4 ರನ್’ಗೆ 2 ವಿಕೆಟ್ ಕಿತ್ತ ಕಿಲಾಡಿ! ಮಾವನ ದಾಖಲೆಯನ್ನೇ ಮುರಿದು ವಿಶ್ವದಾಖಲೆ ಬರೆದ ಸ್ಟಾರ್ ವೇಗಿ

Shaheen Afridi: ಪಾಕಿಸ್ತಾನದ ವೇಗಿ ಶಾಹೀನ್ ಶಾ ಆಫ್ರಿದಿ 10 ಓವರ್ ಬೌಲ್ ಮಾಡಿ 54 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಹ್ಯಾರಿಸ್ ರೌಫ್ 3 ವಿಕೆಟ್ ಪಡೆದರೆ, ಉಸಾಮಾ ಮಿರ್ 9 ಓವರ್ ಗಳಲ್ಲಿ 82 ರನ್ ನೀಡಿ ಒಂದು ವಿಕೆಟ್ ಪಡೆದರು.

Written by - Bhavishya Shetty | Last Updated : Oct 20, 2023, 10:09 PM IST
    • ಪಾಕಿಸ್ತಾನದ ವೇಗಿ ಶಾಹೀನ್ ಶಾ ಆಫ್ರಿದಿ ಬೌಲಿಂಗ್ ಮೋಡಿ
    • ವಿಶ್ವಕಪ್‌’ನಲ್ಲಿ ಎರಡನೇ ಬಾರಿಗೆ ಐದು ವಿಕೆಟ್‌ ಕಬಳಿಸಿ ದಾಖಲೆ ಬರೆದ ಶಾಹೀನ್‌ ಅಫ್ರಿದಿ
    • 10 ಓವರ್ ಬೌಲ್ ಮಾಡಿ 54 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ
4 ರನ್’ಗೆ 2 ವಿಕೆಟ್ ಕಿತ್ತ ಕಿಲಾಡಿ! ಮಾವನ ದಾಖಲೆಯನ್ನೇ ಮುರಿದು ವಿಶ್ವದಾಖಲೆ ಬರೆದ ಸ್ಟಾರ್ ವೇಗಿ title=
shaheen afridi

Pakistan vs Australia, ODI World Cup: ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ಶುಕ್ರವಾರ ODI ವಿಶ್ವಕಪ್  ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 50 ಓವರ್‌’ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 367 ರನ್ ಗಳಿಸಿತು. ಇಬ್ಬರು ಬ್ಯಾಟ್ಸ್‌’ಮನ್‌’ಗಳು ಭರ್ಜರಿ ಶತಕ ಸಿಡಿಸಿದ್ದರು. ಈ ಮಧ್ಯೆ, ಪಾಕಿಸ್ತಾನದ ವೇಗಿ ಶಾಹೀನ್ ಶಾ ಆಫ್ರಿದಿ ತಮ್ಮ ಬೌಲಿಂಗ್ ಮೋಡಿಯನ್ನು ತೋರಿಸಿದ್ದಾರೆ.

ಇದನ್ನೂ ಓದಿ: ಮಜ್ಜಿಗೆ ಜೊತೆ ಈ ಪುಡಿಯನ್ನು ಬೆರೆಸಿ ಕುಡಿದರೆ ಸೊಂಟದ ಸುತ್ತಲಿನ ಬೊಜ್ಜು ಸಲೀಸಾಗಿ ಕರಗುತ್ತೆ

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಆಸ್ಟ್ರೇಲಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಅವರ ಸ್ಫೋಟಕ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 367 ರನ್ ಗಳಿಸಿತು. ವಾರ್ನರ್ 124 ಎಸೆತಗಳಲ್ಲಿ 14 ಬೌಂಡರಿ ಹಾಗೂ 9 ಸಿಕ್ಸರ್‌ಗಳ ನೆರವಿನಿಂದ 163 ರನ್ ಗಳಿಸಿದರು. ಅದೇ ಸಮಯದಲ್ಲಿ, ಮಾರ್ಷ್ 108 ಎಸೆತಗಳಲ್ಲಿ 10 ಬೌಂಡರಿ ಮತ್ತು 9 ಸಿಕ್ಸರ್‌ಗಳನ್ನು ಹೊಡೆಯುವ ಮೂಲಕ 121 ರನ್ ಸೇರಿಸಿದರು. ಇವರಿಬ್ಬರು 259 ರನ್‌ಗಳ ಆರಂಭಿಕ ಜೊತೆಯಾಟವನ್ನು ಮಾಡಿದರು.

ಶಾಹೀನ್ ಅವರ 'ಪಂಚ್'!

ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನದ ವೇಗಿ ಶಾಹೀನ್ ಶಾ ಆಫ್ರಿದಿ 10 ಓವರ್ ಬೌಲ್ ಮಾಡಿ 54 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಹ್ಯಾರಿಸ್ ರೌಫ್ 3 ವಿಕೆಟ್ ಪಡೆದರೆ, ಉಸಾಮಾ ಮಿರ್ 9 ಓವರ್ ಗಳಲ್ಲಿ 82 ರನ್ ನೀಡಿ ಒಂದು ವಿಕೆಟ್ ಪಡೆದರು. ಹಸನ್ ಅಲಿ, ಇಫ್ತಿಕರ್ ಅಹ್ಮದ್ ಮತ್ತು ಮೊಹಮ್ಮದ್ ನವಾಜ್ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

ಕೊನೆಯ ಓವರ್‌ನಲ್ಲಿ ರೋಮಾಂಚನ:

ಇನಿಂಗ್ಸ್‌’ನ ಕೊನೆಯ ಓವರ್ ಅನ್ನು ಶಾಹೀನ್ ವಿಕೆಟ್‌ನೊಂದಿಗೆ ಪ್ರಾರಂಭಿಸಿದರು. ಮಿಚೆಲ್ ಸ್ಟಾರ್ಕ್ (2) ಅವರನ್ನು ಮೊದಲ ಎಸೆತದಲ್ಲಿ ಔಟ್ ಮಾಡಿದರೆ, ಇದಾದ ಬಳಿಕ ಜೋಶ್ ಹ್ಯಾಜಲ್ ವುಡ್ (0) ಅವರನ್ನು ಖಾತೆ ತೆರೆಯದೆ ಪೆವಿಲಿಯನ್ ಗೆ ಕಳುಹಿಸಿದರು. ನಂತರ ಮುಂದಿನ ಚೆಂಡು ವೈಡ್ ಆಗಿತ್ತು. ಮುಂದಿನ ಎಸೆತದಲ್ಲಿ ಆಡಮ್ ಝಂಪಾ ಸಿಂಗಲ್ ಗಳಿಸಿದರು. ನಂತರ ಪ್ಯಾಟ್ ಕಮ್ಮಿನ್ಸ್ 2 ಎಸೆತಗಳನ್ನು ಆಡಿ ಯಾವುದೇ ರನ್ ಗಳಿಸಲು ಸಾಧ್ಯವಾಗಲಿಲ್ಲ. ಕೊನೆಯ ಎಸೆತದಲ್ಲಿ 2 ರನ್‌ಗಳು ಬಂದವು.

ಇದನ್ನೂ ಓದಿ: ಮುಂದಿನ 2 ದಿನ ಈ ಭಾಗಗಳಲ್ಲಿ ಭರ್ಜರಿ ಮಳೆ-ಜಲಪ್ರಳಯದ ಭೀತಿ: ಗುಡುಗು ಮಿಂಚು ಸಹಿತ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆ

ಶಾಹಿದ್ ಅಫ್ರಿದಿ ದಾಖಲೆ ಸರಿಗಟ್ಟಿದ ಶಾಹೀನ್:

ವಿಶ್ವಕಪ್‌’ನಲ್ಲಿ ಶಾಹೀನ್‌ ಅಫ್ರಿದಿ ಎರಡನೇ ಬಾರಿಗೆ ಐದು ವಿಕೆಟ್‌’ಗಳನ್ನು ಕಬಳಿಸಿ ದಾಖಲೆ ಬರೆದಿದ್ದಾರೆ. ಈ ಹಿಂದೆ 2019ರ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಅವರು 35 ರನ್ ನೀಡಿ 6 ವಿಕೆಟ್‌ ಕಬಳಿಸಿದ್ದರು. ಇದೀಗ ವಿಶ್ವಕಪ್‌’ನಲ್ಲಿ ಎರಡನೇ ಬಾರಿ ಐದು ವಿಕೆಟ್ ಕಿತ್ತು ಈ ಸಾಧನೆ ಮಾಡಿದ್ದಾರೆ. ಈ ಮೂಲಕ ತಮ್ಮ ಮಾವ ಶಾಹಿದ್ ಅಫ್ರಿದಿ ಬಳಿಕ ವಿಶ್ವಕಪ್‌’ನಲ್ಲಿ ಎರಡು ಬಾರಿ ಐದು ವಿಕೆಟ್ ಕಬಳಿಸಿದ ಎರಡನೇ ಪಾಕಿಸ್ತಾನದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News