ಧರ್ಮಶಾಲಾದಲ್ಲಿ ಗುಡುಗು ಸಹಿತ ಭಾರೀ ಮಳೆ: ಭಾರತ-ನ್ಯೂಜಿಲೆಂಡ್ ಪಂದ್ಯ ನಡೆಯೋದೇ ಡೌಟ್…!
Pitch Report and weather update: ನ್ಯೂಜಿಲೆಂಡ್ ಮತ್ತು ಭಾರತ ಎರಡೂ ತಮ್ಮ ಮೊದಲ ನಾಲ್ಕು ಪಂದ್ಯಗಳನ್ನು ಗೆದ್ದಿವೆ. ಆದರೆ ಉತ್ತಮ ನೆಟ್ ರನ್ ರೇಟ್‌ನಿಂದಾಗಿ, ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ನಂಬರ್-1 ಮತ್ತು ಭಾರತವು ಅಂಕಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದೆ.
Pitch Report and weather update: ವಿಶ್ವಕಪ್’ನ 21 ನೇ ಪಂದ್ಯವು ತುಂಬಾ ವಿಶೇಷವಾಗಿರಲಿದೆ. ಏಕೆಂದರೆ ಈ ಪಂದ್ಯಾವಳಿಯಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಸೋಲದ ಎರಡು ತಂಡಗಳು ಮುಖಾಮುಖಿಯಾಗಲಿವೆ. 2023ರ ವಿಶ್ವಕಪ್’ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇದುವರೆಗೆ ಯಾವೊಂದು ತಂಡದ ವಿರುದ್ಧವೂ ಸೋಲು ಕಂಡಿಲ್ಲ.
ಇದನ್ನೂ ಓದಿ: “ಕೊಹ್ಲಿಯದ್ದು ಸ್ವಾರ್ಥದ ಸೆಂಚುರಿ..!- ವಿರಾಟ್ ಶತಕದಾಟದ ಬಗ್ಗೆ ಚೇತೇಶ್ವರ ಪೂಜಾರ ಹೇಳಿದ್ದೇನು?
ನ್ಯೂಜಿಲೆಂಡ್ ಮತ್ತು ಭಾರತ ಎರಡೂ ತಮ್ಮ ಮೊದಲ ನಾಲ್ಕು ಪಂದ್ಯಗಳನ್ನು ಗೆದ್ದಿವೆ. ಆದರೆ ಉತ್ತಮ ನೆಟ್ ರನ್ ರೇಟ್‌ನಿಂದಾಗಿ, ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ನಂಬರ್-1 ಮತ್ತು ಭಾರತವು ಅಂಕಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದೆ. ಇನ್ನು ಈ ಪಂದ್ಯ ಧರ್ಮಶಾಲಾದ ಎಚ್’ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ.
ವೇಗದ ಬೌಲರ್’ಗಳಿಗೆ ಈ ಮೈದಾನ ಸಹಾಯ ಮಾಡಲಿದೆ. ಇನ್ನು ಬ್ಯಾಟ್ಸ್’ಮನ್’ಗಳಿಗೂ ಈ ಮೈದಾನ ಉತ್ತಮವಾಗಿದೆ. ಇನ್ನು ಈ ಮೈದಾನವು ಇತರ ಮೈದಾನಗಳಿಗಿಂತ ಚಿಕ್ಕದ್ದು, ಹಾಗಾಗಿಯೇ ಇಲ್ಲಿಯೂ ಬೌಂಡರಿ, ಸಿಕ್ಸರ್’ಗಳ ಮಳೆ ಕಾಣಬಹುದಾಗಿದೆ.
ಈ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೆ ಈ ಮೈದಾನದಲ್ಲಿ ಒಟ್ಟು 3 ಪಂದ್ಯಗಳನ್ನು ಆಡಲಾಗಿದೆ. ಇದರಲ್ಲಿ ಗರಿಷ್ಠ ಸ್ಕೋರ್ 364 ರನ್ ಆಗಿದ್ದರೆ, ಕಡಿಮೆ ಸ್ಕೋರ್ 156 ರನ್.
ಹವಾಮಾನ ಇಲಾಖೆಯ ಪ್ರಕಾರ, ಭಾನುವಾರದಂದು ಇಲ್ಲಿ ವಾತಾವರಣದಲ್ಲಿ ಬದಲಾವಣೆ ಕಂಡುಬರಬಹುದು. ಇಂದು ಗುಡುಗು ಮಳೆ ಇದ್ದರೂ ಸಹ, ಪಂದ್ಯದ ವೇಳೆಗೆ ಮಳೆ ಬೀಳುವ ಸಾಧ್ಯತೆ ಕಡಿಮೆ ಇದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಔಟ್: ಉಪನಾಯಕನಾಗಿ 31ರ ಹರೆಯದ ಬಲಗೈ ಬ್ಯಾಟರ್’ಗೆ ಅವಕಾಶ
ನ್ಯೂಜಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ ಮತ್ತು ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಮ್ಯಾಟ್ ಹೆನ್ರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.