Rashid Khan dance with Irfan Pathan : ಐಸಿಸಿ ವಿಶ್ವಕಪ್ 2023 ರಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಪಂದ್ಯದ ಫಲಿತಾಂಶವು ಅನೇಕ ಜನರನ್ನು ಆಶ್ಚರ್ಯಗೊಳಿಸಿದೆ. ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಫ್ಘಾನಿಸ್ತಾನ ಪಾಕಿಸ್ತಾನದ ವಿರುದ್ಧ ಜಯ ದಾಖಲಿಸಿದೆ. 2023ರ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ ತಂಡದ ಎರಡನೇ ಪ್ರಮುಖ ಗೆಲುವು ಇದಾಗಿದೆ. ಅಫ್ಘಾನಿಸ್ತಾನ ಈ ಹಿಂದೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಗೆದ್ದಿತ್ತು. ಅಫ್ಘಾನಿಸ್ತಾನದ ಗೆಲುವಿನ ನಂತರ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಮತ್ತು ಅಫ್ಘಾನ್ ಸ್ಪಿನ್ನರ್ ರಶೀದ್ ಖಾನ್ ಜೊತೆಯಾಗಿ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: “ನನ್ನನ್ನು ಪಾಕಿಸ್ತಾನಿ ಎಂದು ಕರೆಯಬೇಡಿ!”… ಪಾಕ್ ಮಾಜಿ ಕ್ರಿಕೆಟಿಗ ಹೀಗಂದಿದ್ದೇಕೆ?
ಇದು ಪಾಕಿಸ್ತಾನಕ್ಕೆ ಅತ್ಯಂತ ಅವಮಾನಕರ ಸೋಲಾಗಿದೆ. ಇದು 2023ರ ಐಸಿಸಿ ವಿಶ್ವಕಪ್ನಲ್ಲಿ ಪಾಕಿಸ್ತಾನದ ಸತತ ಮೂರನೇ ಸೋಲು. ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ ವಿರುದ್ಧ ಗೆಲುವು ದಾಖಲಿಸುವ ಮೂಲಕ ಪಾಕಿಸ್ತಾನವು ಪಂದ್ಯಾವಳಿಯನ್ನು ಅದ್ಭುತವಾಗಿ ಪ್ರಾರಂಭಿಸಿತ್ತು, ಆದರೆ ಅದರ ನಂತರ ಅದು ಮೊದಲು ಭಾರತದ ಜೊತೆ, ನಂತರ ಆಸ್ಟ್ರೇಲಿಯಾ ಮತ್ತು ಈಗ ಅಫ್ಘಾನಿಸ್ತಾನದ ಜೊತೆ ಸೋಲಿನ ರುಚಿಯನ್ನು ಅನುಭವಿಸಬೇಕಾಯಿತು.
Love this, an excited and Proud moment for Afghanistan, Thank you #BlueTiggers
A Historical and sweet victory for Afghanistan in cricket's world @IrfanPathan @rashidkhan_19
مبارک شه !!!! pic.twitter.com/eJmD85q04J— Ehsanullah mehnat_official (@Mehnatkakar) October 23, 2023
ಇರ್ಫಾನ್ ಪಠಾಣ್ ಮತ್ತು ರಶೀದ್ ಖಾನ್ ಡ್ಯಾನ್ಸ್ ಮಾಡಿದ ರೀತಿಗೆ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಕೆಲವು ಅಭಿಮಾನಿಗಳು ಹೊಗಳುತ್ತಿದ್ದರೆ, ಪಾಕಿಸ್ತಾನದ ಸೋಲಿನ ನಂತರ ಇರ್ಫಾನ್ ಪಠಾಣ್ ಏಕೆ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಪಂದ್ಯದ ಮೊದಲು, ಐಸಿಸಿ ವಿಶ್ವಕಪ್ 2023 ಪಾಯಿಂಟ್ ಪಟ್ಟಿಯಲ್ಲಿ ಅಫ್ಘಾನಿಸ್ತಾನ ಕೊನೆಯ ಸ್ಥಾನದಲ್ಲಿತ್ತು ಮತ್ತು ಈಗ ಈ ಗೆಲುವಿನೊಂದಿಗೆ ಆರನೇ ಸ್ಥಾನಕ್ಕೆ ಬಂದಿದೆ. ಸೋಲಿನ ನಡುವೆಯೂ ಪಾಕಿಸ್ತಾನ ಐದನೇ ಸ್ಥಾನದಲ್ಲಿ ಮುಂದುವರಿದಿದೆ. ಇದೀಗ ಐಸಿಸಿ ವಿಶ್ವಕಪ್ 2023 ರ ಸೆಮಿಫೈನಲ್ ತಲುಪುವ ಹಾದಿಯು ಪಾಕಿಸ್ತಾನಕ್ಕೆ ಹೆಚ್ಚು ಕಷ್ಟಕರವಾಗಿದೆ.
ಇದನ್ನೂ ಓದಿ: PAK vs AFG Video: ಸಿಕ್ಸರ್ ಬಾರಿಸಿ ಇತಿಹಾಸದ ಪುಟಗಳಲ್ಲಿ ದಾಖಲೆ ಬರೆದ ರಹಮತ್ ಶಾ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.