World Cup 2023: ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 14 ರಂದು ಅಂದರೆ ನಾಳೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ವಿಶ್ವಕಪ್ 2023 ರಲ್ಲಿ ತಮ್ಮ ಮೊದಲ ಎರಡು ಪಂದ್ಯಗಳನ್ನು ಗೆದ್ದಿವೆ. ಇಂತಹ ಪರಿಸ್ಥಿತಿಯಲ್ಲಿ ಅಕ್ಟೋಬರ್ 14 ರಂದು ಉಭಯ ತಂಡಗಳ ನಡುವೆ  ಜಿದ್ದಾಜಿದ್ದಿನ ಸಂಘರ್ಷ ಕಾಣ ಸಿಗುವುದು ಖಚಿತ.


COMMERCIAL BREAK
SCROLL TO CONTINUE READING

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಮಳೆಯಿಂದಾಗಿ ರದ್ದಾಗುತ್ತದೆಯೇ? : 
ಅಕ್ಟೋಬರ್ 14 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಮತ್ತು ನವರಾತ್ರಿ ಉತ್ಸವಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. ಏಕೆಂದರೆ ಈ ಅವಧಿಯಲ್ಲಿ ಉತ್ತರ ಗುಜರಾತ್‌ನಲ್ಲಿ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‌ನ ಈ ಆಕರ್ಷಕ ಪಂದ್ಯ ಶನಿವಾರ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. 


ಇದನ್ನೂ ಓದಿ : ICC World Cup 2023: ಮತ್ತೊಂದು ಹೀನಾಯ ಸೋಲು ಕಂಡ ಕಾಂಗರೂ ಪಡೆ..!


ಹೊರಬಿದ್ದಿದೆ ಈ ಅಪ್ಡೇಟ್ :
ಭಾರತೀಯ ಹವಾಮಾನ ಇಲಾಖೆ ಹಂಚಿಕೊಂಡಿರುವ ಇತ್ತೀಚಿನ ಹವಾಮಾನ ಮಾಹಿತಿಯ ಪ್ರಕಾರ, ಅಕ್ಟೋಬರ್ 14 ಮತ್ತು 15 ರಂದು ಉತ್ತರ ಗುಜರಾತ್ ಮತ್ತು ಅಹಮದಾಬಾದ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಹಮದಾಬಾದ್‌ನ ಹವಾಮಾನ ಕೇಂದ್ರದ ನಿರ್ದೇಶಕಿ ಮನೋರಮಾ ಮೊಹಂತಿ, 'ಗುಜರಾತ್‌ನಲ್ಲಿ ಮುಂದಿನ ಐದು ದಿನಗಳಲ್ಲಿ ಹವಾಮಾನ ಶುಷ್ಕವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದಿದ್ದಾರೆ.  ಆದರೆ ಅಕ್ಟೋಬರ್ 14 ರಂದು ಅಹಮದಾಬಾದ್ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ. 


ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ 7-0 ಮುನ್ನಡೆ ಸಾಧಿಸಿರುವ ಭಾರತ  : 
ಭಾರತ ಮತ್ತು ಪಾಕಿಸ್ತಾನ ನಡುವಿನ ಏಕದಿನ ವಿಶ್ವಕಪ್‌ನಲ್ಲಿ ಇದುವರೆಗೆ ಒಟ್ಟು 7 ಪಂದ್ಯಗಳು ನಡೆದೆದಿವೆ. ಈ ಪೈಕಿ ಟೀಂ ಇಂಡಿಯಾ ಎಲ್ಲಾ ಏಳು ಪಂದ್ಯಗಳನ್ನು ಗೆದ್ದಿದೆ. 1992, 1996, 1999, 2003, 2011, 2015 ಮತ್ತು 2019 ರಲ್ಲಿ ನಡೆದ ಎಲ್ಲಾ ಏಳು ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಭಾರತವು ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದೆ. ಕಳೆದ ಬಾರಿ 2019ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 89 ರನ್‌ಗಳಿಂದ ಸೋಲಿಸಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ 5 ವಿಕೆಟ್ ಗೆ 336 ರನ್ ಗಳಿಸಿತ್ತು. ಮಳೆ ಅಡ್ಡಿಪಡಿಸಿದ ಈ ಪಂದ್ಯದಲ್ಲಿ ಪಾಕಿಸ್ತಾನಕ್ಕೆ 40 
ಓವರ್‌ಗಳಲ್ಲಿ 302 ರನ್‌ಗಳ ಪರಿಷ್ಕೃತ ಗುರಿ ಸಿಕ್ಕಿತ್ತು. ಇದಕ್ಕುತ್ತರವಾಗಿ ಪಾಕಿಸ್ತಾನ ತಂಡ 40 ಓವರ್‌ಗಳಲ್ಲಿ 6 ವಿಕೆಟ್‌ಗೆ 212 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ರೀತಿಯಾಗಿ ಭಾರತ 89 ರನ್‌ಗಳಿಂದ (DLS) ಜಯ ಸಾಧಿಸಿತು. 


ಇದನ್ನೂ ಓದಿ : ICC World Cup 2023: ಅ.14ರಂದು ಭಾರತ vs ಪಾಕ್ ಮುಖಾಮುಖಿ, ಭದ್ರತೆ ಹೇಗಿದೆ ಗೊತ್ತಾ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.