Rohit Sharma on Team India: “ತಂಡವಾಗಿ ಯಶಸ್ವಿಯಾಗಲು ಪ್ರತಿಯೊಬ್ಬರು ತಮ್ಮ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ” ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಭಾರತ ಸೆಣಸಾಡಲಿದೆ. ಅಂದಹಾಗೆ 20 ವರ್ಷಗಳಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆದ್ದಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಬದಲಿಗೆ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಈ ಆಟಗಾರ: ಕೆಎಲ್ ರಾಹುಲ್


ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ರೋಹಿತ್, “ಆಟಗಾರರನ್ನು ನಿರ್ವಹಿಸುವಾಗ ಮೊದಲು ವ್ಯಕ್ತಿಯನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ನಿರ್ದಿಷ್ಟ ವ್ಯಕ್ತಿಯ ಇಷ್ಟ-ಕಷ್ಟಗಳ ಬಗ್ಗೆ ನಮಗೆ ತಿಳಿಯಬೇಕು. ಏಕೆಂದರೆ ತಂಡವು ಕೇವಲ ಒಬ್ಬ ಅಥವಾ ಇಬ್ಬರು ವ್ಯಕ್ತಿಗಳ ಮೇಲೆ ಅವಲಂಬಿತವಾಗಿರುವುದಿಲ್ಲ. ಇದು ಪ್ರತಿಯೊಬ್ಬರಿಗೂ ಸಂಬಂಧಿಸಿದೆ” ಎಂದು ರೋಹಿತ್ ಹೇಳಿದರು.


“ಚಾಂಪಿಯನ್‌ ಶಿಪ್ ಗೆಲ್ಲುವ ತಂಡದಲ್ಲಿ ಪ್ರತಿಯೊಬ್ಬ ಆಟಗಾರನು ಪಾತ್ರವನ್ನು ವಹಿಸುವ ಅಗತ್ಯವಿದೆ. ಪ್ರತಿಯೊಬ್ಬರನ್ನು ಉತ್ತಮ ಜಾಗದಲ್ಲಿ ಇಡುವುದು ಮುಖ್ಯ” ಎಂದಿದ್ದಾರೆ.


20 ವರ್ಷಗಳಿಂದ ಭಾರತ ಇಂಗ್ಲೆಂಡ್ ವಿರುದ್ಧ ಗೆದ್ದಿಲ್ಲ. ಈ ವಿಚಾರದ ಬಗ್ಗೆಯೂ ಮಾತನಾಡಿದ ಕ್ಯಾಪ್ಟನ್, "ನಾನು ಪ್ರಯತ್ನಿಸುತ್ತೇನೆ. ಅವರ ಸ್ಥಾನದಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ನನ್ನ ವೈಯಕ್ತಿಕ ಅನುಭವಗಳ ಮೂಲಕ ಹೋಗುತ್ತೇನೆ ಮತ್ತು ತಂಡವು ಯಶಸ್ವಿಯಾಗಲು ಏನು ಬೇಕು ಎಂದು ಅರ್ಥಮಾಡಿಕೊಂಡಿದ್ದೇನೆ ”ಎಂದು ರೋಹಿತ್ ಹೇಳಿದರು.


ಇದನ್ನೂ ಓದಿ: ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಒಂದೇ ವಾರದಲ್ಲಿ ಸುಲಭವಾಗಿ ಕರಗುತ್ತೆ ಸೊಂಟದ ಬೊಜ್ಜು!


ಪ್ರಸ್ತುತ ಐದು ಪಂದ್ಯಗಳನ್ನು ಗೆದ್ದ ಭಾರತ 10 ಅಂಕಗಳೊಂದಿಗೆ +1.353 ನೆಟ್ ರನ್-ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ ನಾಲ್ಕು ಪಂದ್ಯಗಳನ್ನು ಗೆದ್ದು ಎರಡು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ