Rohit Sharma : ಭಾರತ ತಂಡವು 2023ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ತನ್ನ ಎರಡನೇ ಪಂದ್ಯವನ್ನು ಆಡಲಿದೆ. ಈಗಾಗಲೇ ಶುಭಮನ್ ಗಿಲ್ ಅನಾರೋಗ್ಯದಿಂದ ಪಂದ್ಯವನ್ನು ಆಡುತ್ತಿಲ್ಲ. ಭಾರತ ಸ್ಟಾರ್ ಕ್ರಿಕೆಟಿಗನನ್ನು ಮಿಸ್ ಮಾಡಿಕೊಳ್ಳುತ್ತಿದೆ. ಈ ನಡುವೆ ತಂಡಕ್ಕೆ ಮತ್ತೊಂದು ಕೆಟ್ಟ ಸುದ್ದಿ ಬಂದಿದೆ. ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯಕ್ಕೆ ಮುನ್ನವೇ ಪಂದ್ಯಶ್ರೇಷ್ಠ ಆಟಗಾರ ಗಾಯಗೊಂಡಿದ್ದರು. ಒಂದು ವೇಳೆ ಈ ಬ್ಯಾಟ್ಸ್‌ಮನ್‌ಗೆ ಈ ಪಂದ್ಯದಲ್ಲಿ ಆಡಲು ಸಾಧ್ಯವಾಗದಿದ್ದರೆ ತಂಡದ ದೃಷ್ಟಿಯಿಂದ ಭಾರತಕ್ಕೆ ದೊಡ್ಡ ಹೊಡೆತ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲುಂಡ ಬಾಂಗ್ಲಾ: 137 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಆಂಗ್ಲ ಪಡೆ 


ಈ ಬ್ಯಾಟ್ಸ್‌ಮನ್ ಗಾಯಗೊಂಡಿದ್ದಾರೆ 


ಶುಭಮನ್ ಗಿಲ್ ನಂತರ ಟೀಂ ಇಂಡಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಬಂದಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಹೌದು, ಮಂಗಳವಾರ ಬ್ಯಾಟಿಂಗ್ ಅಭ್ಯಾಸದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಆದರೆ, ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಚೆಂಡು ರೋಹಿತ್ ಕಾಲಿಗೆ ಬಡಿಯಿತು. ಚೆಂಡು ಬಡಿದ ನಂತರ ರೋಹಿತ್ ನೋವಿನಿಂದ ಬಳಲುತ್ತಿದ್ದರು. ಇದಾದ ಬಳಿಕ ನಾಯಕ ಕೆಲಕಾಲ ಅಭ್ಯಾಸ ನಡೆಸಿದರು. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡಲು ಸಾಧ್ಯವಾಗದಿದ್ದರೆ ತಂಡಕ್ಕೆ ಸಂಕಷ್ಟ ಹೆಚ್ಚಲಿದೆ.


ಓಪನರ್ ಬ್ಯಾಟ್ಸ್‌ಮನ್ ಕೊರತೆ 


ತಂಡದ ಸ್ಟಾರ್ ಓಪನರ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಡೆಂಗ್ಯೂನಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಅವರ ಪ್ಲೇಟ್‌ಲೆಟ್ ಸಂಖ್ಯೆ ಕುಸಿಯುತ್ತಲೇ ಇದ್ದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಬೇಕಾಗಿತ್ತು, ಆದರೆ ಈಗ ಅವರು ಡಿಸ್ಚಾರ್ಜ್ ಆಗಿದ್ದಾರೆ ಎಂಬ ಸಮಾಧಾನದ ಸುದ್ದಿ ಬಂದಿದೆ. ಇತ್ತೀಚಿನ ಮಾಹಿತಿ ಪ್ರಕಾರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುವುದು ಅವರಿಗೆ ತುಂಬಾ ಕಷ್ಟ ಎನಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮುಂಬರುವ ದೊಡ್ಡ ಪಂದ್ಯಗಳಿಗೆ ಮುನ್ನ ಮತ್ತೊಬ್ಬ ಆಟಗಾರ ಗಾಯಗೊಂಡಿರುವುದು ತಂಡಕ್ಕೆ ಕಹಿ ಸಂಗತಿಯಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಅಫ್ಘಾನಿಸ್ತಾನದ ವಿರುದ್ಧ ಭಾರತದ ಪ್ಲೇಯಿಂಗ್ 11.. ಈ ಒಂದು ಬದಲಾವಣೆ ಫಿಕ್ಸ್‌..! 


ಟೀಂ ಇಂಡಿಯಾ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ


2023ರ ವಿಶ್ವಕಪ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಉದ್ದೇಶದಿಂದ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ 2 ರನ್ ಗಳಿಸುವಷ್ಟರಲ್ಲಿ 3 ವಿಕೆಟ್‌ಗಳ ಪತನದ ನಂತರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ 165 ರನ್‌ಗಳ ದಾಖಲೆಯ ಜೊತೆಯಾಟ ಆಡಿದರು. ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ, ಕೆಎಲ್ ರಾಹುಲ್ 97 ರನ್ ಗಳಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.