IND vs AFG: ಅಫ್ಘಾನಿಸ್ತಾನದ ವಿರುದ್ಧ ಭಾರತದ ಪ್ಲೇಯಿಂಗ್ 11.. ಈ ಒಂದು ಬದಲಾವಣೆ ಫಿಕ್ಸ್‌..!

India vs Afghanistan World Cup 2023: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯ ನೋಡಲು ಜನರು ಕಾತುರರಾಗಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು....

Written by - Chetana Devarmani | Last Updated : Oct 11, 2023, 07:05 AM IST
  • ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯ
  • ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮ್ಯಾಚ್‌
  • ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
IND vs AFG: ಅಫ್ಘಾನಿಸ್ತಾನದ ವಿರುದ್ಧ ಭಾರತದ ಪ್ಲೇಯಿಂಗ್ 11.. ಈ ಒಂದು ಬದಲಾವಣೆ ಫಿಕ್ಸ್‌..! title=

World Cup 2023 IND vs AFG: ಇಂದು ವಿಶ್ವಕಪ್‌ 9ನೇ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳ ನಡುವೆ ಈ ಕದನ ನಡೆಯಲಿದೆ. ಬುಧವಾರ (ಅ.11) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯ ನೋಡಲು ಜನರು ಕಾತುರರಾಗಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಏನಿರಬಹುದು ಎಂದು ಊಹಿಸಲಾಗಿದೆ. ಈ ಬಾರಿ ತಂಡದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ ಎನ್ನಲಾಗ್ತಿದೆ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಶುಭ್​ಮನ್ ಗಿಲ್ ಈ ಪಂದ್ಯವನ್ನೂ ಆಡುತ್ತಿಲ್ಲ.  

ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಈ ಸ್ಟಾರ್ ಆಟಗಾರ ! ಟೀಂ ಇಂಡಿಯಾಗೆ ಮತ್ತೊಂದು ಸಂಕಷ್ಟ 

ಅಫ್ಘಾನಿಸ್ತಾನ್‌ ವಿರುದ್ಧ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಗಿಲ್‌ ಸ್ಥಾನಕ್ಕೆ ಈ  ಪಂದ್ಯದಲ್ಲೂ ಇಶಾನ್‌ ಕಿಶನ್‌ ಓಪನರ್‌ ಆಗಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, 5ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಆಡಲಿದ್ದಾರೆ.  

ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಆಲ್‌ ರೌಂಡರ್‌ಗಳಾಗಿ ಆಡಲಿದ್ದಾರೆ. ದೆಹಲಿಯ ಪಿಚ್‌ ಬ್ಯಾಟಿಂಗ್‌ಗೆ ಸಹಕಾರಿ ಆಗಿರುವ ಕಾರಣ ಹಿರಿಯ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಟೀಂ ನಲ್ಲೇ ಉಳಿಯುವ ಚಾನ್ಸ್‌ ಹೆಚ್ಚಾಗಿದೆ. ಸ್ಪಿನ್ನರ್​ ಆಗಿ ಕುಲ್ದೀಪ್ ಯಾದವ್, ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್​ಪ್ರೀತ್ ಬುಮ್ರಾ ಇಂದಿನ ಪಂದ್ಯದಲ್ಲಿ ಆಡಲಿದ್ದಾರೆ. 

ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:

ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: "ಬದುಕಿನಲ್ಲಿ ಅತಿಯಾಗಿ ಕಾಡಿದ್ದೇ ಈ ನೋವು" - ಮನದ ಭಾರ ಹೊರಹಾಕಿದ ಕೆ ಎಲ್ ರಾಹುಲ್ ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News