IND vs PAK, Team India Playing 11: ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ನಾಳೆ ಅಂದರೆ ಅಕ್ಟೋಬರ್ 14ರಂದು ನಡೆಯಲಿದೆ. ಈ ಟೂರ್ನಿಗೆ ಅಹಮದಾಬಾದ್’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಾಕ್ಷಿಯಾಗಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಾಕ್ ವಿರುದ್ಧದ ಪಂದ್ಯದಿಂದ ಭಾರತದ ಆಲ್’ರೌಂಡರ್ ರೂಲ್ಡೌಟ್! ಆಸೀಸ್ ವಿರುದ್ಧ ಟೀಂ ಇಂಡಿಯಾ ಗೆದ್ದಿದ್ದೇ ಈತನಿಂದ…


ಐಸಿಸಿ ವಿಶ್ವಕಪ್‌’ನ 12 ನೇ ಗುಂಪು-ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡ ನಾಳೆ ಸೆಣಸಾಡಲಿವೆ. ವಿಶ್ವ ಟೂರ್ನಿ ಆರಂಭವಾದಾಗನಿಂದ ಮೊದಲೆರಡು ಪಂದ್ಯಗಳನ್ನು ಎರಡೂ ತಂಡಗಳು ಗೆದ್ದಿದ್ದು, ಹೆಚ್ಚಿನ ಆತ್ಮವಿಶ್ವಾಸದಲ್ಲಿವೆ. ಭಾರತವು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನವನ್ನು ಸೋಲಿಸಿದೆ, ಪಾಕಿಸ್ತಾನವು ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ ವಿರುದ್ಧ ಭರ್ಜರಿ ಜಯಗಳಿಸುವ ಮೂಲಕ ತಮ್ಮ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಿದೆ.


ಟೀಂ ಇಂಡಿಯಾದ ಬಗ್ಗೆ ಮಾತನಾಡುವುದಾದರೆ, ಡೆಂಗ್ಯೂ ಜ್ವರದಿಂದಾಗಿ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಮೊದಲೆರಡು ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಗಿಲ್ ಅಭ್ಯಾಸವನ್ನು ಪ್ರಾರಂಭಿಸಿದ್ದು, ಮುಂದಿನ ಪಂದ್ಯಕ್ಕೆ ಲಭ್ಯವಾಗುವ ಸಾಧ್ಯತೆ ಇದೆ. ಒಂದು ವೇಳೆ ಗಿಲ್ ತಂಡಕ್ಕೆ ಎಂಟ್ರಿ ಕೊಟ್ಟಲ್ಲಿ ಇಶಾನ್ ಕಿಶನ್ ಹೊರಗುಳಿಯುವ ಸಾಧ್ಯತೆ ಇದೆ.  


ಶಮಿ ಅಥವಾ ಸಿರಾಜ್?


ಏಷ್ಯಾಕಪ್ ಫೈನಲ್‌’ನಲ್ಲಿ ಶ್ರೀಲಂಕಾ ವಿರುದ್ಧ ಅಬ್ಬರಿಸಿದ್ದ ಮೊಹಮ್ಮದ್ ಸಿರಾಜ್ ಪಾಕ್ ವಿರುದ್ಧದ ಪಂದ್ಯದಿಂದ ಹೊರಗುಳಿಯಬಹುದು, ಇದಕ್ಕೆ ಕಾರಣ ಕಳೆದ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿ ಕೆಟ್ಟ ದಾಖಲೆ ಬರೆದಿರುವುದು. ಸದ್ಯ ಸಿರಾಜ್ ಅವರ ಕಳಪೆ ಫಾರ್ಮ್ ಅನ್ನು ಪರಿಗಣಿಸಿ ತಂಡದಿಂದ ಹೊರಗಿಟ್ಟರೆ, ಮೊಹಮ್ಮದ್ ಶಮಿ ಅವರನ್ನು ಸೇರ್ಪಡೆಗೊಳಿಸಬಹುದು.


ಇದನ್ನೂ ಓದಿ:  ಮುಂದಿನ 2 ದಿನ ಈ ಭಾಗಗಳಲ್ಲಿ ಕುಂಭದ್ರೋಣ ಮಳೆ! ಗುಡುಗು-ಮಿಂಚು ಜೊತೆ ಸುಳಿಗಾಳಿ ಬೀಸುವ ಮುನ್ಸೂಚನೆ


ಭಾರತದ ಸಂಭಾವ್ಯ ಪ್ಲೇಯಿಂಗ್ XI:


ರೋಹಿತ್ ಶರ್ಮಾ (ನಾ), ಶುಭ್ಮನ್ ಗಿಲ್ (ಅವರು ಫಿಟ್ ಆಗದಿದ್ದರೆ ಇಶಾನ್ ಕಿಶನ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್/ಮೊಹಮ್ಮದ್ ಶಮಿ,


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ