Virat eye on Sachin's big record : ವಿಶ್ವಕಪ್ 2023 ರ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿರುವ ಟೀಂ ಇಂಡಿಯಾ ಹುಮ್ಮಸ್ಸಿನಲ್ಲಿದೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಈ ದೊಡ್ಡ ದಾಖಲೆಯನ್ನು ಮುರಿಯಬಹುದು. ಈ ದಾಖಲೆ ಬರೆಯಲು ವಿರಾಟ್ ಗೆ ಬೇಕಾಗಿರುವುದು ಕೆಲವೇ ಇಷ್ಟೇ ರನ್‌. 


COMMERCIAL BREAK
SCROLL TO CONTINUE READING

ಅದ್ಭುತ ದಾಖಲೆ ಮಾಡಲಿದ್ದಾರೆ ವಿರಾಟ್ : 
ಈ ಪಂದ್ಯದಲ್ಲಿ ಎಲ್ಲರ ಕಣ್ಣು ಟೀಂ ಇಂಡಿಯಾದ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ. ದೆಹಲಿ ವಿರಾಟ್ ಕೊಹ್ಲಿಯ ತವರು. ತವರು ನೆಲದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಮಾನ್ಯವಾಗಿ ಎಲ್ಲಾ ಆಟಗಾರರು ಬಯಸುತ್ತಾರೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್ ಅವರ ಶ್ರೇಷ್ಠ ದಾಖಲೆಯನ್ನು ಮುರಿದು ನಂಬರ್-1 ಆಗಲು ವಿರಾಟ್‌ಗೆ ಉತ್ತಮ ಅವಕಾಶವಿದೆ. ಇಂದಿನ ಪಂದ್ಯದಲ್ಲಿ ಕೊಹ್ಲಿ ಸಚಿನ್ ದಾಖಲೆ ಮುರಿಯಲಿದ್ದಾರೆಯೇ ಎನ್ನುವುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. 


ಇದನ್ನೂ ಓದಿ : World Cup 2023: ಭಾರತ vs ಅಫ್ಘಾನಿಸ್ತಾನ ಪಂದ್ಯ ಉಚಿತವಾಗಿ ವೀಕ್ಷಿಸಬೇಕೇ? ಹಾಗಾದ್ರೆ ಈ ಸಣ್ಣ ಟಿಪ್ಸ್ ಫಾಲೋ ಮಾಡಿ


ಸಚಿನ್ ಹೆಸರಿನಲ್ಲಿದೆ ಈ ದೊಡ್ಡ ದಾಖಲೆ : 
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಬ್ಯಾಟ್ಸ್‌ಮನ್ ಅಂದರೆ ಸಚಿನ್ ತೆಂಡೂಲ್ಕರ್. ಸಚಿನ್ ಈ ಮೈದಾನದಲ್ಲಿ 8 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ 8  ಪಂದ್ಯಗಳಲ್ಲಿ 300 ರನ್ ಗಳಿಸಿದ್ದಾರೆ. ಇದೀಗ ಈ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ ಕೊಹ್ಲಿ. ಈ ಮೈದಾನದಲ್ಲಿ ಕೊಹ್ಲಿ ಇದುವರೆಗೆ 7 ಏಕದಿನ ಪಂದ್ಯಗಳಲ್ಲಿ 222 ರನ್ ಗಳಿಸಿದ್ದಾರೆ. ಸಚಿನ್ ದಾಖಲೆ ಮುರಿಯಲು ವಿರಾಟ್  ಇಂದಿನ ಪಂದ್ಯದಲ್ಲಿ 79 ರನ್‌ಗಳನ್ನು  ಸಿಡಿಸಬೇಕು. 


ಆಸ್ಟ್ರೇಲಿಯಾ ವಿರುದ್ಧ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್  :
ವಿರಾಟ್ ಕೊಹ್ಲಿ ಸದ್ಯಕ್ಕೆ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ  ಪಂದ್ಯದಲ್ಲಿ ಕೊಹ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿ ಕೊಹ್ಲಿ, ಕೆಎಲ್ ರಾಹುಲ್ ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ 165 ರನ್‌ಗಳ ದಾಖಲೆಯ ಜೊತೆಯಾಟವನ್ನು ಮಾಡಿದರು. ಆದರೆ, ಕೊಹ್ಲಿ 85 ರನ್ ಗಳಿಸಿ ಪೆವಿಲಿಯನ್ ಗೆ ಮರಳಬೇಕಾಯಿತು. 


ಇದನ್ನೂ ಓದಿ : IND vs AFG: ಅಫ್ಘಾನಿಸ್ತಾನದ ವಿರುದ್ಧ ಭಾರತದ ಪ್ಲೇಯಿಂಗ್ 11.. ಈ ಒಂದು ಬದಲಾವಣೆ ಫಿಕ್ಸ್‌..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.