗಾರರ ಫಿಟ್‌ನೆಸ್ ಸಮಸ್ಯೆಗಳ ಬಗ್ಗೆ ಯಾವುದೇ ಅನಗತ್ಯ  ರಿಸ್ಕ್‌ ತೆಗೆದುಕೊಳ್ಳುವುದಿಲ್ಲ ಎಂದು ನಾಯಕ ಹೇಳಿದರು. ಏನೇ ಆಗಲಿ ನಾವು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಅವರು ಆಡಲು ಫಿಟ್‌ ಆಗಿದ್ದಾರೋ ಅಥವಾ ಇಲ್ಲವೇ ಎಂಬುದನ್ನು ನಾವು ನೋಡುತ್ತೇವೆ. ಅವರು ಹೇಗಿದ್ದರೆ ಎಂಬುದರ ಮೇಲೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ ಪಂದ್ಯಾವಳಿಯ ಆರಂಭದಲ್ಲಿ ಯಾರ ಮೇಲೂ ದೊಡ್ಡ ರಿಸ್ಕ್‌ ತೆಗೆದುಕೊಳ್ಳಲು ಇದು ಸಮಯವಲ್ಲ ಎಂದರು.

ವಿಶ್ವಕಪ್ 2023 ರ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಇದನ್ನೂ ಓದಿ : ವಿಶ್ವಕಪ್’ಗೂ ಮುನ್ನ ನಾಯಕತ್ವ ಕಳೆದುಕೊಂಡ ರೋಹಿತ್! ಇನ್ಮುಂದೆ 35 ಹರೆಯದ ಈ ಸ್ಟಾರ್ ಬ್ಯಾಟ್ಸ್’ಮನ್’ ಕ್ಯಾಪ್ಟನ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News