World Cup 2023: ವಿಶ್ವಕಪ್ 2023 ರಲ್ಲಿ ಭಾರತವು  ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಎರಡು ತಂಡಗಳ ನಡುವಿನ ಸೆಣೆಸಾಟ ಭಾನುವಾರ ಅಂದರೆ ಅಕ್ಟೋಬರ್ 8 ರಂದು  ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ವಿಶ್ವಕಪ್ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ  ವಿಶ್ವಕಪ್ ನ ಮೊದಲ ಪಂದ್ಯದಲ್ಲಿಯೇ ಹೊಸ ಇತಿಹಾಸ ಬರೆಯುವ ಎಲ್ಲಾ ಸಾಧ್ಯತೆಗಳಿವೆ. ಹೌದು, ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ವಿಶ್ವದಾಖಲೆಯನ್ನು ಮುರಿಯುವ ಅವಕಾಶ ರೋಹಿತ್ ಗಿದೆ. 


COMMERCIAL BREAK
SCROLL TO CONTINUE READING

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿಯೇ  ಹೊಸ ಇತಿಹಾಸ :
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇನ್ನು 3 ಸಿಕ್ಸರ್ ಬಾರಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್  ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಇನ್ನು 3 ಸಿಕ್ಸರ್‌ಗಳನ್ನು ಬಾರಿಸಿದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 554 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದಂತೆ ಆಗುತ್ತದೆ. ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ ಒಟ್ಟು 553 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅಂದರೆ ಆಸ್ಟ್ರೇಲಿಯಾ ವಿರುದ್ದ ಪಂದ್ಯದಲ್ಲಿ ರೋಹಿತ್ ಶರ್ಮಾ 3 ಸಿಕ್ಸರ್ ಬಾರಿಸಿದರೆ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯಲಿದ್ದಾರೆ. 


ಇದನ್ನೂ ಓದಿ : ಈ ಬಾರಿ ವಿಶ್ವಕಪ್ ಗೆಲ್ಲುತ್ತೀರಾ ಎಂಬ ಪ್ರಶ್ನೆಗೆ ನಾಯಕ ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತಾ?


ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ :    
1. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 553 ಸಿಕ್ಸರ್
2. ರೋಹಿತ್ ಶರ್ಮಾ (ಭಾರತ) - 551 ಸಿಕ್ಸರ್‌ಗಳು
3. ಶಾಹಿದ್ ಅಫ್ರಿದಿ (ಪಾಕಿಸ್ತಾನ) – 476 ಸಿಕ್ಸರ್‌ಗಳು
4. ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್) - 398 ಸಿಕ್ಸರ್‌ಗಳು
5. ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) - 383 ಸಿಕ್ಸರ್‌ಗಳು
6. ಮಹೇಂದ್ರ ಸಿಂಗ್ ಧೋನಿ (ಭಾರತ) - 359 ಸಿಕ್ಸರ್‌ಗಳು


ಬದಿಗೆ ಸರಿಯಲಿದೆ ಈ ವಿಶ್ವ ದಾಖಲೆ :
ರೋಹಿತ್ ಶರ್ಮಾ ಪ್ರಸ್ತುತ ಅಂತರಾಷ್ಟ್ರೀಯ ಕ್ರಿಕೆಟ್‌ನ 451 ಪಂದ್ಯಗಳಲ್ಲಿ 551 ಸಿಕ್ಸರ್ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ 3 ಸಿಕ್ಸರ್ ಬಾರಿಸುವ ಮೂಲಕ ರೋಹಿತ್ ಶರ್ಮಾ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 554 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಮತ್ತು ಏಕೈಕ ಬ್ಯಾಟ್ಸ್‌ಮನ್ ಎಂದೆನಿಸಿಕೊಳ್ಳಲಿದ್ದಾರೆ. 


ಇದನ್ನೂ ಓದಿ : ಏಷ್ಯನ್ ಗೇಮ್ಸ್ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ! ನೀರಜ್ ಚೋಪ್ರಾ ಚಿನ್ನದ ಬೇಟೆ, ಬೆಳ್ಳಿಗೆ ಮುತ್ತಿಟ್ಟ ಕಿಶೋರ್


ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್   :  
1.551 ಸಿಕ್ಸರ್‌ಗಳು - ರೋಹಿತ್ ಶರ್ಮಾ
2.359 ಸಿಕ್ಸರ್‌ಗಳು - ಮಹೇಂದ್ರ ಸಿಂಗ್ ಧೋನಿ
3.283 ಸಿಕ್ಸರ್‌ಗಳು - ವಿರಾಟ್ ಕೊಹ್ಲಿ 
4.264 ಸಿಕ್ಸರ್‌ಗಳು - ಸಚಿನ್ ತೆಂಡೂಲ್ಕರ್
5.251 ಸಿಕ್ಸರ್‌ಗಳು - ಯುವರಾಜ್ ಸಿಂಗ್
6.247 ಸಿಕ್ಸರ್‌ಗಳು - ಸೌರವ್ ಗಂಗೂಲಿ
7.243 ಸಿಕ್ಸರ್‌ಗಳು - ವೀರೇಂದ್ರ ಸೆಹ್ವಾಗ್


ಈ ಪ್ಲೇಯಿಂಗ್ 11 ಆಸ್ಟ್ರೇಲಿಯ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ : 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ