Rashid Khan dance with Irfan Pathan : ಐಸಿಸಿ ವಿಶ್ವಕಪ್ 2023 ರಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಪಂದ್ಯದ ಫಲಿತಾಂಶವು ಅನೇಕ ಜನರನ್ನು ಆಶ್ಚರ್ಯಗೊಳಿಸಿದೆ. ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಫ್ಘಾನಿಸ್ತಾನ ಪಾಕಿಸ್ತಾನದ ವಿರುದ್ಧ ಜಯ ದಾಖಲಿಸಿದೆ. 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ತಂಡದ ಎರಡನೇ ಪ್ರಮುಖ ಗೆಲುವು ಇದಾಗಿದೆ. ಅಫ್ಘಾನಿಸ್ತಾನ ಈ ಹಿಂದೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಗೆದ್ದಿತ್ತು. ಅಫ್ಘಾನಿಸ್ತಾನದ ಗೆಲುವಿನ ನಂತರ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಮತ್ತು ಅಫ್ಘಾನ್ ಸ್ಪಿನ್ನರ್ ರಶೀದ್ ಖಾನ್ ಜೊತೆಯಾಗಿ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ನನ್ನನ್ನು ಪಾಕಿಸ್ತಾನಿ ಎಂದು ಕರೆಯಬೇಡಿ!”… ಪಾಕ್ ಮಾಜಿ ಕ್ರಿಕೆಟಿಗ ಹೀಗಂದಿದ್ದೇಕೆ? 


ಇದು ಪಾಕಿಸ್ತಾನಕ್ಕೆ ಅತ್ಯಂತ ಅವಮಾನಕರ ಸೋಲಾಗಿದೆ. ಇದು 2023ರ ಐಸಿಸಿ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಸತತ ಮೂರನೇ ಸೋಲು. ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ ವಿರುದ್ಧ ಗೆಲುವು ದಾಖಲಿಸುವ ಮೂಲಕ ಪಾಕಿಸ್ತಾನವು ಪಂದ್ಯಾವಳಿಯನ್ನು ಅದ್ಭುತವಾಗಿ ಪ್ರಾರಂಭಿಸಿತ್ತು, ಆದರೆ ಅದರ ನಂತರ ಅದು ಮೊದಲು ಭಾರತದ ಜೊತೆ, ನಂತರ ಆಸ್ಟ್ರೇಲಿಯಾ ಮತ್ತು ಈಗ ಅಫ್ಘಾನಿಸ್ತಾನದ ಜೊತೆ ಸೋಲಿನ ರುಚಿಯನ್ನು ಅನುಭವಿಸಬೇಕಾಯಿತು.


 


PAK vs AFG Video: ಸಿಕ್ಸರ್ ಬಾರಿಸಿ ಇತಿಹಾಸದ ಪುಟಗಳಲ್ಲಿ ದಾಖಲೆ ಬರೆದ ರಹಮತ್ ಶಾ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.