IND vs NZ, World Cup 2023: ನ್ಯೂಜಿಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಈ ಮೂಲಕ ಸತತ 5 ಪಂದ್ಯಗಳಲ್ಲಿ ಗೆದ್ದು ಅಜೇಯರಾಗಿ ಉಳಿದಿದೆ.


COMMERCIAL BREAK
SCROLL TO CONTINUE READING

ಟಾಸ್ ಗೆದ್ದ ಭಾರತ, ನ್ಯೂಜಿಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 50 ಓವರ್’ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 273 ರನ್ ಕಲೆಹಾಕಿತ್ತು. ಗೆಲುವಿನ ಗುರಿ ಬೆನ್ನತ್ತಿದ ಭಾರತ 48 ಓವರ್’ಗಳಲ್ಲಿ 6 ವಿಕೆಟ್ ಕಳೆದುಕೊಂಡು 274 ರನ್ ಕಲೆ ಹಾಕಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಜವಾಬ್ದಾರಿಯುವ ಬ್ಯಾಟಿಂಗ್ ಮಾಡಿದ್ದು ಭಾರತದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.


ಇದನ್ನೂ ಓದಿ: ಆಡಿದ ಮೊದಲ ಪಂದ್ಯದಲ್ಲೇ 5 ವಿಕೆಟ್ ಉಡೀಸ್: ವಿಶ್ವಕಪ್’ನಲ್ಲಿ ಇದುವರೆಗೆ ಯಾರೂ ಬರೆಯದ ದಾಖಲೆ


ಈ ಗೆಲುವಿನ ಬಳಿಕ ಟೀಂ ಇಂಡಿಯಾ 20 ವರ್ಷಗಳ ಬಳಿಕ ವಿಶ್ವಕಪ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿದೆ.


ಮೊಹಮ್ಮದ್ ಶಮಿ ದಾಖಲೆ:


ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ವಿಶ್ವಕಪ್’ನಲ್ಲಿ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ 5 ವಿಕೆಟ್ ಪಡೆದು ಕಿವೀಸ್ ತಂಡವನ್ನು 273 ರನ್‌’ಗಳಿಗೆ ಸೀಮಿತಗೊಳಿಸಿದ್ದಾರೆ. ಶಮಿ ತಮ್ಮ ವೃತ್ತಿಜೀವನದ ಮೂರನೇ ಏಕದಿನ ವಿಶ್ವಕಪ್ ಆಡುತ್ತಿದ್ದಾರೆ. ಇಂದು ಕಬಳಿಸಿದ 5 ವಿಕೆಟ್ ಸೇರಿ ಇದುವರೆಗೆ 36 ವಿಕೆಟ್‌’ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ. ಇದು ಅವರ 12ನೇ ವಿಶ್ವಕಪ್ ಪಂದ್ಯವಾಗಿದೆ. ಇದರೊಂದಿಗೆ ಏಕದಿನ ವಿಶ್ವಕಪ್‌ನಲ್ಲಿ ಎರಡನೇ ಬಾರಿಗೆ 5 ವಿಕೆಟ್ ಕಬಳಿಸಿದ್ದಾರೆ. ಈ ಸಾಧನೆ ಮಾಡಿದ (ಏಕದಿನ ವಿಶ್ವಕಪ್‌’ನಲ್ಲಿ ಎರಡು ಬಾರಿ 5 ವಿಕೆಟ್ ಪಡೆದ) ಏಕೈಕ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.


ಇದನ್ನೂ ಓದಿ: ರವೀಂದ್ರ ಜಡೇಜಾ ಕ್ಯಾಚ್ ಬಿಟ್ಟಿದ್ದಕ್ಕೆ ಪತ್ನಿ ರಿವಾಬಾ ರಿಯಾಕ್ಷನ್‌ ಹೇಗಿತ್ತು ಗೊತ್ತಾ..? ವಿಡಿಯೋ ನೋಡಿ


ಜಿಂಕೆಯಂತೆ ಹಾರಿ ಕ್ಯಾಚ್ ಪಡೆದ ಅಯ್ಯರ್:


ಈ ಪಂದ್ಯದ 4ನೇ ಓವರ್‌’ನಲ್ಲಿ ಮೊಹಮ್ಮದ್ ಸಿರಾಜ್ ಎಸೆತವನ್ನು ಕಾನ್ವೇ ಲೆಗ್ ಸೈಡ್‌’ಗೆ ಹೊಡೆದರು. ಈ ವೇಳೆ ಚೆಂಡಿಗಾಗಿ ಕಾಯುತ್ತಿದ್ದ ಅಯ್ಯರ್‌, ಜಿಂಕೆಯಂತೆ ಹಾರಿ ಕ್ಯಾಚ್‌ ಹಿಡಿದರು. ವಿಕೆಟ್‌ ಪಡೆದ ತಕ್ಷಣ ಸಂಭ್ರಮಿಸಿದ ಅಯ್ಯರ್‌, ಈ ಬಾರಿ ತಮಗೆ ಪಂದ್ಯದ ಫೀಲ್ಡರ್ ಪದಕವನ್ನು ನೀಡುವಂತೆ ಡ್ರೆಸ್ಸಿಂಗ್ ಕೋಣೆಯತ್ತ ಸನ್ನೆ ಮಾಡಿ ತೋರಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.