ವಿಶ್ವಕಪ್’ನಲ್ಲಿ ಶ್ರೇಷ್ಠ ದಾಖಲೆ ಬರೆದ ರೋಹಿತ್ ಶರ್ಮಾ! ಇದುವರೆಗೆ ಯಾವೊಬ್ಬ ಕ್ರಿಕೆಟಿಗ ಮಾಡಲಾಗದ ಸಾಧನೆ ಇದು

Most Sixes In Calender Year: ರೋಹಿತ್ ಶರ್ಮಾ ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸರ್‌’ಗಳನ್ನು ಬಾರಿಸಿದ ಮೂರನೇ ಬ್ಯಾಟ್ಸ್‌ಮನ್ ಆಗಿದ್ದಾರೆ. ಈ ವರ್ಷ ಇದುವರೆಗೆ ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ 52 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Written by - Bhavishya Shetty | Last Updated : Oct 22, 2023, 11:08 PM IST
    • ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ 40 ಎಸೆತಗಳಲ್ಲಿ 46 ರನ್ ಗಳಿಸಿದರು
    • ಇದುವರೆಗೆ ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ 52 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ
    • ರೋಹಿತ್ ಶರ್ಮಾ ಈ ಬಾರಿಯ ವಿಶ್ವಕಪ್‌’ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ
ವಿಶ್ವಕಪ್’ನಲ್ಲಿ ಶ್ರೇಷ್ಠ ದಾಖಲೆ ಬರೆದ ರೋಹಿತ್ ಶರ್ಮಾ! ಇದುವರೆಗೆ ಯಾವೊಬ್ಬ ಕ್ರಿಕೆಟಿಗ ಮಾಡಲಾಗದ ಸಾಧನೆ ಇದು title=
Rohit Sharma

Most Sixes In Calender Year: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ 40 ಎಸೆತಗಳಲ್ಲಿ 46 ರನ್ ಗಳಿಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ ಅತ್ಯಂತ ವಿಶೇಷವಾದ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಒತ್ತಡ ತಡೆಯೋ ತಾಕತ್ ಇಲ್ಲಾಂದ್ರೆ ಭಾರತಕ್ಕೆ ಬರಬೇಡಿ: ಪಾಕ್ ಆಟಗಾರರಿಗೆ ಶ್ರೀಶಾಂತ್ ಹೀಗಂದಿದ್ದೇಕೆ?

ರೋಹಿತ್ ಶರ್ಮಾ ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸರ್‌’ಗಳನ್ನು ಬಾರಿಸಿದ ಮೂರನೇ ಬ್ಯಾಟ್ಸ್‌ಮನ್ ಆಗಿದ್ದಾರೆ. ಈ ವರ್ಷ ಇದುವರೆಗೆ ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ 52 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾಗಿಂತ ಮೊದಲು ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಮಾತ್ರ ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸರ್‌ಗಳ ಸಾಧನೆ ಮಾಡಿದ್ದರು.

ದಕ್ಷಿಣ ಆಫ್ರಿಕಾದ ಮಾಜಿ ದಿಗ್ಗಜ ಎಬಿ ಡಿವಿಲಿಯರ್ಸ್ ಈ ಸಾಧನೆ ಮಾಡಿದ ಮೊದಲಿಗರು. ಎಬಿ ಡಿವಿಲಿಯರ್ಸ್ 2015ರಲ್ಲಿ 59 ಸಿಕ್ಸರ್‌’ಗಳನ್ನು ಬಾರಿಸಿದ್ದರು. ಇದರ ನಂತರ, ವೆಸ್ಟ್ ಇಂಡೀಸ್ ಮಾಜಿ ಆಟಗಾರ ಕ್ರಿಸ್ ಗೇಲ್ ಒಂದು ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸರ್‌ಗಳ ಸಾಧನೆ ಮಾಡಿದರು. ಕ್ರಿಸ್ ಗೇಲ್ 2019 ರಲ್ಲಿ 56 ಸಿಕ್ಸರ್ ಬಾರಿಸಿದ್ದರು.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ವಿಶ್ವಕಪ್‌’ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇಲ್ಲಿಯವರೆಗೆ, ರೋಹಿತ್ ಶರ್ಮಾ ಈ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ 5 ಪಂದ್ಯಗಳಲ್ಲಿ 311 ರನ್ ಗಳಿಸಿದ್ದಾರೆ. ಅವರ ಸರಾಸರಿ 62.00 ಆಗಿದೆ.

ಇದನ್ನೂ ಓದಿ: ‘ರಾವಣ’ ಪಾತ್ರ ಮಾಡಲು ನಟ ಯಶ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ರೋಹಿತ್ ಶರ್ಮಾ ನಂತರ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಹೆಚ್ಚು ರನ್ ಗಳಿಸಿದ್ದಾರೆ. ಮೊಹಮ್ಮದ್ ರಿಜ್ವಾನ್ 4 ಪಂದ್ಯಗಳಲ್ಲಿ 98.00 ಸರಾಸರಿಯಲ್ಲಿ 294 ರನ್ ಗಳಿಸಿದ್ದಾರೆ. ಇವರ ನಂತರ ನ್ಯೂಜಿಲೆಂಡ್ ಆಲ್ ರೌಂಡರ್ ರಚಿನ್ ರವೀಂದ್ರ 5 ಪಂದ್ಯಗಳಲ್ಲಿ 72.50 ಸರಾಸರಿಯಲ್ಲಿ 290 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 5 ಪಂದ್ಯಗಳಲ್ಲಿ 141.00 ಸರಾಸರಿಯಲ್ಲಿ 282 ರನ್ ಗಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News