World Cup 2023 Final: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2023ರ ಫೈನಲ್ ಪಂದ್ಯವನ್ನು ಗೆದ್ದು, 12 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಬೇಕೆಂಬ ಮಹದಾಸೆಯಿಂದ ಟೀಂ ಇಂಡಿಯಾ ಮೈದಾನಕ್ಕೆ ಇಳಿಯಲಿದೆ. ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 1983, 2011ರ ಅಂಕಿಅಂಶಗಳ ಪ್ರಕಾರ ವಿಶ್ವಕಪ್ ಫೈನಲ್’ನಲ್ಲಿ ಟಾಸ್ ವೇಳೆ ಹೀಗಾದರೆ ಭಾರತಕ್ಕೆ ಅದೃಷ್ಟ!


ಟೀಂ ಇಂಡಿಯಾದ ವೇಗದ ಬೌಲರ್’ಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ಈ ಟೂರ್ನಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದಾರೆ, ಆದರೆ ಈ ಮೈದಾನದಲ್ಲಿ ಅತಿ ಹೆಚ್ಚು ಏಕದಿನ ವಿಕೆಟ್‌’ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿರೋದು ಈ ಮೂವರಲ್ಲ, ಬದಲಾಗಿ ಬೇರೊಬ್ಬ ಆಟಗಾರ.


ಟೀಂ ಇಂಡಿಯಾದ ಸಕ್ರಿಯ ಆಟಗಾರರ ಬಗ್ಗೆ ಮಾತನಾಡುವುದಾದರೆ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಈ ಮೈದಾನದಲ್ಲಿ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ಆಟಗಾರ. ಆಡಿರುವ 3 ಏಕದಿನ ಪಂದ್ಯಗಳಲ್ಲಿ 9 ವಿಕೆಟ್‌’ಗಳನ್ನು ಪಡೆದಿದ್ದಾರೆ. ಇನ್ನು ಈ ಮೈದಾನದಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್ ಭಾರತದ ಮಾಜಿ ಆಟಗಾರ ಕಪಿಲ್ ದೇವ್. ಅವರು 6 ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ.


ಇದನ್ನೂ ಓದಿ: “ವಿಶ್ವಕಪ್ ಟ್ರೋಫಿ ಗೆಲ್ಲಲು ಪ್ರಯತ್ನಿಸಬೇಡಿ…”- ಭಾರತ ಕ್ರಿಕೆಟ್ ತಂಡಕ್ಕೆ ಸದ್ಗುರು ಶಾಕಿಂಗ್ ಸಲಹೆ


ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದಿಂದ ಹೊರಗುಳಿದ ಬಳಿಕ ಪ್ರಸಿದ್ಧ ಕೃಷ್ಣ ಅವರನ್ನು ಬದಲಿಯಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಯಿತು. ಆದರೆ, ಈ ಟೂರ್ನಿಯಲ್ಲಿ ಇನ್ನೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿಲ್ಲ. ಜೊತೆಗೆ ಈ ಪಂದ್ಯದಲ್ಲೂ ಅವರಿಗೆ ಅವಕಾಶ ಸಿಗುವುದು ಅನುಮಾನ. ಕಳೆದ ಮೂರು ಪಂದ್ಯಗಳಲ್ಲಿ ಯಾವುದೇ ಬದಲಾವಣೆಯಿಲ್ಲದೆ ಟೀಂ ಇಂಡಿಯಾ ಮೈದಾನಕ್ಕಿಳಿದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.