ವಿಶ್ವಕಪ್’ನಲ್ಲಿ ಇತಿಹಾಸ ಸೃಷ್ಟಿಸುವತ್ತ ರೋಹಿತ್ ಹೆಜ್ಜೆ! ಈ ದಾಖಲೆ ಬರೆಯಲಿರುವ ಮೊದಲ ಭಾರತೀಯ ಕ್ರಿಕೆಟಿಗ ಇವರೇ

Rohit Sharma World Record: ಅಕ್ಟೋಬರ್ 19ರಂದು ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ 4 ಸಿಕ್ಸರ್‌’ಗಳನ್ನು ಬಾರಿಸಿದರೆ, ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ವಿಷಯದಲ್ಲಿ ಎರಡನೇ ಸ್ಥಾನವನ್ನು ತಲುಪುತ್ತಾರೆ

Written by - Bhavishya Shetty | Last Updated : Oct 16, 2023, 09:24 PM IST
    • ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ 2023 ಪಂದ್ಯ
    • ವಿಶ್ವಕಪ್‌’ನಲ್ಲಿ ಇತಿಹಾಸ ಸೃಷ್ಟಿಸುವ ಸನಿಹಕ್ಕೆ ಬಂದ ರೋಹಿತ್ ಶರ್ಮಾ
    • ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್’ಗಳ ಪಟ್ಟಿ
ವಿಶ್ವಕಪ್’ನಲ್ಲಿ ಇತಿಹಾಸ ಸೃಷ್ಟಿಸುವತ್ತ ರೋಹಿತ್ ಹೆಜ್ಜೆ! ಈ ದಾಖಲೆ ಬರೆಯಲಿರುವ ಮೊದಲ ಭಾರತೀಯ ಕ್ರಿಕೆಟಿಗ ಇವರೇ title=
Rohit Sharma World Record

World Cup 2023: ಟೀಂ ಇಂಡಿಯಾದ ಬಲಿಷ್ಠ ಓಪನರ್ ಮತ್ತು ನಾಯಕ ರೋಹಿತ್ ಶರ್ಮಾ ವಿಶ್ವಕಪ್‌’ನಲ್ಲಿ ಇತಿಹಾಸ ಸೃಷ್ಟಿಸುವ ಸನಿಹಕ್ಕೆ ಬಂದಿದ್ದಾರೆ. ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಇನ್ನೂ 4 ಸಿಕ್ಸರ್‌’ಗಳನ್ನು ಬಾರಿಸಿದರೆ, ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನೇ ಬರೆಯಲಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ 2023 ಪಂದ್ಯವು ಅಕ್ಟೋಬರ್ 19 ಗುರುವಾರ ಪುಣೆಯ MCA ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ: ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡಲು ಕಿಚ್ಚ ಸುದೀಪ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ಅಕ್ಟೋಬರ್ 19ರಂದು ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ 4 ಸಿಕ್ಸರ್‌’ಗಳನ್ನು ಬಾರಿಸಿದರೆ, ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ವಿಷಯದಲ್ಲಿ ಎರಡನೇ ಸ್ಥಾನವನ್ನು ತಲುಪುತ್ತಾರೆ. ಈ ಮೂಲಕ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್‌’ಮನ್ ಎಬಿ ಡಿವಿಲಿಯರ್ಸ್ ಅವರನ್ನು ಹಿಂದಿಕ್ಕಲಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ಬ್ಯಾಟ್ಸ್‌’ಮನ್ ಕ್ರಿಸ್ ಗೇಲ್ ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಪ್ರಸ್ತುತ ಈ ಪಟ್ಟಿಯಲ್ಲಿ 37 ಸಿಕ್ಸರ್‌ ಬಾರಿಸಿದ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್‌’ಮನ್ ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಸದ್ಯ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ 34 ಸಿಕ್ಸರ್ ಬಾರಿಸಿದ್ದಾರೆ.

ಅಕ್ಟೋಬರ್ 19 ರಂದು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ 4 ಸಿಕ್ಸರ್‌’ಗಳನ್ನು ಬಾರಿಸಿದರೆ, ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ವಿಷಯದಲ್ಲಿ ಎರಡನೇ ಸ್ಥಾನಕ್ಕೆ ತಲುಪುತ್ತಾರೆ.

ಇದನ್ನೂ ಓದಿ: ವಿಶ್ವಕಪ್ ಬಳಿಕ ನಿವೃತ್ತಿ ಘೋಷಣೆಗೆ ಮುಂದಾದ ನಾಯಕ! 23ರ ಹರೆಯದ ಸ್ಪಿನ್ನರ್ ಮುಂದಿನ ಕ್ಯಾಪ್ಟನ್..!

ಏಕದಿನ ವಿಶ್ವಕಪ್‌’ನಲ್ಲಿ ಅತಿ ಹೆಚ್ಚು ಸಿಕ್ಸರ್‌’ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್’ಗಳ ಪಟ್ಟಿ

1. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 49 ಸಿಕ್ಸರ್

2. ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ) - 37 ಸಿಕ್ಸರ್‌

3. ರೋಹಿತ್ ಶರ್ಮಾ (ಭಾರತ) - 34 ಸಿಕ್ಸರ್‌

4. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 31 ಸಿಕ್ಸರ್‌

5. ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್) - 29 ಸಿಕ್ಸರ್‌

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News