IPL 2024, Rachin Ravindra: ಪ್ರಸಕ್ತ ವಿಶ್ವಕಪ್’ನಲ್ಲಿ ಸದ್ದು ಮಾಡುತ್ತಿರುವ ನ್ಯೂಜಿಲೆಂಡ್’ನ ಸ್ಟಾರ್ ಆಲ್ ರೌಂಡರ್ ರಚಿನ್ ರವೀಂದ್ರ ಕಳೆದ ಒಂದೂವರೆ ತಿಂಗಳಿನಿಂದ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ. ಇದಕ್ಕೆ ಕಾರಣ ಈ ವರ್ಷದ ಐಪಿಎಲ್ ನಲ್ಲಿ ರಚಿನ್ ಆಡುತ್ತಾರೆ ಎಂಬ ವಿಷಯ, ಅಷ್ಟೇ ಅಲ್ಲದೆ, ರಾಯಲ್ ಚಾಲೆಂಜರ್ಸ್ ಪರವಾಗಿ ಅವರು ಆಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು.
ಇದನ್ನೂ ಓದಿ: ಅಬ್ಬರದ ನಡುವೆ ಶ್ರೇಷ್ಠ ದಾಖಲೆ ಬರೆದ ಭಾರತ: ವಿಶ್ವಕಪ್ ಇತಿಹಾಸದಲ್ಲೇ ಇದುವರೆಗೆ ಯಾರೂ ಮಾಡದ ದಾಖಲೆ
ಆದರೆ ಈ ಎಲ್ಲಾ ಊಹಾಪೋಹಗಳಿಗೆ ರಚಿನ್ ಉತ್ತರ ನೀಡಿದ್ದಾರೆ. ರಚಿನ್ ರವೀಂದ್ರ ಅವರು ಭಾರತೀಯ ಮೂಲದ ವ್ಯಕ್ತಿ ಎಂಬುದು ಗಮನಾರ್ಹ ಸಂಗತಿ. ಒಂದು ವೇಳೆ ರಚಿನ್ ರವೀಂದ್ರ ಐಪಿಎಲ್’ಗೆ ಎಂಟ್ರಿ ಪಡೆದರೆ ಜಡೇಜಾ ರೀತಿ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಪಡೆಯುವುದರಲ್ಲಿ ಅನುಮಾನವಿಲ್ಲ.
ರಚಿನ್ ರವೀಂದ್ರ ಹೇಳೋದೇನು?
“ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ನನಗೆ ಉತ್ತಮ ಬೆಂಬಲ ನೀಡಿದ್ದಾರೆ. ಬೆಂಬಲ ನೀಡಿದ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದ್ದಾರೆ. ನಾನು ಇಲ್ಲಿ ಹೆಚ್ಚಿನ ಕ್ರಿಕೆಟ್ ಆಡಲು ಎದುರು ನೋಡುತ್ತಿದ್ದೇನೆ” ಎಂದು ರಚಿನ್ ಹೇಳಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್’ಸಿಬಿ) ಪರ ಆಡುವ ಸುಳಿವು ನೀಡಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರನ್ನು ಹೊಗಳಿ ಅವರೊಂದಿಗೆ ಆಡುವ ಆಸೆಯನ್ನು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಒಂದೇ ಒಂದು ವರ್ಷದಲ್ಲಿ ಇಷ್ಟೊಂದು ಸಿಕ್ಸರ್ ಬಾರಿಸಿದ ಏಕೈಕ ಕ್ರಿಕೆಟಿಗ ರೋಹಿತ್ ಶರ್ಮಾ!
ಅಂದಹಾಗೆ ಬಹುನಿರೀಕ್ಷಿತ IPL 2024 ಹರಾಜು ಡಿಸೆಂಬರ್ 19 ರಂದು ನಡೆಯಲಿದೆ. ಐಪಿಎಲ್ ಇತಿಹಾಸದಲ್ಲೇ ಪ್ರಥಮ ಬಾರಿಗೆ ವಿದೇಶದಲ್ಲಿ ಅಂದರೆ ದುಬೈನಲ್ಲಿ ಹರಾಜು ನಡೆಯುತ್ತಿದ್ದು, ಎಲ್ಲರ ನಿರೀಕ್ಷೆ ಮುಗಿಲು ಮುಟ್ಟಿದೆ. ಈ ವರ್ಷದ ಐಪಿಎಲ್‌ನಿಂದ ಫ್ರಾಂಚೈಸಿ ಯಾವ ಆಟಗಾರರನ್ನು ಬಿಡುಗಡೆ ಮಾಡುತ್ತದೆ ಎಂಬುದು ಸಹ ಮುಖ್ಯವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ