ಭಾರತದ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ: ಸಿರಾಜ್ ಸ್ಥಾನದಲ್ಲಿ ಈ ಸ್ಪಿನ್ನರ್’ಗೆ ಅವಕಾಶ ನೀಡಲಿದ್ದಾರೆ ರೋಹಿತ್
World Cup 2023: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ವೈಟ್ ಬಾಲ್ ಕ್ರಿಕೆಟ್ ಗೆ ಹೊಸ ವ್ಯಾಖ್ಯೆ ಸೃಷ್ಟಿಸಿದ ಇಂಗ್ಲೆಂಡ್ ಟೂರ್ನಿಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.
World Cup 2023: ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ 2023 ಪಂದ್ಯವು ನಾಳೆ ಅಂದರೆ ಭಾನುವಾರ ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಭಾರತ ತಂಡ ಈ ಬಾರಿಯ ವಿಶ್ವಕಪ್ಟೂರ್ನಿಯಲ್ಲಿ ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ರಶಸ್ತಿಯ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲ್ಪಟ್ಟಿದೆ
ಇದನ್ನೂ ಓದಿ: ಪಾಕ್’ನ್ನು ಸೋಲಿಸಿ 'ಜೈ ಶ್ರೀಹನುಮಾನ್' ಎಂದು ಪೋಸ್ಟ್ ಮಾಡಿದ ಆಂಜನೇಯ ಭಕ್ತ ಈ ಕೇಶವ್ ಮಹರಾಜ್ ಯಾರು ಗೊತ್ತಾ?
ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ:
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ವೈಟ್ ಬಾಲ್ ಕ್ರಿಕೆಟ್ ಗೆ ಹೊಸ ವ್ಯಾಖ್ಯೆ ಸೃಷ್ಟಿಸಿದ ಇಂಗ್ಲೆಂಡ್ ಟೂರ್ನಿಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ಪಂದ್ಯವನ್ನೂ ಸಹ ಮಿಸ್ ಮಾಡಿಕೊಳ್ಳಲಿದ್ದಾರೆ.
ಅಂದಹಾಗೆ ಲಕ್ನೋದ ಮೈದಾನ ಸ್ಪಿನ್ ಸ್ನೇಹಿ ಪಿಚ್ ಆಗಿದ್ದು, ಶಾರ್ದೂಲ್ ಠಾಕೂರ್ ಬದಲಿಗೆ ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಆದರೆ ಪಾಂಡ್ಯ ಅನುಪಸ್ಥಿತಿಯಲ್ಲಿ ಟೀಮ್ ಮ್ಯಾನೇಜ್ಮೆಂಟ್ ಕೇವಲ ಐವರು ಬೌಲರ್’ಗಳೊಂದಿಗೆ ಕಣಕ್ಕಿಳಿಯಬೇಕು. ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಆಯ್ಕೆ ಖಚಿತವಾಗಿದೆ. ಅಶ್ವಿನ್ ಅವರನ್ನು ಮೂರನೇ ಸ್ಪಿನ್ನರ್ ಆಗಿ ಕಣಕ್ಕಿಳಿಸಬೇಕಾದರೆ ಮೊಹಮ್ಮದ್ ಶಮಿ ಅಥವಾ ಮೊಹಮ್ಮದ್ ಸಿರಾಜ್ ಅವರಲ್ಲಿ ಒಬ್ಬರನ್ನು ಕೈಬಿಡಬೇಕಾಗುತ್ತದೆ. ನ್ಯೂಜಿಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ಶಮಿ ಐದು ವಿಕೆಟ್ ಕಬಳಿಸಿದ್ದರು. ಹೀಗಾಗಿ ಅವರನ್ನು ತಂಡದಿಂದ ಹೊರಗಿಡುವುದು ಕಷ್ಟ. ಇದೇ ಕಾರಣವನ್ನು ನೋಡುವುದಾದರೆ ಸಿರಾಜ್ ತಂಡದಿಂದ ಹೊರಗುಳಿದು, ತನ್ನ ಸ್ಥಾನವನ್ನು ಅಶ್ವಿನ್ ಅವರಿಗೆ ತ್ಯಾಗ ಮಾಡಬಹುದು.
ಇನ್ನೊಂದೆಡೆ ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಕ್ರಮಾಂಕ ಉತ್ತಮವಾಗಿದೆ. ಭಾರತದ ಬ್ಯಾಟ್ಸ್ಮನ್’ಗಳು ಇದುವರೆಗೆ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಇದನ್ನೂ ಓದಿ: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ
ಡೆಂಗ್ಯೂನಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಶುಭ್ಮನ್ ಗಿಲ್ ವಿಶ್ವಕಪ್’ನಲ್ಲಿ ಮಹತ್ವದ ಇನ್ನಿಂಗ್ಸ್ ಆಡಲು ಕಾಯುತ್ತಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ತಮ್ಮ ದಾಖಲೆಯ 49 ನೇ ಶತಕವನ್ನು ಸಿಡಿಸಿ ಇತಿಹಾಸ ಸೃಷ್ಟಿಸಲು ಕಾತುರರಾಗಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ