World Cup Semifinal: ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಿದೆ. ನವೆಂಬರ್ 15 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಬೇಕು ಎಂಬುದೊಂದೇ ಇಡೀ ದೇಶದ ಪ್ರಾರ್ಥನೆಯಾಗಿದೆ. ಈ ಪಂದ್ಯದ ಬಗ್ಗೆ ಜ್ಯೋತಿಷಿ ಸುಮಿತ್ ಬಜಾಜ್ ಯಾವ ತಂಡ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಭವಿಷ್ಯ ನುಡಿದಿದ್ದಾರೆ. ಯಾವ ತಂಡ ಮೊದಲು ಬ್ಯಾಟ್ ಮಾಡಲಿದೆ ಮತ್ತು ತಂಡದ ಯಾವ ಆಟಗಾರರು ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕೂಡ ಅವರು ಹೇಳಿದ್ದಾರೆ.
ಈ ತಂಡ ಮೊದಲು ಬೌಲಿಂಗ್ ಮಾಡಲಿದೆ: ಜ್ಯೋತಿಷಿ ಸುಮಿತ್ ಬಜಾಜ್ ಅವರ ಪ್ರಕಾರ, ಟೀಮ್ ಇಂಡಿಯಾ ಮುಂಬೈನಲ್ಲಿ ಸೆಮಿಫೈನಲ್ ಮತ್ತು ಅಹಮದಾಬಾದ್ನಲ್ಲಿ ಫೈನಲ್ ಆಡಲಿದೆಯಂತೆ. ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಗೆಲ್ಲಲಿದೆ ಎಂದು ಹೇಳಿದ್ದಾರೆ. ಭಾರತ ಮೊದಲು ಬೌಲಿಂಗ್ ಮಾಡಿ ನಂತರ ಚೇಸ್ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ. 47-48 ನೇ ಓವರ್ನಲ್ಲಿ ನ್ಯೂಜಿಲೆಂಡ್ ನೀಡಿದ ಗುರಿಯನ್ನು ಟೀಂ ಇಂಡಿಯಾ ತಲುಪಬಹುದು. ನ್ಯೂಜಿಲೆಂಡ್ 250-270 ಗುರಿಯನ್ನು ಭಾರತ ತಂಡಕ್ಕೆ ನೀಡಬಹುದು ಎಂದಿದ್ದಾರೆ.
ಇದನ್ನೂ ಓದಿ : ಭಾರತ vs ನ್ಯೂಜಿಲೆಂಡ್ ಸೆಮಿಫೈನಲ್’ನಲ್ಲಿ ಗೆಲ್ಲೋದು ಇದೇ ತಂಡ: ಮುಲಾಜಿಲ್ಲದೆ ಕಾರಣ ಸಮೇತ ಭವಿಷ್ಯ ನುಡಿದ ಭಜ್ಜಿ
ಕ್ಯಾಪ್ಟನ್ನ ಜಾತಕ ಬಹಳ ಮುಖ್ಯ : ಅಷ್ಟೇ ಅಲ್ಲ, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಮತ್ತು ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಕ್ಯಾಪ್ಟನ್ ಜಾತಕ ಬಹಳ ಮುಖ್ಯ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಂಡದ ಪ್ರದರ್ಶನದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಫೈನಲ್ ನಲ್ಲಿ ಟೀಂ ಇಂಡಿಯಾ ಗೆಲುವಿಗೆ ನೆರವಾಗಲಿದ್ದಾರೆ.
ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಿದರು. ಇನ್ನು ನ್ಯೂಜಿಲೆಂಡ್ ತಂಡದ ಮಟ್ಟಿಗೆ ಸ್ಯಾಂಟ್ನರ್, ಕಾನ್ವೆಯಂತಹ ಕೆಲ ಆಟಗಾರರು ಉತ್ತಮ ಪ್ರದರ್ಶನ ನೀಡಲಿದ್ದಾರೆ. ರಚಿನ್ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುವುದಿಲ್ಲ.
ಟೀಂ ಇಂಡಿಯಾಗೆ ಈ ಪಂದ್ಯದಲ್ಲಿ ಸುಲಭ ಗೆಲುವು ದಕ್ಕುವುದಿಲ್ಲ. ಟೀಂ ಇಂಡಿಯಾ ಎಲ್ಲ ಸವಾಲುಗಳನ್ನು ಎದುರಿಸಲಿದೆ ಎಂದಿದ್ದಾರೆ. ಈ ಭವಿಷ್ಯ ಎಷ್ಟರ ಮಟ್ಟಿಗೆ ನಿಜವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ : ರೋಹಿತ್ ಶರ್ಮಾ ಅವರ ನೆಚ್ಚಿನ ಈ ಆಟಗಾರ ಸೆಮಿಫೈನಲ್ನಲ್ಲಿ ಆಡಬಹುದೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.