ಇಂಗ್ಲೆಂಡ್ ವಿರುದ್ದ ಹಾರ್ದಿಕ್ ಪಾಂಡ್ಯನನ್ನು ಕಣಕ್ಕಿಳಿಸುತ್ತಾರೆಯೇ ರೋಹಿತ್ ಶರ್ಮಾ? ಇಲ್ಲಾ ಈ ಆಟಗಾರನಿಗೆ ನೀಡುತ್ತಾರಾ ಅವಕಾಶ?
Hardik Pandya Injury Update:ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಅಪ್‌ಡೇಟ್ ಹೊರಬಿದ್ದಿದೆ.
Hardik Pandya Injury Update: ICC ODI ವಿಶ್ವಕಪ್ ((ODI World Cup-2023) ನಲ್ಲಿ ಭಾರತ ತಂಡದ ಗೆಲುವಿನ ಅಭಿಯಾನ ಮುಂದುವರೆದಿದೆ. ರೋಹಿತ್ ಶರ್ಮಾ ಸಾರಥ್ಯದ ತಂಡ ಇದುವರೆಗೆ ಆಡಿದ ಎಲ್ಲಾ 5 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈಗ ಅಕ್ಟೋಬರ್ 29ರ ಭಾನುವಾರದಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ಟೀಂ ಇಂಡಿಯಾ ಎದುರಿಸಬೇಕಾಗಿದೆ. ಈ ಮಧ್ಯೆ, ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಅಪ್‌ಡೇಟ್ ಹೊರಬಿದ್ದಿದೆ.
ಹಾರ್ದಿಕ್‌ಗೆ ಪಾದಕ್ಕೆ ಗಾಯ :
ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರೆ. ಚೆಂಡನ್ನು ನಿಲ್ಲಿಸಲು ಪ್ರಯತ್ನಿಸುತ್ತಿರುವಾಗ, ಅವರ ಎಡ ಪಾದಕ್ಕೆ ಗಾಯವಾಗಿದೆ. ಇದರಿಂದಾಗಿ ಅವರು ತಕ್ಷಣವೇ ಮೈದಾನ ಬಿಟ್ಟು ಹೊರ ಬರಬೇಕಾಯಿತು. ಇದಾದ ನಂತರ ಪಾಂಡ್ಯ ಅವರನ್ನು ಸ್ಕ್ಯಾನ್ ಮಾಡಲಾಗಿತ್ತು ಮಾತ್ರವಲ್ಲ, ಲಂಡನ್‌ನಿಂದ ತಜ್ಞ ವೈದ್ಯರ ಆರೈಕೆಯಲ್ಲಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (NCA)ಕರೆದೊಯ್ಯಲಾಯಿತು. ಗಾಯದ ಕಾರಣ ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನು ಹಾರ್ದಿಕ್ ಪಾಂಡ್ಯ ಆಡುವುದು ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ : World Cup: ದಕ್ಷಿಣ ಆಫ್ರಿಕಾದ ಗೆಲುವಿನಿಂದ ಪಾಯಿಂಟ್ಸ್ ಟೇಬಲ್ ಬದಲಾವಣೆ ! ಭಾರತ ಈಗ ಯಾವ ಸ್ಥಾನದಲ್ಲಿದೆ ?
ಗಾಯ ಗಂಭೀರವಾಗಿಲ್ಲ:
ಹಾರ್ದಿಕ್ ಅವರ ಕಾಲು ಉಳುಕಿದ್ದು, ಗಾಯ ಗಂಭೀರವಾದುದಲ್ಲ ಎಂದು ವರದಿಗಳು ಹೇಳಿವೆ. ಬಿಸಿಸಿಐ ಮತ್ತು ತಂಡದ ಮ್ಯಾನೇಜ್‌ಮೆಂಟ್ ಹಾರ್ದಿಕ್ ಚೇತರಿಕೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಾರ್ದಿಕ್ ಪಾಂಡ್ಯ ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎನ್ನುವ ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮೈದಾನಕ್ಕೆ ಇಳಿಯುತ್ತಾರಾ ಹಾರ್ದಿಕ್ :
ಹಾರ್ದಿಕ್ ಇಂಗ್ಲೆಂಡ್ ವಿರುದ್ಧ ಆಡುವ ಬಗ್ಗೆ ಬಿಸಿಸಿಐ ಅಧಿಕಾರಿಗಳು ಇನ್ನು ಕೂಡಾ ಯಾವುದೇ ರೀತಿಯ ಸ್ಪಷ್ಟೀಕರಣ ನೀಡಿಲ್ಲ. ರೋಹಿತ್ ಶರ್ಮಾ ನಾಯಕತ್ವದ ತಂಡ ಈ ಹಂತದಲ್ಲಿ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳಲು ಸಿದ್ದರಿಲ್ಲ. ತಂಡದಲ್ಲಿ ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಸಿರಾಜ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದಲ್ಲದೇ ಪ್ರಸಕ್ತ ಟೂರ್ನಿಯಲ್ಲಿ ಇಂಗ್ಲೆಂಡ್‌ನ ಸ್ಥಿತಿಗತಿಯನ್ನು ಗಮನಿಸಿದರೆ ಭಾರತ ತಂಡದ ಮ್ಯಾನೇಜ್‌ಮೆಂಟ್ ರಿಸ್ಕ್ ತೆಗೆದುಕೊಳ್ಳುವ ಚಾನ್ಸ್ ಕಡಿಮೆ.
ಇದನ್ನೂ ಓದಿ : ವಿಶ್ವಕಪ್ ನಡುವೆ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ!
ಅಗ್ರಸ್ಥಾನದಲ್ಲಿದೆ ಟೀಂ ಇಂಡಿಯಾ :
ಇತ್ತೀಚಿಗೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಅನುಪಸ್ಥಿತಿಯ ಹೊರತಾಗಿಯೂ ಭಾರತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಗೆ ಅವಕಾಶ ನೀಡಲಾಯಿತು. ವೇಗಿ ಮೊಹಮ್ಮದ್ ಶಮಿ ಅಮೋಘ ಪ್ರದರ್ಶನ ನೀಡಿ 5 ವಿಕೆಟ್ ಕಬಳಿಸಿದ್ದರು. ಟೂರ್ನಿಯಲ್ಲಿ ಟೀಂ ಇಂಡಿಯಾ ಸತತ 5 ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿಗೆ ಅವಕಾಶ ನೀಡಲಾಗಿದ್ದು, ಶಾರ್ದೂಲ್ ಠಾಕೂರ್ ಅವರನ್ನು ಕೈಬಿಟ್ಟು ಸೂರ್ಯಕುಮಾರ್ ಯಾದವ್ ಅವರನ್ನು ಪ್ಲೇಯಿಂಗ್ 11 ನಲ್ಲಿ ಸೇರಿಸಲಾಗಿತ್ತು. ಇನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತೀರಾ ಕಳಪೆ ಪ್ರದರ್ಶನ ನೀಡಿದ್ದು, 4ರಲ್ಲಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.