Jasprith Bumrah: ಶನಿವಾರ ಅಂದರೆ ಅಕ್ಟೋಬರ್ 14ರಂದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಹುದೊಡ್ಡ ಸಾಧನೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: ನವರಾತ್ರಿಯಲ್ಲಿ ಈ 5 ವಸ್ತುಗಳನ್ನು ಖರೀದಿಸಿದರೆ ಸಾಕ್ಷಾತ್ ದುರ್ಗೆಯೇ ಒಲಿದು ಮನೆಗೆ ಆಗಮಿಸುತ್ತಾಳೆ!


ಟಾಸ್ ಗೆದ್ದ ಭಾರತ, ಮೊದಲು ಬ್ಯಾಟಿಂಗ್ ಮಾಡಲು ಪಾಕಿಸ್ತಾನ ತಂಡವನ್ನು ಆಹ್ವಾನಿಸಿದ್ದರು. ಆದರೆ ಪಾಕ್ ತಂಡ ಕೇವಲ 191 ರನ್‌ ಗಳಿಸಿ ಆಲೌಟ್ ಆಯಿತು. ಇದಾದ ಬಳಿಕ ಭಾರತದ ಬ್ಯಾಟ್ಸ್‌’ಮನ್‌’ಗಳು 7 ವಿಕೆಟ್‌’ಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡರು. ರೋಹಿತ್ ಶರ್ಮಾ 86 ರನ್‌’ಗಳ ಗರಿಷ್ಠ ಇನ್ನಿಂಗ್ಸ್‌ಗಳನ್ನು ಆಡಿದರು.


ಈ ಪಂದ್ಯದಲ್ಲಿ ಬುಮ್ರಾ ತಮ್ಮ ಹೆಸರಿನಲ್ಲಿ 2 ವಿಕೆಟ್ ಪಡೆದರು. ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು ಮತ್ತು ಇದರೊಂದಿಗೆ ಇತಿಹಾಸ ನಿರ್ಮಿಸಿದ್ದಾರೆ. ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಈ ಪ್ರಶಸ್ತಿ ಪಡೆದ ಭಾರತದ ಎರಡನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.


1999 ರಲ್ಲಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದರ ನಂತರ, ಬುಮ್ರಾ ಈಗ 2023 ರಲ್ಲಿ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನು ಓದಿ: IND vs PAK ಪಂದ್ಯದಲ್ಲಿ ಅಖಾಡ ನಡುಗಿಸಿದ ಕುತೂಹಲಕಾರಿ ಘಟನೆಗಳು..! ವಿಡಿಯೋ ನೋಡಿ   


ಭಾರತಕ್ಕೆ ಸತತ ಮೂರನೇ ಗೆಲುವು:


ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ 2023 ರ ವಿಶ್ವಕಪ್‌ನಲ್ಲಿ ಸತತ ಮೂರನೇ ಗೆಲುವು ದಾಖಲಿಸಿದೆ. ಹ್ಯಾಟ್ರಿಕ್ ಗೆಲುವಿನೊಂದಿಗೆ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ನಂಬರ್-1 ಸ್ಥಾನಕ್ಕೇರಿದೆ. ಮುಂದಿನ ಪಂದ್ಯ ಅಕ್ಟೋಬರ್ 18 ರಂದು ಬಾಂಗ್ಲಾದೇಶದ ವಿರುದ್ಧ ನಡೆಯಲಿದೆ. ಅದರ ನಂತರ ನಾವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್‌’ನಂತಹ ತಂಡಗಳನ್ನು ಭಾರತ ಎದುರಿಸಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.