ಶ್ರೀಲಂಕಾ ವಿರುದ್ಧದ ಪಂದ್ಯಕ್ಕಿಲ್ಲ ಹಾರ್ದಿಕ್ ಪಾಂಡ್ಯ, ಬದಲಿಯಾಗಿ ಈ ಆಟಗಾರ ಆಡಲಿದ್ದಾರೆ: ರೋಹಿತ್ ಶರ್ಮಾ ಹೇಳಿಕೆ
Rohit Sharma Press Meet: ಟೀಂ ಇಂಡಿಯಾದ ಉಪನಾಯಕ ಮತ್ತು ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ವಿರುದ್ಧ ನಾಳೆ ಅಂದರೆ ನವೆಂಬರ್ 2 ರಂದು ವಿಶ್ವಕಪ್ ಪಂದ್ಯವನ್ನು ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ರೋಹಿತ್ ಶರ್ಮಾ ಮಾತನಾಡಿದ್ದಾರೆ.
Rohit Sharma Press Meet: ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಟಾರ್ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಫಿಟ್‌ನೆಸ್ ಬಗ್ಗೆ ಅಪ್‌ಡೇಟ್ ನೀಡಿದ್ದಾರೆ.
ಟೀಂ ಇಂಡಿಯಾದ ಉಪನಾಯಕ ಮತ್ತು ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ವಿರುದ್ಧ ನಾಳೆ ಅಂದರೆ ನವೆಂಬರ್ 2 ರಂದು ವಿಶ್ವಕಪ್ ಪಂದ್ಯವನ್ನು ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ರೋಹಿತ್ ಶರ್ಮಾ ಮಾತನಾಡಿದ್ದಾರೆ.
ಇದನ್ನೂ ಓದಿ: “ದೇಶದ್ರೋಹ ಬಗೆಯುವ ಪರಿಸ್ಥಿತಿ ಬಂದ್ರೆ..”- ಟೀಂ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಹೇಳಿಕೆ ವೈರಲ್
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ 2023 ಪಂದ್ಯ ನಾಳೆ ಅಂದರೆ ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವನ್ನು ಟೀಮ್ ಇಂಡಿಯಾ ಗೆದ್ದರೆ 2023 ರ ವಿಶ್ವಕಪ್ ಸೆಮಿಫೈನಲ್’ಗೆ ರಾಜಾರೋಷವಾಗಿ ಎಂಟ್ರಿ ಪಡೆಯಲಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯಕ್ಕೂ ಒಂದು ದಿನ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಹಾರ್ದಿಕ್ ಪಾಂಡ್ಯ ಬಹಳ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ನಾವು ಪ್ರತಿದಿನ ಅವರ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ. ಅವರು ಶೀಘ್ರದಲ್ಲೇ ತಂಡಕ್ಕೆ ಹಿಂತಿರುಗುತ್ತಾರೆ ಎಂದು ಭಾವಿಸುತ್ತೇವೆ. ನಾಳಿನ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಲಭ್ಯರಿರುವುದಿಲ್ಲ. ಆದಷ್ಟು ಬೇಗ ಹಾರ್ದಿಕ್ ಪಾಂಡ್ಯ ಮೈದಾನಕ್ಕೆ ಮರಳುವ ಅವಕಾಶ ಸಿಗುತ್ತದೆ ಎಂದು ಭಾವಿಸುತ್ತೇವೆ” ಎಂದಿದ್ದಾರೆ.
ಹಾರ್ದಿಕ್ ಪಾಂಡ್ಯ ಅಲಭ್ಯವಿರುವ ಕಾರಣ ಈ ಸ್ಥಾನದಲ್ಲಿ ಮೊಹಮ್ಮದ್ ಶಮಿ ಮತ್ತು ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ಅಂದರೆ ಕಳೆದ ಪಂದ್ಯದಂತೆಯೇ ಪ್ಲೇಯಿಂಗ್ 11 ಮುಂದುವರೆಯುವ ಸಾಧ್ಯತೆ ಇದೆ.
2023ರ ವಿಶ್ವಕಪ್’ನಲ್ಲಿ ತಮ್ಮ ಫಾರ್ಮ್ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ, “ನಾನು ನನ್ನ ಬ್ಯಾಟಿಂಗ್’ನ್ನು ಆನಂದಿಸುತ್ತಿದ್ದೇನೆ. ಆದರೆ ಮತ್ತಷ್ಟು ಉತ್ತಮವಾಗಿ ಬ್ಯಾಟ್ ಬೀಸಬೇಕು. ಒಬ್ಬ ಬ್ಯಾಟ್ಸ್‌ಮನ್ ಆಗಿ ನಾನು ಪರಿಸ್ಥಿತಿಯನ್ನು ಹೊಂದಿಸಬೇಕು” ಎಂದಿದ್ದಾರೆ.
2023ರ ವಿಶ್ವಕಪ್’ನಲ್ಲಿ ಸತತ 6 ಪಂದ್ಯಗಳನ್ನು ಗೆದ್ದ ಟೀಮ್ ಇಂಡಿಯಾ ಈಗ 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿ ಅಗ್ರಸ್ಥಾನದಲ್ಲಿದೆ. ಇನ್ನು ಸೆಮಿಫೈನಲ್ ತಲುಪಲು ಕೇವಲ ಒಂದು ಪಂದ್ಯ ಗೆದ್ದರೂ ಸಾಕು. ಆದರೆ ಟೀಮ್ ಇಂಡಿಯಾ ಕೈಯಲ್ಲಿ 3 ಪಂದ್ಯಗಳಿದ್ದು, ಇದುವರೆಗಿನಂತೆ ಮುಂದೆಯೂ ಪ್ರದರ್ಶನ ನೀಡುತ್ತಾರಾ ಎಂದು ಕಾದುನೋಡಬೇಕಿದೆ.
ಇದನ್ನೂ ಓದಿ: ವಿಶ್ವಕಪ್’ನಲ್ಲಿ ಟೀಂ ಇಂಡಿಯಾದ ದೊಡ್ಡ ದೌರ್ಬಲ್ಯ ಈ ಆಟಗಾರ…!- ಪಾಕ್ ಆಟಗಾರನ ಬಹಿರಂಗ ಹೇಳಿಕೆ ವೈರಲ್
2023ರ ವಿಶ್ವಕಪ್’ನಲ್ಲಿ ಟೀಂ ಇಂಡಿಯಾ 6 ಪಂದ್ಯಗಳನ್ನು ಆಡಿದೆ. ಇನ್ನೂ 3 ಪಂದ್ಯಗಳು ಬಾಕಿ ಇವೆ. ನವೆಂಬರ್ 2 ರಂದು ಶ್ರೀಲಂಕಾ ವಿರುದ್ಧ, ನವೆಂಬರ್ 5 ರಂದು ದಕ್ಷಿಣ ಆಫ್ರಿಕಾ ಮತ್ತು ನವೆಂಬರ್ 12 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಪಂದ್ಯಗಳನ್ನು ಆಡಬೇಕಾಗಿದೆ. ಪ್ರಸ್ತುತ ಟೀಂ ಇಂಡಿಯಾ ಓಡುತ್ತಿರುವ ಫಾರ್ಮ್ ಅನ್ನು ನೋಡಿದರೆ, ಅದು ತನ್ನ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರ ತಂಡವಾಗಿ ಲೀಗ್ ಹಂತವನ್ನು ಕೊನೆಗೊಳಿಸುತ್ತದೆ ಎಂದನಿಸುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.