ICC Cricket World Cup 2023: ಹರಿಣಗಳ ಆರ್ಭಟಕ್ಕೆ ನಲುಗಿದ ಕೀವಿಸ್ ಪಡೆ

ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯನ್ಸ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ನ್ಯೂಜಿಲೆಂಡ್ ವಿರುದ್ಧ 190 ರನ್ ಗಳ ಗೆಲುವು ಸಾಧಿಸಿದೆ.

Written by - Manjunath N | Last Updated : Nov 1, 2023, 10:06 PM IST
  • ಟಾಸ್ ಗೆದ್ದು ನ್ಯೂಜಿಲೆಂಡ್ ತಂಡವು ಮೊದಲು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡಿತು.
  • ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 50 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 357 ರನ್ ಗಳನ್ನು ಗಳಿಸಿತು.
ICC Cricket World Cup 2023: ಹರಿಣಗಳ ಆರ್ಭಟಕ್ಕೆ ನಲುಗಿದ ಕೀವಿಸ್ ಪಡೆ  title=

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯನ್ಸ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ನ್ಯೂಜಿಲೆಂಡ್ ವಿರುದ್ಧ 190 ರನ್ ಗಳ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ನ್ಯೂಜಿಲೆಂಡ್ ತಂಡವು ಮೊದಲು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡಿತು. ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 50 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 357 ರನ್ ಗಳನ್ನು ಗಳಿಸಿತು.

ಇದನ್ನೂ ಓದಿ: ನವೆಂಬರ್ 10 ರವರೆಗೆ ಕಾದು ನೋಡಿ ಬಿಜೆಪಿಯಲ್ಲಿ ಏನಾಗುತ್ತೆ ಅಂತ - ಜಮೀರ್ ಅಹಮದ್ 

ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಡಿಕಾಕ್ 114 ಹಾಗೂ ವ್ಯಾನ್ ಡೆರ್ ದುಸೆನ್ 133 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.

ಇದೆ ವೇಳೆ ದಕ್ಷಿಣ ಆಫ್ರಿಕಾ ತಂಡವು ನೀಡಿದ 358 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ಹರಿಣಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಕೆವಾ 35.3 ಓವರ್ ಗಳಲ್ಲಿ 167 ರನ್ ಗಳಿಗೆ ಅಲೌಟ್ ಆಯಿತು. ಕೀವಿಸ್ ಪರವಾಗಿ ಗ್ಲೆನ್ ಫಿಲಿಫ್ಸ್ 60 ರನ್ ಗಳನ್ನು ಗಳಿಸಿದ್ದೆ ಅಧಿಕ ಮೊತ್ತವಾಗಿತ್ತು.ಇನ್ನುಳಿದ ಯಾವ ಆಟಗಾರನು ಕೂಡ 40 ರ ಗಡಿ ದಾಟುವಲ್ಲಿ ಯಶಸ್ವಿಯಾಗಲಿಲ್ಲ

ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಕೇಶವ್ ಮಹಾರಾಜ್ ನಾಲ್ಕು ಹಾಗೂ ಮಾರ್ಕೋ ಜಾನ್ಸೇನ್ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ  ನ್ಯೂಜಿಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News