ಸಚಿನ್ ಬಳಿಕ ರಿಕಿ ಪಾಂಟಿಂಗ್ ವಿಶ್ವದಾಖಲೆ ಮುರಿದ ವಿರಾಟ್! ಸಕ್ರಿಯ ಆಟಗಾರನಾಗಿ ಹೊಸ ಇತಿಹಾಸ ಬರೆದ ಏಕೈಕ ಆಟಗಾರನೀತ
Most Run Scorer in World Cup, Virat Kohli: ಟೀಂ ಇಂಡಿಯಾ ಉತ್ತಮ ಆರಂಭ ಪಡೆಯದ ಕಾರಣ ಭಾರತ 11 ಓವರ್ ಗಳೊಳಗೆ ಮೂರು ವಿಕೆಟ್ ಕಳೆದುಕೊಂಡಿತ್ತು. 4 ರನ್ ಗಳಿಸಿದ ಶುಭ್ಮನ್ ಗಿಲ್ ಔಟ್ ಆಗುವ ಮೂಲಕ ಭಾರತಕ್ಕೆ ಮೊದಲ ಹೊಡೆತ ಬಿದ್ದಿತು.
Virat Kohli, World Cup 2023: ಐಸಿಸಿ ಏಕದಿನ ವಿಶ್ವಕಪ್ 2023ರ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಅಹಮದಾಬಾದ್’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಆದರೆ, ಟೀಂ ಇಂಡಿಯಾ ಉತ್ತಮ ಆರಂಭ ಪಡೆಯದ ಕಾರಣ ಭಾರತ 11 ಓವರ್ ಗಳೊಳಗೆ ಮೂರು ವಿಕೆಟ್ ಕಳೆದುಕೊಂಡಿತ್ತು. 4 ರನ್ ಗಳಿಸಿದ ಶುಭ್ಮನ್ ಗಿಲ್ ಔಟ್ ಆಗುವ ಮೂಲಕ ಭಾರತಕ್ಕೆ ಮೊದಲ ಹೊಡೆತ ಬಿದ್ದಿತು. ಇದಾದ ಬಳಿಕ ಮತ್ತೊಮ್ಮೆ ಅರ್ಧಶತಕ ವಂಚಿತರಾದ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾಗುವ ಮೂಲಕ ಭಾರತಕ್ಕೆ ಎರಡನೇ ಹೊಡೆತ ಬಿದ್ದಿತು. ಶ್ರೇಯಸ್ ಅಯ್ಯರ್ ಆದ್ರೂ ತಂಡಕ್ಕೆ ಬಲ ನೀಡುತ್ತಾರೆ ಎಂದೆನ್ನುವ ಹೊತ್ತಿಗೆ ಅವರು ಕೂಡ ಕೇವಲ 4 ರನ್ ಗಳಿಸಿ ಔಟಾದರು.
ಇದನ್ನೂ ಓದಿ: “ಇಂದು ಈ ತಂಡ ಸುಲಭವಾಗಿ ವಿಶ್ವಕಪ್ ಗೆಲ್ಲುತ್ತೆ” – ಫೈನಲ್ ಪಂದ್ಯದ ವೇಳೆ ಶೋಯೆಬ್ ಅಖ್ತರ್ ಹೇಳಿಕೆ
ಆದರೆ ಸುದ್ದಿ ಬರೆಯುವವರೆಗೂ ಕ್ರೀಸ್’ನಲ್ಲಿದ್ದ ವಿರಾಟ್ ಕೊಹ್ಲಿ, ಪಂದ್ಯಕ್ಕೆ ಎಂಟ್ರಿ ಕೊಟ್ಟ ತಕ್ಷಣ ಬಹುದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿದ್ದಾರೆ.
ಕ್ರೀಸ್‌ಗೆ ಬಂದ ಕೊಹ್ಲಿ ಮೊದಲ ಮೂರು ರನ್’ಗಳನ್ನು ಸಿಂಗಲ್’ನೊಂದಿಗೆ ಗಳಿಸಿದರು. ನಂತರ ಬೌಂಡರಿ ಬಾರಿಸಿದರು. ಈ ಫೋರ್’ನೊಂದಿಗೆ ವಿರಾಟ್ ಕೊಹ್ಲಿ ವಿಶ್ವಕಪ್’ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು.
ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿ ಈ ದಾಖಲೆ ಬರೆದಿರುವುದು ವಿಶೇಷ. ರಿಕಿ ಪಾಂಟಿಂಗ್ ಅವರು ವಿಶ್ವಕಪ್’ನ 46 ಇನ್ನಿಂಗ್ಸ್‌ಗಳಲ್ಲಿ 45.86 ಸರಾಸರಿಯೊಂದಿಗೆ 1743 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಶತಕ ಮತ್ತು ಆರು ಅರ್ಧ ಶತಕಗಳು ಸೇರಿವೆ. ಮತ್ತೊಂದೆಡೆ, ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ಐದು ಶತಕ ಮತ್ತು 11 ಅರ್ಧಶತಕಗಳನ್ನು ಹೊಂದಿದ್ದು, ಇದೀಗ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ.
ಇದನ್ನೂ ಓದಿ: ಇಂದು ವಿಶ್ವಕಪ್ ಗೆಲ್ಲುತ್ತಾ ಭಾರತ? ನಾಯಕ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಜಾತಕ ಏನ್ ಹೇಳ್ತಿದೆ?
ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಸಚಿನ್ ಅವರು 45 ಪಂದ್ಯಗಳ 44 ಇನ್ನಿಂಗ್ಸ್’ಗಳಲ್ಲಿ 56.95 ಸರಾಸರಿಯಲ್ಲಿ 2278 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 28 ಪಂದ್ಯಗಳಲ್ಲಿ 62.40 ಸರಾಸರಿಯಲ್ಲಿ 1560 ರನ್ ಗಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.