Mohammed Shami: ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ವಿಶ್ವಕಪ್’ನಲ್ಲಿ ಇತಿಹಾಸ ಸೃಷ್ಟಿಸುವ ಸನಿಹದಲ್ಲಿದ್ದಾರೆ. 48 ವರ್ಷಗಳ ವಿಶ್ವಕಪ್‌’ನಲ್ಲಿ ಭಾರತದ ಯಾವುದೇ ಬೌಲರ್‌’ಗಳು ಮಾಡದ ಶ್ರೇಷ್ಠ ದಾಖಲೆಯನ್ನು ಶಮಿ ಮಾಡುವ ಸಮೀಪಕ್ಕೆ ಬಂದಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ನಡೆಯಲಿರುವ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ 2023 ರ ಪಂದ್ಯದಲ್ಲಿ ಮೊಹಮ್ಮದ್ ಶಮಿ ಈ ಶ್ರೇಷ್ಠ ದಾಖಲೆಯನ್ನು ಮಾಡಿದ ಭಾರತದ ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ.


ಇದನ್ನೂ ಓದಿ: ಮಾನಸಿಕವಾಗಿ ಕುಗ್ಗಿದ್ದ ಕೊಹ್ಲಿಗೆ ಶಕ್ತಿ ತುಂಬಿದ್ದೇ ಈ ವ್ಯಕ್ತಿಯ ಮಾತು!


ಐಸಿಸಿ ವಿಶ್ವಕಪ್ 2023 ರ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಕೊನೆಯ ಲೀಗ್ ಪಂದ್ಯ ನವೆಂಬರ್ 12 ರಂದು ದೀಪಾವಳಿಯ ದಿನದಂದೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದೆ.


ವೇಗದ ಬೌಲರ್ ಮೊಹಮ್ಮದ್ ಶಮಿ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್ ಪಡೆದರೆ, 48 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ 50 ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ. ವಿಶ್ವಕಪ್ ಇತಿಹಾಸದಲ್ಲಿ 50 ವಿಕೆಟ್‌’ಗಳ ಗಡಿ ಮುಟ್ಟಲು ಭಾರತದ ಯಾವುದೇ ಬೌಲರ್‌’ಗೆ ಸಾಧ್ಯವಾಗಿಲ್ಲ. ಮೊಹಮ್ಮದ್ ಶಮಿ ಪ್ರಸ್ತುತ ವಿಶ್ವಕಪ್‌ನಲ್ಲಿ 47 ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ.


ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಯಾರು?


ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌’ಗಳ ಕುರಿತು ಮಾತನಾಡುವುದಾದರೆ, ಆಸ್ಟ್ರೇಲಿಯಾದ ದಂತಕಥೆ ಬೌಲರ್ ಗ್ಲೆನ್ ಮೆಕ್‌ಗ್ರಾತ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಗ್ಲೆನ್ ಮೆಕ್‌ಗ್ರಾತ್ 48 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ 71 ವಿಕೆಟ್ ಪಡೆದಿದ್ದಾರೆ. ಶ್ರೀಲಂಕಾದ ಶ್ರೇಷ್ಠ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಹೆಸರು ಎರಡನೇ ಸ್ಥಾನದಲ್ಲಿದೆ. ಅವರು 68 ವಿಕೆಟ್’ಗಳನ್ನು ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಹೆಸರು ಮೂರನೇ ಸ್ಥಾನದಲ್ಲಿದ್ದು, 59 ವಿಕೆಟ್‌ಗಳನ್ನು ಉರುಳಿಸಿದ್ದಾರೆ.


ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್


1. ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ) - 71


2. ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ) - 68


3. ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ) - 59


4. ಲಸಿತ್ ಮಾಲಿಂಗ (ಶ್ರೀಲಂಕಾ) - 56


5. ವಾಸಿಂ ಅಕ್ರಮ್ (ಪಾಕಿಸ್ತಾನ) - 55


6. ಟ್ರೆಂಟ್ ಬೌಲ್ಟ್ (ನ್ಯೂಜಿಲೆಂಡ್) - 52


7. ಚಾಮಿಂದಾ ವಾಸ್ (ಶ್ರೀಲಂಕಾ) - 49


8. ಮೊಹಮ್ಮದ್ ಶಮಿ (ಭಾರತ) - 47


ಇದನ್ನೂ ಓದಿ:  ಮುಂದಿನ 2 ದಿನ ಈ ಭಾಗಗಳಲ್ಲಿ ಕುಂಭದ್ರೋಣ ಮಳೆ: ಮಿಂಚು-ಗುಡುಗು ಸಹಿತ ಜಲಪ್ರಳಯದ ಭೀತಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ