Hardik Pandya Health updates : ಐಸಿಸಿ ಪುರುಷರ ವಿಶ್ವಕಪ್ ಸರಣಿ ಕಳೆದ ಅಕ್ಟೋಬರ್ 5 ರಿಂದ ಆರಂಭವಾಗಿದೆ. ಭಾರತ ತಂಡ 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಭಾರತ ತಂಡ ಉತ್ತಮವಾಗಿ ಆಡುತ್ತಿದ್ದರೂ ಒಂದು ಘಟನೆ ತಂಡವನ್ನು ಚಿಂತೆಗೀಡು ಮಾಡಿದೆ. ಬಾಂಗ್ಲಾದೇಶ ತಂಡದ ವಿರುದ್ಧದ ಪಂದ್ಯದಲ್ಲಿ ಈ ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

ಈ ಪಂದ್ಯದಲ್ಲಿ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ಸಣ್ಣ ಗಾಯವಾಗಿದ್ದು, ಕೇವಲ ಒಂದು ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆ ಊಹಿಸಲಾಗಿತ್ತು. ಸ್ಕ್ಯಾನ್‌ ರಿಪೋರ್ಟ್‌ ನೋಡಿದಾಗ, ಪಾಂಡ್ಯ ಅವರ ಪಾದದ ligament ಗೆ ಹಾನಿಯಾಗಿದೆ. ಅವರು ಹಿಂದಿರುಗುವ ದಿನಾಂಕವನ್ನು ಬಿಸಿಸಿಐ ವೈದ್ಯಕೀಯ ತಂಡ ನಿರ್ಧರಿಸುವ ಮೊದಲು ಅವರು ಗುರುವಾರ ಫಿಟ್ನೆಸ್ ಪರೀಕ್ಷೆಗೆ ಒಳಗಾಗುತ್ತಾರೆ.      


ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವುದಿಲ್ಲ ಮತ್ತು ನಂತರದ ಪಂದ್ಯಗಳಲ್ಲಿ ಆಡುತ್ತಾರೆ ಎಂದು ವರದಿಗಳು ಬಂದವು. ಅಕ್ಟೋಬರ್ 29 ರಂದು ಲಕ್ನೋದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ನಡುವೆ ಒಂದು ವಾರ ಬಿಡುವು ಪಡೆದು ಮುಂದಿನ ಪಂದ್ಯಕ್ಕೆ ಸಿದ್ಧರಾಗುವ ನಿರೀಕ್ಷೆ ಇತ್ತು. ಆದರೆ, ನಿನ್ನೆ ಅವರು ಮುಂದಿನ ಎರಡು ಪಂದ್ಯಗಳಲ್ಲಿ ಆಡುವುದಿಲ್ಲ ಎಂಬ ವರದಿಗಳು ಬಂದಿವೆ. 


ಇದನ್ನೂ ಓದಿ: ಸತತ 5 ಪಂದ್ಯ ಗೆದ್ದರೂ ಸೆಮಿಫೈನಲ್ ಪ್ರವೇಶಿಸೋದು ಟೀಂ ಇಂಡಿಯಾಗೆ ಕಷ್ಟ! ಯಾಕೆ ಗೊತ್ತಾ? 


ಆ ಮೂಲಕ ಹಾರ್ದಿಕ್ ಪಾಂಡ್ಯ ಗಾಯದ ಸ್ಥಿತಿಯ ಮಾಹಿತಿ ಹೊರಬಿದ್ದಿದೆ. ಹಾರ್ದಿಕ್ ಪಾಂಡ್ಯ ಅವರ ಪಾದದ ಅಸ್ಥಿರಜ್ಜು ಹಾನಿಗೊಳಗಾಗಿದೆ ಎಂದು ವರದಿಯಾಗಿದೆ. ಬಿಸಿಸಿಐ ಅಧಿಕಾರಿ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿರುವ ಮಾಹಿತಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಗಾಯ ಆರಂಭದಲ್ಲಿ ಪತ್ತೆಯಾಗಿದ್ದಕ್ಕಿಂತ ಸ್ವಲ್ಪ ಗಂಭೀರವಾಗಿದೆಯಂತೆ.


ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಿತಿನ್ ಪಟೇಲ್ ನೇತೃತ್ವದ ವೈದ್ಯಕೀಯ ತಂಡದ ನಿಗಾದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಾರೆ. ಹಾರ್ದಿಕ್ ಪಾಂಡ್ಯ ಅವರ ಪಾದದ ಸಣ್ಣ ಅಸ್ಥಿರಜ್ಜು ಹಾನಿಗೊಳಗಾಗಿರಬಹುದು ಎಂದು ಶಂಕಿಸಿದ್ದಾರೆ. ಇದು ಸಂಪೂರ್ಣವಾಗಿ ಗುಣವಾಗಲು ಸುಮಾರು 2 ವಾರಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಅದೂ ಅಲ್ಲದೆ ಗಾಯ ಸಂಪೂರ್ಣವಾಗಿ ಗುಣಮುಖರಾದಾಗ ಮಾತ್ರ ಅವರನ್ನು ಅಕಾಡೆಮಿಯಿಂದ ಬಿಡುಗಡೆ ಮಾಡಲಾಗುವುದು ಮತ್ತು  ಶೀಘ್ರ ಗುಣಮುಖರಾಗಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 


ಹೀಗಾಗಿ, ಅವರ ಚೇತರಿಕೆಗಾಗಿ ಕಾಯಲು ಟೀಂ ಇಂಡಿಯಾ ನಿರ್ಧರಿಸಿದೆ. ಅವರ ಬದಲಿ ಅಗತ್ಯವಿಲ್ಲ. ನಂತರದ ಪಂದ್ಯಗಳಲ್ಲಿ ಅವರ ಬದಲು ಸೂರ್ಯಕುಮಾರ್ ಯಾದವ್ ಅಥವಾ ಇಶಾನ್ ಕಿಶನ್ ಆಡಲಿದ್ದಾರೆ. ಎಲ್ಲಾ ಪಂದ್ಯಗಳಲ್ಲಿ ಬೌಲಿಂಗ್‌ನಲ್ಲಿ ಶಾರ್ದೂಲ್ ಬದಲಿಗೆ ಶಮಿ ಕಣಕ್ಕಿಳಿಯಲಿದ್ದಾರೆ. ಬಹುಶಃ ಸಿರಾಜ್‌ಗೆ ವಿಶ್ರಾಂತಿ ನೀಡಿದರೆ ಅಶ್ವಿನ್ ಹೆಚ್ಚುವರಿ ಆಫ್ ಸ್ಪಿನ್ನರ್ ಆಗಿ ಬರಬಹುದು.


ಅವರು ಎಷ್ಟು ಪಂದ್ಯಗಳನ್ನು ಕಳೆದುಕೊಳ್ಳುತ್ತಾರೆ?


ಅಲ್ಲದೆ, ಹಾರ್ದಿಕ್ ಪಾಂಡ್ಯ ಗಾಯವನ್ನು ನೋಡಿದರೆ, ಅವರು ಇಂಗ್ಲೆಂಡ್ (IND vs ENG), ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಮುಂದಿನ ಮೂರು ಪ್ರಮುಖ ಪಂದ್ಯಗಳಲ್ಲಿ ಆಡುವುದಿಲ್ಲ ಎಂದು ಹೇಳಲಾಗಿದೆ. ನವೆಂಬರ್ 12ರಂದು ನಡೆಯಲಿರುವ ಭಾರತ-ನೆದರ್ಲೆಂಡ್ ನಡುವಿನ ಪಂದ್ಯದಲ್ಲಿ ಅಥವಾ ಸೆಮಿಫೈನಲ್ ಪಂದ್ಯದಲ್ಲಿ ನೇರವಾಗಿ ಪಾಂಡ್ಯ ಆಡಬಹುದು ಎನ್ನಲಾಗಿದೆ.


ಇದನ್ನೂ ಓದಿ:  ನೆದರ್ಲ್ಯಾಂಡ್ಸ್ ವಿರುದ್ಧ ಅದ್ಭುತ ಶತಕ: ಕ್ರಿಕೆಟ್ ಗಾಡ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.