Team India, Vice Captain: ವಿಶ್ವಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಬಹುದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ತಂಡದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಪಾಂಡ್ಯ, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ. ಈ ಬೆನ್ನಲ್ಲೇ ಉಪನಾಯಕ ಸ್ಥಾನದಿಂದಲೂ ಅವರನ್ನು ಕೆಳಗಿಳಿಸಲಾಗಿದೆ. ಹೀಗಿರುವಾಗ ಅವರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾದ ಉಪನಾಯಕತ್ವವನ್ನು ಯಾರು ನಿಭಾಯಿಸುತ್ತಾರೆ ಎಂಬ ಪ್ರಶ್ನೆ ಅನೇಕ ಅಭಿಮಾನಿಗಳ ಮನದಲ್ಲಿ ಮೂಡಿರುವದು ಖಂಡಿತ.


ಇದನ್ನೂ ಓದಿ:  ಆಸೀಸ್ ವಿರುದ್ಧದ ಸೋಲಿಗೆ ಈತನೇ ಕಾರಣ ಎಂದ ಪಾಕ್ ನಾಯಕ ಬಾಬರ್ ಅಜಂ!


ಭಾರತದ ಆಲ್‌’ರೌಂಡರ್ ಹಾರ್ದಿಕ್ ಪಾಂಡ್ಯ ಪಾದದ ಗಾಯದಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಮುಂದಿನ ವಿಶ್ವಕಪ್ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ. ಗುರುವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದರು. ಇದಾದ ನಂತರ ಬಿಸಿಸಿಐ ಹಾರ್ದಿಕ್ ಅವರ ಪಾದದ ಸ್ಕ್ಯಾನ್ ಮಾಡಿತ್ತು. ಈ ಕಾರಣದಿಂದ ಅವರು ಚೇತರಿಸಿಕೊಳ್ಳಲು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ) ತೆರಳುತ್ತಿದ್ದಾರೆ.


ಅಕ್ಟೋಬರ್ 22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ವಿಶ್ವಕಪ್ ಪಂದ್ಯವನ್ನು ಆಡಬೇಕಾಗಿದೆ. ಬಿಸಿಸಿಐ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, 'ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಬಾಂಗ್ಲಾದೇಶ ವಿರುದ್ಧ ಫೀಲ್ಡಿಂಗ್ ಮಾಡುವಾಗ ಎಡ ಪಾದದ ಗಾಯಕ್ಕೆ ಒಳಗಾಗಿದ್ದಾರೆ. ಅವರಿಗೆ ಸ್ಕ್ಯಾನ್ ಮಾಡಲಾಗಿದ್ದು, ವಿಶ್ರಾಂತಿಗೆ ಸೂಚಿಸಲಾಗಿದೆ.


ತಂಡದ ಉಪನಾಯಕ ಯಾರು?


ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾದ ಉಪನಾಯಕರಾಗುವ ಎಲ್ಲಾ ಸಾಧ್ಯತೆ ಇದೆ. ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ರಾಹುಲ್ ನಾಯಕತ್ವ ವಹಿಸಿಕೊಂಡಿದ್ದರು.


ಇದನ್ನೂ ಓದಿ: ವಿರಾಟ್ ಶತಕದ ಮೊದಲ ಬಾಲ್ ವೈಡ್ ಕೊಡಲಿಲ್ಲ ಯಾಕೆ ಗೊತ್ತಾ? 2 ದಿನದ ಬಳಿಕ ಹೊರಬಿತ್ತು ಅಸಲಿ ಕಾರಣ!


ಬಿಸಿಸಿಐನ ವೈದ್ಯಕೀಯ ತಂಡ ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಗಮನಹರಿಸಿದೆ. ಇನ್ನು ಅಕ್ಟೋಬರ್ 29 ರಂದು ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧ ವಿಶ್ವಕಪ್ ಪಂದ್ಯವನ್ನು ಆಡಲಿದೆ ಭಾರತ. ಶ್ರೇಷ್ಠ ಓಪನರ್ ರೋಹಿತ್ ಶರ್ಮಾ ನಾಯಕತ್ವದ ತಂಡವು ಈ ಐಸಿಸಿ ಪಂದ್ಯಾವಳಿಯಲ್ಲಿ ಇದುವರೆಗೆ ಯಾವುದೇ ಪಂದ್ಯವನ್ನು ಸೋತಿಲ್ಲ ಎಂಬುದು ಉಲ್ಲೇಖನೀಯ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.