Shubman Gill Reached Ahmedabad : 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಆತ್ಮವಿಶ್ವಾಸ ಹೆಚ್ಚಿದೆ. ಮೊದಲೆರಡು  ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿಕೊಂಡ ಬಳಿಕ ತಂಡದ  ಮನೋಬಲ ಹೆಚ್ಚಿದೆ. ಇನ್ನು ಕ್ರಿಕೆಟ್ ಪ್ರೇಮಿಗಳು ಹಲವು ತಿಂಗಳುಗಳಿಂದ ಕಾತರದಿಂದ ಕಾಯುತ್ತಿದ್ದ ಆ ಅಮೋಘ ಪಂದ್ಯದ ಸರದಿ ಇದೀಗ ಬಂದಿದೆ. ಹೌದು, ಭಾರತದ ಮುಂದಿನ ಹಣಾಹಣಿ ಪಾಕಿಸ್ತಾನದೊಂದಿಗೆ. ಸಾಂಪ್ರದಾಯಿಕ ಎದುರಾಳಿಗಳ ಸೆಣೆಸಾಟ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇದಕ್ಕೂ ಮುನ್ನ ಬಹು ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಈಗಾಗಲೇ ಅಹಮದಾಬಾದ್ ತಲುಪಿದ್ದಾರೆ.


COMMERCIAL BREAK
SCROLL TO CONTINUE READING

ಅಹಮದಾಬಾದ್ ತಲುಪಿದ ಗಿಲ್ : 
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶುಭಮನ್ ಗಿಲ್ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ 2 ದಿನ ಮುಂಚಿತವಾಗಿ ಅಹಮದಾಬಾದ್ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಸ್ಕ್ ಧರಿಸಿಕೊಂದು ಶುಭಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಕಾರಣ ಗಿಲ್ ಟೀಮ್ ಇಂಡಿಯಾ ಪರ ವಿಶ್ವಕಪ್‌ನ ಮೊದಲ ಎರಡು ಪಂದ್ಯಗಳನ್ನು ಆಡಲು ಸಾಧ್ಯವಾಗಿರಲಿಲ್ಲ. ಇದೀಗ ನಾಡಿದ್ದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಗಿಲ್ ಈಗಾಗಲೇ ಅಹಮದಾಬಾದ್ ತಲುಪಿದ್ದಾರೆ. 


 


Team India Records: ಹೊಸ ದಾಖಲೆ ಬರೆದ ಟೀಂ ಇಂಡಿಯಾ ! ಕ್ರಿಕೆಟ್ ಜಗತ್ತಿನಲ್ಲಿ ನಡೆದೇ ಇಲ್ಲ ಈ ಕಮಾಲ್


ಬ್ಯಾಟಿಂಗ್ ಕೋಚ್ ನೀಡಿದ ಅಪ್‌ಡೇಟ್ : 
ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಶುಭಮನ್ ಗಿಲ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಗಿಲ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದರು. ಮುಂಜಾಗ್ರತಾ ಕ್ರಮವಾಗಿ ಮಾತ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರು ಆಸ್ಪತ್ರೆಯಿಂದ ಹೋಟೆಲ್‌ಗೆ ಮರಳಿದ್ದು, ವೈದ್ಯಕೀಯ ತಂಡದ ನಿರಂತರ  ಮೇಲ್ವಿಚಾರಣೆಯಲ್ಲಿದ್ದಾರೆ ಎಂದಿದ್ದರು. 


ಅದ್ಭುತ ಫಾರ್ಮ್ ನಲ್ಲಿ ಗಿಲ್ :  
ಶುಭ್‌ಮನ್ ಗಿಲ್ ಈ ವರ್ಷ ODIಗಳಲ್ಲಿ 72.35 ಸರಾಸರಿ ಮತ್ತು 105.03 ಸ್ಟ್ರೈಕ್ ರೇಟ್‌ನಲ್ಲಿ 1230 ರನ್ ಗಳಿಸಿದ್ದಾರೆ. ಈ ವರ್ಷ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಗಿಲ್ ತಮ್ಮ ODI ವೃತ್ತಿಜೀವನದಲ್ಲಿ ಇದುವರೆಗೆ 35 ODI ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 66.10 ರ ಸರಾಸರಿಯಲ್ಲಿ 1917 ರನ್ ಗಳಿಸಿದ್ದಾರೆ. ಇದರಲ್ಲಿ ದ್ವಿಶತಕ ಕೂಡಾ ಸೇರಿದೆ. ಕಳೆದ 4 ಏಕದಿನ ಪಂದ್ಯಗಳಲ್ಲಿ 2 ಶತಕ ಹಾಗೂ 1 ಅರ್ಧ ಶತಕ ಸಿಡಿಸಿದ್ದಾರೆ. 


ಇದನ್ನೂ ಓದಿ : ಭಾರತ - ಅಫ್ಘಾನಿಸ್ತಾನ ಮ್ಯಾಚ್‌ ವೇಳೆ ಫ್ಯಾನ್ಸ್‌ ನಡುವೆ ಮಾರಾಮಾರಿ, ವಿಡಿಯೋ ವೈರಲ್‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.