ಅಹಮದಾಬಾದ್: ನವೆಂಬರ್ 19 ಭಾನುವಾರ ಪ್ರತಿಯೊಬ್ಬ ಭಾರತೀಯನಿಗೂ ವಿಶೇಷ ದಿನವಾಗಿರಲಿದೆ. ಏಕೆಂದರೆ ಈ ದಿನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಈ ದಿನ ಭಾರತ ತಂಡ 12 ವರ್ಷಗಳ ಬಳಿಕ ಮತ್ತೊಮ್ಮೆ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯವನ್ನಾಡಲಿದೆ. 2011ರಲ್ಲಿ ಶ್ರೀಲಂಕಾ, ಈ ಬಾರಿ ಆಸ್ಟ್ರೇಲಿಯಾ. ಒಂದೇ ಒಂದು ಕನಸು... ಆ ಸುಂದರ ಮಿಂಚುವ ಟ್ರೋಫಿ ಗೆಲ್ಲಬೇಕೆಂಬುದು. ಆದರೆ, 2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ಗೂ ಮುನ್ನ ವಿಶೇಷ ಏರ್ ಶೋ ಆಯೋಜಿಸಲಾಗಿದೆ. (World Cup 2023 News In Kannada)
ಹೌದು, ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೂ ಮೊದಲು ಭಾರತೀಯ ವಾಯುಪಡೆಯ 'ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ' 'ಏರ್ ಶೋ' ಅನ್ನು ಪ್ರಸ್ತುತಪಡಿಸಲಿದೆ. ಅಧಿಕಾರಿಯೊಬ್ಬರು ಗುರುವಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಮೊಟೆರಾ ಪ್ರದೇಶದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್‌ನ ಮೊದಲ ಹತ್ತು ನಿಮಿಷಗಳ ಕಾಲ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ತನ್ನ ಸಾಹಸದಿಂದ ಜನರನ್ನು ರೋಮಾಂಚನಗೊಳಿಸಲಿದೆ ಎಂದು ರಕ್ಷಣಾ ಇಲಾಖೆಯ ಗುಜರಾತ್ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ತಿಳಿಸಿದ್ದಾರೆ.
ಇದನ್ನೂ ಓದಿ-ಜಯ್ ಷಾ ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳು ಮಾಡುತ್ತಿದ್ದಾರೆ, ಬಿಸಿಸಿಐ ಕಾರ್ಯದರ್ಶಿ ವಿರುದ್ಧ ರಣತುಂಗ ಆರೋಪ!
ವೈಮಾನಿಕ ಪ್ರದರ್ಶನದ ಅಭ್ಯಾಸ ಶುಕ್ರವಾರ ಮತ್ತು ಶನಿವಾರ ನಡೆಯಲಿದೆ ಎಂದು ಪಿಆರ್‌ಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬುಧವಾರ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತ ಈಗಾಗಲೇ ಏಕದಿನ ವಿಶ್ವಕಪ್ ಫೈನಲ್ ತಲುಪಿದೆ. ಕಳೆದ ಗುರುವಾರ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಸಾಮಾನ್ಯವಾಗಿ ಒಂಬತ್ತು ವಿಮಾನಗಳನ್ನು ಒಳಗೊಂಡಿರುತ್ತದೆ ಮತ್ತು ದೇಶಾದ್ಯಂತ ಹಲವಾರು ಏರ್ ಶೋಗಳನ್ನು ಪ್ರದರ್ಶಿಸಿದೆ.
ಭಾರತಕ್ಕೆ ತನ್ನ ಹಳೆ ಸೇಡು ತೀರಿಸಿಕೊಳ್ಳುವ ಅವಕಾಶ
ಸರಿಯಾಗಿ 20 ವರ್ಷಗಳ ಹಿಂದೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್‌ನಲ್ಲಿ ಫೈನಲ್ ಪಂದ್ಯ ನಡೆದಿತ್ತು. ಆ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದಿತ್ತು. ಆದರೆ, ಎರಡು ದಶಕಗಳ ನಂತರ ಮತ್ತೊಮ್ಮೆ ಎರಡೂ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಬಾರಿ ರೋಹಿತ್ ಸೇನೆ ಖಂಡಿತವಾಗಿಯೂ ಹಳೆಯ ಸೇಡು ತೀರಿಸಿಕೊಳ್ಳಲು ಬಯಸುತ್ತಿದೆ. ಅಹಮದಾಬಾದ್‌ನಲ್ಲಿ ಅವರನ್ನು ಸೋಲಿಸುವ ಮೂಲಕ ಮಿನುಗುವ ಟ್ರೋಫಿಯನ್ನು ಗೆಲ್ಲಲು ಟೀಮ್ ಇಂಡಿಯಾ ಹವಣಿಸುತ್ತಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.