Team India Playing 11 for Semi Final: ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ 11 ಬಹುತೇಕ ಮೊದಲೇ ಖಚಿತವಾಗಿದ್ದು, ಕೋಚ್ ರಾಹುಲ್ ದ್ರಾವಿಡ್ ಮತ್ತು ಕ್ಯಾಪ್ಟನ್ ರೋಹಿತ್ ಶರ್ಮಾ ಈ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಒಂದೇ ಓವರ್ ನಲ್ಲಿ ಆರು ವಿಕೆಟ್ ಪತನ ! ಇದು ಹ್ಯಾಟ್ರಿಕ್ ಅಲ್ಲ ಡಬಲ್ ಹ್ಯಾಟ್ರಿಕ್ ದಾಖಲೆ


ಟೀಂ ಇಂಡಿಯಾದ ಅಗ್ರ ಮತ್ತು ಮಧ್ಯಮ ಕ್ರಮಾಂಕವು ಪಂದ್ಯಾವಳಿಯಲ್ಲಿ ಅತ್ಯಂತ ಉತ್ತಮ ರೂಪದಲ್ಲಿದೆ. ಶುಭ್ಮನ್ ಗಿಲ್ ಹೊರತುಪಡಿಸಿ, ಉಳಿದ ನಾಲ್ಕು ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್’ಗಳು ಶತಕ ಗಳಿಸಿದ್ದಾರೆ. ಕೊಹ್ಲಿ ಎರಡು ಬಾರಿ ಶತಕ ಬಾರಿಸಿದರೆ, ನೆದರ್ಲ್ಯಾಂಡ್ಸ್ ವಿರುದ್ಧದ ಲೀಗ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಸೆಂಚುರಿ ಬಾರಿಸಿದ್ದರು. ಹೀಗಾಗಿ ಈ ಫಾರ್ಮ್ ವಿಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರೋಹಿತ್ ಸ್ಪಷ್ಟ ಚಿತ್ರಣ ನೀಡಿದ್ದಾರೆ.


ಇನ್ನು ಬೌಲಿಂಗ್ ವಿಭಾಗವನ್ನು ನೋಡುವುದಾದರೆ, ಮೊಹಮ್ಮದ್ ಶಮಿ ಮತ್ತು ಜಸ್ಪ್ರಿತ್ ಬುಮ್ರಾ ಟೀಂ ಇಂಡಿಯಾಗೆ ಆನೆ ಬಲ ತುಂಬುತ್ತಿದ್ದಾರೆ. ಶಮಿ ಆಡಿದ್ದು 5 ಪಂದ್ಯವನ್ನಾದರೂ ಪಡೆದಿದ್ದು ಸುಮಾರು 16 ವಿಕೆಟ್. ಬುಮ್ರಾ ಇದುವರೆಗೆ ಅತಿ ಹೆಚ್ಚು 17 ವಿಕೆಟ್ ಪಡೆದಿದ್ದಾರೆ. ಇವರ ಹೊರತಾಗಿ ಮೊಹಮ್ಮದ್ ಸಿರಾಜ್ ಕೂಡ ತಂಡವನ್ನು ಯಶಸ್ವಿಯಾಗಿಸಿದ್ದಾರೆ.


ಇನ್ನು ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಗಾಯಗೊಂಡು ಹೊರಬಿದ್ದ ಬಳಿಕ ಬ್ಯಾಟಿಂಗ್ ಸ್ಥಾನ ತುಂಬಿದ್ದ ಸೂರ್ಯಕುಮಾರ್ ಯಾದವ್ ಮತ್ತೆ ಅವಕಾಶ ಪಡೆದಿದ್ದಾರೆ. ಆಲ್’ರೌಂಡರ್ ಆಗಿ ಮರು ಆಯ್ಕೆಯಾಗಿದ್ದ ಪ್ರಸಿದ್ಧ್ ಕೃಷ್ಣ ಸೆಮಿಫೈನಲ್’ನಲ್ಲಿ ಸ್ಥಾನ ಗಳಿಸಬಹುದು ಎಂದು ಹೇಳಲಾಗಿತ್ತು. ಆದರೆ ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ನೀಡಿದ ಚಿತ್ರಣದಲ್ಲಿ ಈ ಬಾರಿ ಯಾವುದೇ ಬದಲಾವಣೆ ಇಲ್ಲದೆ ಇದುವರೆಗೆ ಕಣಕ್ಕಿಳಿದಿದ್ದ ಪ್ಲೇಯಿಂಗ್ 11, ಈ ಬಾರಿಯೂ ಮೈದಾನದಲ್ಲಿ ಆಟವಾಡಲಿದೆ ಎಂಬುದು ಸ್ಪಷ್ಟವಾಗಿದೆ.


ಭಾರತ ಮತ್ತು ನ್ಯೂಜಿಲೆಂಡ್ ತಂಡದ ಪ್ಲೇಯಿಂಗ್ 11:


ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.


ಇದನ್ನೂ ಓದಿ: ʼರಚಿನ್ʼಗೆ ಸಚಿನ್ ಮತ್ತು ರಾಹುಲ್ ದ್ರಾವಿಡ್ ಹೆಸರಿಟ್ಟಿಲ್ಲ..! ನ್ಯೂಜಿಲೆಂಡ್ ಕ್ರಿಕೆಟಿಗನ ತಂದೆ ಸ್ಪಷ್ಟನೆ


ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಗ್ಲೆನ್ನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಷೆಲ್ ಸ್ಯಾಂಟ್ನರ್, ಟಿಮ್ ಸದೆ/ಕೈಲೆ ಜೇಮಿಸನ್, ಲಾಕಿ ಫರ್ಗುಸನ್, ಟ್ರೆಂಡ್ ಬೌಲ್ಟ್,


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.