IND vs PAK: 2023ರ ವಿಶ್ವಕಪ್‌ನ 12ನೇ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಆಟಗಾರರು ಹಲವು ದೊಡ್ಡ ದಾಖಲೆಗಳನ್ನು ಮಾಡಿದ್ದಾರೆ. ಈ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಹೆಸರೂ ಸೇರಿದೆ. ಏಕದಿನ ಮಾದರಿಯಲ್ಲಿ ಕಪಿಲ್ ದೇವ್ ದಾಖಲೆಯನ್ನೂ ಸರಿಗಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ 2 ವಿಕೆಟ್ ಪಡೆದರು. ಇದರೊಂದಿಗೆ ಭಾರತದಲ್ಲಿ ಏಕದಿನ ಮಾದರಿಯಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ ಮೊದಲ ಎಡಗೈ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಜಹೀರ್ ಖಾನ್ ಭಾರತದ ಪರ ಅತಿ ಹೆಚ್ಚು ವಿಕೆಟ್ (ಎಡಗೈ ಬೌಲರ್) ಪಡೆದಿದ್ದರು. ಜಹೀರ್ ಖಾನ್  65 ಪಂದ್ಯಗಳಲ್ಲಿ 94 ವಿಕೆಟ್ ಪಡೆದಿದ್ದರು.  


ಇದನ್ನೂ ಓದಿ: IND vs AFG: ಅಫ್ಘಾನಿಸ್ತಾನದ ವಿರುದ್ಧ ಭಾರತದ ಪ್ಲೇಯಿಂಗ್ 11.. ಈ ಒಂದು ಬದಲಾವಣೆ ಫಿಕ್ಸ್‌..! 


ರವೀಂದ್ರ ಜಡೇಜಾ ಹೆಸರಿನಲ್ಲಿ ಮತ್ತೊಂದು ಸಾಧನೆ ಮಾಡಿದರು. ಏಕದಿನ ಪಂದ್ಯಗಳಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ದಾಖಲೆಯಲ್ಲಿ ಅವರು ಆರನೇ ಸ್ಥಾನದಲ್ಲಿದ್ದಾರೆ. ಇದರೊಂದಿಗೆ ಈ ಮಾದರಿಯಲ್ಲಿ 100 ವಿಕೆಟ್‌ಗಳನ್ನು ಪೂರೈಸಿದ ಭಾರತದ ಆರನೇ ಬೌಲರ್ ಕೂಡ ಆಗಿದ್ದಾರೆ. ಇದಕ್ಕೂ ಮುನ್ನ ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್, ಅಜಿತ್ ಅಗರ್ಕರ್, ಜಾವಗಲ್ ಶ್ರೀನಾಥ್ ಮತ್ತು ಕಪಿಲ್ ದೇವ್ ಈ ಸಾಧನೆ ಮಾಡಿದ್ದರು.


ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಹಿರಿಯ ಬೌಲರ್ ಅನಿಲ್ ಕುಂಬ್ಳೆ 126 ವಿಕೆಟ್ ಪಡೆದಿದ್ದಾರೆ. ಇದಾದ ಬಳಿಕ ಹರ್ಭಜನ್ ಸಿಂಗ್ 110 ವಿಕೆಟ್ ಕಬಳಿಸಿದ್ದಾರೆ. ಅಜಿತ್ ಅಗರ್ಕರ್ 109 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಜಾವಗಲ್ ಶ್ರೀನಾಥ್ 103 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕಪಿಲ್ ದೇವ್ 100 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ. ಇದರ ನಂತರ ರವೀಂದ್ರ ಜಡೇಜಾ ಹೆಸರು ಬಂದಿದೆ. ಅವರ ಹೆಸರಿನಲ್ಲಿ 100 ವಿಕೆಟ್ ಕೂಡ ಇದೆ.


ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲುಂಡ ಬಾಂಗ್ಲಾ: 137 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಆಂಗ್ಲ ಪಡೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.