ಹಾರ್ದಿಕ್ ಪಾಂಡ್ಯ ಬದಲಿಗೆ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಈ ಆಟಗಾರ: ಕೆಎಲ್ ರಾಹುಲ್ ಹೇಳಿಕೆ

KL Rahul Press Conference: ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ವಿಶ್ವಕಪ್‌’ನಲ್ಲಿ ಪ್ರಶಸ್ತಿಯ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಈಗ ಸೆಮಿಫೈನಲ್‌’ನಲ್ಲಿ ರೇಸ್‌’ನಲ್ಲಿ ಉಳಿಯಲು ಹೋರಾಟ ನಡೆಸುತ್ತಿದೆ.

Written by - Bhavishya Shetty | Last Updated : Oct 28, 2023, 09:11 PM IST
    • ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ 2023 ಪಂದ್ಯ
    • ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ
    • ವಿಕೆಟ್‌ ಕೀಪರ್ ಬ್ಯಾಟ್ಸ್‌’ಮನ್ ಕೆಎಲ್ ರಾಹುಲ್ ಬಿಗ್ ಅಪ್‌ಡೇಟ್
ಹಾರ್ದಿಕ್ ಪಾಂಡ್ಯ ಬದಲಿಗೆ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಈ ಆಟಗಾರ: ಕೆಎಲ್ ರಾಹುಲ್ ಹೇಳಿಕೆ title=
KL Rahul

KL Rahul Press Conference: ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ 2023 ಪಂದ್ಯ ನಾಳೆ ಅಂದರೆ ಭಾನುವಾರ ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಭಾರತ ತಂಡದ ವಿಕೆಟ್‌ ಕೀಪರ್ ಬ್ಯಾಟ್ಸ್‌’ಮನ್ ಕೆಎಲ್ ರಾಹುಲ್ ಬಿಗ್ ಅಪ್‌ಡೇಟ್ ನೀಡಿದ್ದಾರೆ.

ಇದನ್ನೂ ಓದಿ: ಸೌತ್ ಆಫ್ರಿಕಾ ವಿರುದ್ಧ ಸೋತ ಪಾಕಿಸ್ತಾನಕ್ಕೆ ಹರ್ಭಜನ್ ಸಿಂಗ್ ಬೆಂಬಲ! ಟ್ವೀಟ್ ಮಾಡಿ ಹೇಳಿದ್ದೇನು?

ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ವಿಶ್ವಕಪ್‌’ನಲ್ಲಿ ಪ್ರಶಸ್ತಿಯ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಈಗ ಸೆಮಿಫೈನಲ್‌’ನಲ್ಲಿ ರೇಸ್‌’ನಲ್ಲಿ ಉಳಿಯಲು ಹೋರಾಟ ನಡೆಸುತ್ತಿದೆ.

ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯಕ್ಕೆ ಒಂದು ದಿನ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಲ್ ರಾಹುಲ್, “ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಲಭ್ಯರಿಲ್ಲ.  ಹೀಗಾಗಿ ಸೂರ್ಯಕುಮಾರ್ ಯಾದವ್‌’ಗೆ ಅವಕಾಶ ಸಿಗಬಹುದು” ಎಂದು ಹೇಳಿದ್ದಾರೆ.

“ವಿಶ್ವಕಪ್‌’ನಲ್ಲಿ ಇಂಗ್ಲೆಂಡ್ ನಿರೀಕ್ಷಿತ ಫಲಿತಾಂಶವನ್ನು ಪಡೆಯದಿದ್ದರೂ, ಅವರದು ಅಪಾಯಕಾರಿ ತಂಡವಾಗಿದೆ. ನಾವು ಯಾವುದೇ ತಂಡವನ್ನು ಲಘುವಾಗಿ ಪರಿಗಣಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಒಂದೇ ವಾರದಲ್ಲಿ ಸುಲಭವಾಗಿ ಕರಗುತ್ತೆ ಸೊಂಟದ ಬೊಜ್ಜು!

“ಇನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಇಲ್ಲಿಯವರೆಗೆ ನಾವು ವಿಶ್ವಕಪ್‌’ನಲ್ಲಿ ಉತ್ತಮವಾಗಿ ಚೇಸ್ ಮಾಡಿದ್ದೇವೆ. ಈಗ ನಾವು ಮೊದಲು ಬ್ಯಾಟಿಂಗ್ ಮಾಡುವ ಮೂಲಕ ಅದೃಷ್ಟ ಪರೀಕ್ಷೆ ಮಾಡಲಿದ್ದೇವೆ. ನಾನು ವಿಕೆಟ್ ಕೀಪಿಂಗ್ ಅನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಪ್ರತಿಯೊಬ್ಬರೂ ಫೀಲ್ಡಿಂಗ್ ಪದಕಗಳನ್ನು ಆನಂದಿಸುತ್ತಾರೆ. ಇದು ಆಟಗಾರರಲ್ಲಿ ಆತ್ಮವಿಶ್ವಾಸ ಮೂಡಿಸಿದೆ” ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News