India vs New zealand: ವಿಶ್ವಕಪ್‌ 2023 ರ ನಾಕೌಟ್ ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಇದೀಗ ಎಲ್ಲರ ದೃಷ್ಟಿಯೂ ಹವಾಮಾನದತ್ತ ನೆಟ್ಟಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಸೆಮಿಸ್‌ ತಲುಪಿದೆ.


COMMERCIAL BREAK
SCROLL TO CONTINUE READING

ವಿಶ್ವಕಪ್ ಸೆಮಿಫೈನಲ್‌ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2019ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಭಾರತವನ್ನು 18 ರನ್‌ಗಳಿಂದ ಸೋಲಿಸಿ ವಿಶ್ವಕಪ್‌ನಿಂದ ಹೊರಹಾಕಿತ್ತು. 


ಇದನ್ನೂ ಓದಿ : ಈ 2 ಆಟಗಾರರನ್ನು ಕೈಬಿಟ್ಟ ರೋಹಿತ್ ಶರ್ಮಾ.. ಸೆಮಿಫೈನಲ್ ಪಂದ್ಯಕ್ಕೆ ಟೀಮ್‌ ಇಂಡಿಯಾ ಪ್ಲೇಯಿಂಗ್‌ 11 ಇದೇ.!


ಸೆಮಿಫೈನಲ್ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮಧ್ಯಾಹ್ನ 2:00 ಗಂಟೆಗೆ ಪ್ರಾರಂಭವಾಗುತ್ತದೆ. ಇದೇ ಮೈದಾನದಲ್ಲಿ ಭಾರತ ಶ್ರೀಲಂಕಾ ವಿರುದ್ಧ ಟೂರ್ನಿಯಲ್ಲಿ 302 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು. 


ಪಿಚ್ ಹೇಗಿರಲಿದೆ?


ಮುಂಬೈನ ವಾಂಖೆಡೆ ಸ್ಟೇಡಿಯಂ ಹೆಚ್ಚು ಸ್ಕೋರಿಂಗ್ ಪಂದ್ಯಗಳಿಗೆ ಹೆಸರುವಾಸಿಯಾಗಿದೆ. ಸಣ್ಣ ಬೌಂಡರಿ ಗೆರೆಯೊಂದಿಗೆ ಬ್ಯಾಟಿಂಗ್ ಮಾಡಲು ಪಿಚ್ ಸೂಕ್ತವಾಗಿದೆ. ಇದು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಸುಲಭವಾಗಿ ಹೊಡೆಯಲು ಅನುವು ಮಾಡಿಕೊಡುತ್ತದೆ. ಬೌಲಿಂಗ್ ದೃಷ್ಟಿಕೋನದಿಂದ ನೋಡಿದರೆ ಶಾರ್ಟ್ ಬೌಂಡರಿಗಳು ಸ್ಪಿನ್ ಬೌಲರ್ ಗಳಿಗೆ ಸಮಸ್ಯೆಯಾಗಬಹುದು. ಎರಡನೇ ಇನ್ನಿಂಗ್ಸ್‌ನಲ್ಲಿ ವೇಗದ ಬೌಲರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ. ಈ ಕಾರಣಕ್ಕೆ ಭಾರತ ಶ್ರೀಲಂಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿತ್ತು.


ಈ ಪಿಚ್‌ನಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 261 ರನ್ ಆಗಿದೆ. ಈ ಪಿಚ್‌ನಲ್ಲಿ ಒಟ್ಟು 14 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದು, 13 ಪಂದ್ಯಗಳಲ್ಲಿ ಚೇಸಿಂಗ್‌ ಮಾಡಿದ ತಂಡ ಗೆಲುವು ಸಾಧಿಸಿವೆ. 2015 ರಲ್ಲಿ ಆತಿಥೇಯ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಮಾಡಿದ 438/4 ವಾಂಖೆಡೆ ಸ್ಟೇಡಿಯಂನಲ್ಲಿ ಅತ್ಯಧಿಕ ಸ್ಕೋರ್ ಆಗಿದೆ.


ಹವಾಮಾನ ಹೇಗಿರುತ್ತದೆ?


ಹವಾಮಾನ ವೆಬ್‌ಸೈಟ್ ಅಕ್ಯುವೆದರ್ ಪ್ರಕಾರ, ಮುಂಬೈನಲ್ಲಿ ಬಿಸಿಲು ಇರಲಿದೆ. ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಗಂಟೆಗೆ 14 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಶೇ.44ರಷ್ಟು ತೇವಾಂಶವಿರುವುದರಿಂದ ಮಳೆಯಾಗುವ ಮುನ್ಸೂಚನೆಯಿಲ್ಲ. ರಾತ್ರಿ ವೇಳೆ ಇಬ್ಬನಿ ಬೀಳುವುದು ಖಚಿತ. ಹೀಗಾಗಿ ಸಂಜೆ ಹೊತ್ತು ಬೌಲಿಂಗ್ ಮಾಡುವ ತಂಡವು ಕೊನೆಯ 10-15 ಓವರ್‌ಗಳಲ್ಲಿ ಸಮಸ್ಯೆಗಳನ್ನು ಎದುರಿಸಬಹುದು.


ಪಂದ್ಯ ಪೂರ್ಣಗೊಳ್ಳದಿದ್ದರೆ ಏನಾಗುತ್ತದೆ?


ಈ ಪಂದ್ಯಕ್ಕೆ ಯಾವುದೇ ಮೀಸಲು ದಿನವನ್ನು ಇರಿಸಲಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದ ಪಂದ್ಯ ಸ್ಥಗಿತಗೊಂಡರೆ ಡಕ್ವರ್ತ್ ಲೂಯಿಸ್ ನಿಯಮದಡಿ ಎರಡೂ ಇನಿಂಗ್ಸ್‌ಗಳಲ್ಲಿ ಕನಿಷ್ಠ 20 ಓವರ್‌ಗಳನ್ನು ಆಡುವ ಮೂಲಕ ಅಂಪೈರ್ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಪ್ರಯತ್ನಿಸುತ್ತಾರೆ. ಇದು ಕೂಡ ಸಾಧ್ಯವಾಗದಿದ್ದರೆ ಈ ಪಂದ್ಯ ರದ್ದಾಗಿ ಭಾರತ ತಂಡ ಫೈನಲ್ ತಲುಪಲಿದೆ, ಏಕೆಂದರೆ ಭಾರತ ಎಲ್ಲಾ ಲೀಗ್‌ ಪಂದ್ಯಗಳನ್ನು ಗೆದ್ದು ಪಾಯಿಂಟ್  ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ನ್ಯೂಜಿಲೆಂಡ್ ತಂಡ ಐದು ಗೆಲುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.


ಇದನ್ನೂ ಓದಿ : ಒಂದೇ ಓವರ್ ನಲ್ಲಿ ಆರು ವಿಕೆಟ್ ಪತನ ! ಇದು ಹ್ಯಾಟ್ರಿಕ್ ಅಲ್ಲ ಡಬಲ್ ಹ್ಯಾಟ್ರಿಕ್ ದಾಖಲೆ  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.