ಈ ವಿಶ್ವದಾಖಲೆ ಬರೆಯಲು ಒಂದೇ ಹೆಜ್ಜೆ ಬಾಕಿ…! ಕೀವೀಸ್ ವಿರುದ್ಧ ನನಸಾಗುತ್ತಾ ವಿರಾಟ್ ಕನಸಿನ ರೆಕಾರ್ಡ್?
Virat Kohli, ODI World Cup 2023: ಶ್ರೇಷ್ಠ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಈ ದಾಖಲೆಯನ್ನು ಸರಿಗಟ್ಟಿದರೆ, ವಿರಾಟ್ ಕೊಹ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಲಿದ್ದಾರೆ. ಅಕ್ಟೋಬರ್ 22 ರ ಭಾನುವಾರ, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ (IND vs NZ) ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆಯಲಿದೆ.
Virat Kohli, ODI World Cup 2023: ಭಾರತದ ಬಲಿಷ್ಠ ಬ್ಯಾಟ್ಸ್‌ಮನ್’ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಈಗ ಮತ್ತೊಂದು ವಿಶ್ವದಾಖಲೆಯ ಮೇಲೆ ಕಣ್ಣಿಟ್ಟಿದ್ದಾರೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ತಮ್ಮ ಕನಸನ್ನು ನನಸು ಮಾಡಿಕೊಳ್ಳುತ್ತಾರಾ ಕಾದುನೋಡಬೇಕಿದೆ.
ಇದನ್ನೂ ಓದಿ: 4 ರನ್’ಗೆ 2 ವಿಕೆಟ್ ಕಿತ್ತ ಕಿಲಾಡಿ! ಮಾವನ ದಾಖಲೆಯನ್ನೇ ಮುರಿದು ವಿಶ್ವದಾಖಲೆ ಬರೆದ ಸ್ಟಾರ್ ವೇಗಿ
ಶ್ರೇಷ್ಠ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಈ ದಾಖಲೆಯನ್ನು ಸರಿಗಟ್ಟಿದರೆ, ವಿರಾಟ್ ಕೊಹ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಲಿದ್ದಾರೆ. ಅಕ್ಟೋಬರ್ 22 ರ ಭಾನುವಾರ, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ (IND vs NZ) ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆಯಲಿದೆ. ವಿರಾಟ್ ಕಳೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 103 ರನ್’ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.
34 ವರ್ಷದ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್’ನಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ODI ವೃತ್ತಿಜೀವನದ 48 ನೇ ಶತಕವನ್ನು ಗಳಿಸಿದರು. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್’ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿಚಾರದಲ್ಲಿ ಅವರು ಸಚಿನ್ ತೆಂಡೂಲ್ಕರ್’ಗಿಂತ ಕೇವಲ ಒಂದು ಹೆಜ್ಜೆ ಹಿಂದಿದ್ದಾರೆ. ಸಚಿನ್ ಈ ಮಾದರಿಯಲ್ಲಿ 49 ಶತಕಗಳನ್ನು ಬಾರಿಸಿದ್ದಾರೆ. ಆದರೆ, ವಿರಾಟ್ 285 ಪಂದ್ಯಗಳನ್ನು ಆಡಿದ್ದರೆ, ಸಚಿನ್ 463 ODI ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಇದನ್ನೂ ಓದಿ: “ಕಸಿದುಕೊಂಡಿದ್ದೇನೆ ಕ್ಷಮಿಸು…”-ಶತಕ ಸಿಡಿಸಿದ ಬಳಿಕ ಜಡೇಜಾ ಬಳಿಕ ಕ್ಷಮೆ ಕೇಳಿದ ಕೊಹ್ಲಿ! ಕಾರಣ…?
ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ತಕ್ಷಣ ಸಚಿನ್ ಅವರ ವಿಶ್ವದಾಖಲೆಯನ್ನು ಸರಿಗಟ್ಟಲಿದ್ದಾರೆ. ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಇದುವರೆಗೆ 78 ಶತಕಗಳನ್ನು ದಾಖಲಿಸಿದ್ದಾರೆ. ಧರ್ಮಶಾಲಾ ಪಿಚ್ ಬ್ಯಾಟಿಂಗ್’ಗೆ ಸೂಕ್ತವಾಗಿದೆ ಎಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲದೆ, ಕೊಹ್ಲಿ ಕೂಡ ಅತ್ಯುತ್ತಮ ಫಾರ್ಮ್’ನಲ್ಲಿದ್ದಾರೆ. ಹೀಗಿರುವಾಗ ಕೊಹ್ಲಿ ಶ್ರೇಷ್ಠ ಸಾಧನೆ ಮಾಡುವ ಎಲ್ಲಾ ಸೂಚನೆಗಳಿವೆ. 247 ಏಕದಿನ ಇನ್ನಿಂಗ್ಸ್’ಗಳಲ್ಲಿ 31 ಶತಕ ಸಿಡಿಸಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.