ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್’ನಲ್ಲಿ 300 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

Batsman with Most Sixes in International Cricket: ಭಾರತದ ನಾಯಕ ಹಾಗೂ ಸ್ಫೋಟಕ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌’ನಲ್ಲಿ 300 ಸಿಕ್ಸರ್‌’ಗಳ ದಾಖಲೆಯನ್ನು ಮುಟ್ಟಿದ್ದಾರೆ. ಸುದ್ದಿ ಬರೆಯುವವರೆಗೆ ತನಕ, ರೋಹಿತ್ ಶರ್ಮಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಒಟ್ಟು 301 ಸಿಕ್ಸರ್‌’ಗಳನ್ನು ಪೂರ್ಣಗೊಳಿಸಿದ್ದಾರೆ.

Written by - Bhavishya Shetty | Last Updated : Oct 14, 2023, 07:24 PM IST
    • ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ
    • ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಒಟ್ಟು 301 ಸಿಕ್ಸರ್‌’ಗಳನ್ನು ಪೂರ್ಣಗೊಳಿಸಿದ್ದಾರೆ
    • ODI ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ವಿವರ
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್’ನಲ್ಲಿ 300 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ title=
Rohit Sharma

World Cup 2023: ಟೀಂ ಇಂಡಿಯಾ ನಾಯಕ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ಪಾಕಿಸ್ತಾನ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಮಹತ್ವದ ಸಾಧನೆ ಮಾಡಿದ್ದಾರೆ. 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌’ನಲ್ಲಿ ವಿಶಿಷ್ಟವಾದ 'ಟ್ರಿಪಲ್ ಸೆಂಚುರಿ' ಗಳಿಸಿದ್ದಾರೆ.

ಇದನ್ನೂ ಓದಿ: ಬಾಲ್’ಗೆ ಮಂತ್ರ ಹೇಳಿ ಬೌಲಿಂಗ್ ಮಾಡಿದ್ದೇ ತಡ ಬಿದ್ದೇಬಿಡ್ತು ವಿಕೆಟ್… ಪಾಂಡ್ಯ ‘ಕಾಲಾ ಜಾದೂ’ !

ಭಾರತದ ನಾಯಕ ಹಾಗೂ ಸ್ಫೋಟಕ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌’ನಲ್ಲಿ 300 ಸಿಕ್ಸರ್‌’ಗಳ ದಾಖಲೆಯನ್ನು ಮುಟ್ಟಿದ್ದಾರೆ. ಸುದ್ದಿ ಬರೆಯುವವರೆಗೆ ತನಕ, ರೋಹಿತ್ ಶರ್ಮಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಒಟ್ಟು 301 ಸಿಕ್ಸರ್‌’ಗಳನ್ನು ಪೂರ್ಣಗೊಳಿಸಿದ್ದಾರೆ. ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌’ನಲ್ಲಿ 301 ಸಿಕ್ಸರ್‌’ಗಳು, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 182 ಸಿಕ್ಸರ್‌’ಗಳು ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 77 ಸಿಕ್ಸರ್‌’ಗಳನ್ನು ಬಾರಿಸಿದ್ದಾರೆ.

ODI ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್

1. ಶಾಹಿದ್ ಅಫ್ರಿದಿ (ಪಾಕಿಸ್ತಾನ) – 351 (369 ಇನ್ನಿಂಗ್ಸ್)

2. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 331 (294 ಇನ್ನಿಂಗ್ಸ್)

3. ರೋಹಿತ್ ಶರ್ಮಾ (ಭಾರತ) - 300* (246 ಇನ್ನಿಂಗ್ಸ್)

 

ಅಂತರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ವಿಶ್ವದಾಖಲೆಯನ್ನು ರೋಹಿತ್ ಶರ್ಮಾ ಹೊಂದಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ 560 ಸಿಕ್ಸರ್‌’ಗಳನ್ನು ಪೂರೈಸಿದ್ದಾರೆ. ವೆಸ್ಟ್ ಇಂಡೀಸ್‌ನ ಶ್ರೇಷ್ಠ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌’ನ ಎಲ್ಲಾ ಮೂರು ಮಾದರಿಗಳಲ್ಲಿ ಒಟ್ಟು 553 ಸಿಕ್ಸರ್‌ಗಳನ್ನು ಬಾರಿಸಿದ್ದರು.

ಅಂತರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟ್ಸ್‌ಮನ್

1. ರೋಹಿತ್ ಶರ್ಮಾ (ಭಾರತ) - 560 ಸಿಕ್ಸರ್‌

2. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 553 ಸಿಕ್ಸರ್

3. ಶಾಹಿದ್ ಅಫ್ರಿದಿ (ಪಾಕಿಸ್ತಾನ) – 476 ಸಿಕ್ಸರ್‌

4. ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್) - 398 ಸಿಕ್ಸರ್‌

5. ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) - 383 ಸಿಕ್ಸರ್‌

6. ಮಹೇಂದ್ರ ಸಿಂಗ್ ಧೋನಿ (ಭಾರತ) - 359 ಸಿಕ್ಸರ್‌

ಇದನ್ನೂ ಓದಿ: IND vs PAK: ರೋಹಿತ್ ಶರ್ಮಾರ ಈ ‘ಟ್ರಿಕ್‍’ಗೆ ಪೆವಿಲಿಯನ್ ಸೇರಿದ ಪಾಕ್‍ನ ಸ್ಫೋಟಕ ಬ್ಯಾಟ್ಸ್‌ಮನ್!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News