World Cup 2023: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್  ಪಂದ್ಯವು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್‌’ನಲ್ಲಿ ನಡೆಯುತ್ತಿದೆ. ಇನ್ನೊಂದೆಡೆ ಇಂದು ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರ 35ನೇ ಹುಟ್ಟುಹಬ್ಬ. ಹೀಗಾಗಿ ಅವರ ಹುಟ್ಟುಹಬ್ಬವನ್ನು ಸ್ಮರಣೀಯವಾಗಿಸಲು ಈ ಪಂದ್ಯಕ್ಕೂ ಮುನ್ನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ವಿಶೇಷ ಆಚರಣೆಯನ್ನು ಆಯೋಜಿಸಲಾಗಿತ್ತು. ಇದಕ್ಕೆ ಕಾರಣ ಐಸಿಸಿ ತೆಗೆದುಕೊಂಡ ಕ್ರಮ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವಾಗದ ವಿರಾಟ್ ಕೊಹ್ಲಿಯ ವಿಶ್ವದಾಖಲೆಗಳಿವು


ಹೌದು ಇಂದು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್‌’ನಲ್ಲಿ ವಿರಾಟ್ ಕೊಹ್ಲಿ ಹುಟ್ಟುಹಬ್ಬವನ್ನು ಆಚರಿಸಬೇಕೆಂದು ಕೊಹ್ಲಿ ಫ್ಯಾನ್ಸ್ ಪ್ಲ್ಯಾನ್ ಮಾಡಿದ್ದರು. ಆದರೆ ಇದಕ್ಕೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅವಕಾಶ ನೀಡಿಲ್ಲ. ಇದರಿಂದ ಬೇಸರಗೊಂಡ ಕೊಹ್ಲಿ ಫ್ಯಾನ್ಸ್ ಕ್ರಿಕೆಟ್ ಮೈದಾನದ ಹೊರಗೆ ಹುಟ್ಟುಹಬ್ಬವನ್ನು ವಿಶೇಷವಾಗಿಸಲು ಫುಲ್ ತಯಾರಿ ನಡೆಸಿದ್ದಾರೆ.


ಐಸಿಸಿ ಆಘಾತಕಾರಿ ಕ್ರಮ:


ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಈ ಹಠಾತ್ ನಿರ್ಧಾರದಿಂದ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಜೆರ್ಸಿ ಧರಿಸಿ ಕ್ರೀಡಾಂಗಣದಲ್ಲಿ ಸಾಧ್ಯವಾದಷ್ಟು ಜನರು ಕ್ರಿಕೆಟ್ ವೀಕ್ಷಿಸಬೇಕು ಎಂದು ಅಭಿಮಾನಿಗಳು ನಿರ್ಧರಿಸಿದ್ದಾರೆ. ಇದಲ್ಲದೇ ವಿರಾಟ್ ಕೊಹ್ಲಿಯ ಮಾಸ್ಕ್ ಗಳನ್ನೂ ವ್ಯಾಪಕವಾಗಿ ಹಂಚಲಾಗುತ್ತಿದೆ.


ಇದನ್ನೂ ಓದಿ: ಮಹಿ ಜೊತೆಗಿನ ಸಂಬಂಧದ ಬಗ್ಗೆ ಯುವರಾಜ್ ಸಿಂಗ್ ಹೇಳಿದ್ದೇನು?


ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟಲು ಕೊಹ್ಲಿ ಕಾತುರರಾಗಿ ಕಾಯುತ್ತಿದ್ದಾರೆ. ಇಂದು ಒಂದು ವೇಳೆ ಶತಕ ಬಾರಿಸಿ ದಾಖಲೆ ಮುರಿದರೆ, ಈ ದಿನ ಕೊಹ್ಲಿ ಮತ್ತು ಅಭಿಮಾನಿಗಳ ಪಾಲಿಗೆ ಅವಿಸ್ಮರಣೀಯವಾಗೋದು ಖಂಡಿತ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ