World cup 2023 : ಈ ಬಾರಿ ಭಾರತ ಏಕದಿನ ವಿಶ್ವಕಪ್ ಆತಿಥ್ಯ ವಹಿಸುತ್ತಿದೆ. ಈ ಟೂರ್ನಿಯಲ್ಲಿ ಈಗಾಗಲೇ 5 ಪಂದ್ಯಗಳು ನಡೆದಿವೆ. ಮೊದಲ ಪಂದ್ಯದಲ್ಲಿಯೇ ಭಾರತ ಆಸ್ಟ್ರೇಲಿಯಾ ವಿರುದ್ದ ಗೆಲುವು ಸಾಧಿಸಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ಕೂಡಾ ಮೊದಲ ಪಂದ್ಯ ಗೆದ್ದು ಬೀಗುತ್ತಿದೆ. ಆದರೆ ಈ ತಂಡದ ವಿಶ್ವದರ್ಜೆಯ ಪಂದ್ಯಶ್ರೇಷ್ಠ ಆಟಗಾರ ಸತತ ಎರಡನೇ ಪಂದ್ಯದಿಂದ ಹೊರಗುಳಿಯಲಿದ್ದಾರೆ. ತಂಡದ ಮುಖ್ಯ ಕೋಚ್ ಈ ಮಾಹಿತಿ ನೀಡಿದ್ದಾರೆ.
ಈ ತಂಡಕ್ಕೆ ದೊಡ್ಡ ಆಘಾತ:
2023ರ ವಿಶ್ವಕಪ್‌ನಲ್ಲಿ ಮೊದಲ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡಕ್ಕೆ ಇದು ಭಾರೀ ಹಿನ್ನೆಡೆ. ನೆದರ್ಲೆಂಡ್ಸ್ ವಿರುದ್ಧದ ಎರಡನೇ ಪಂದ್ಯದಿಂದ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ ಅವರನ್ನು ಕೈಬಿಡಲಾಗಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ವಿಲಿಯಮ್ಸನ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಇದನ್ನೂಓದಿ : ಗೆದ್ದರೂ ಕಳಪೆ ದಾಖಲೆ ಬರೆದ ಭಾರತ: ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡಿರದ ಕೆಟ್ಟ ರೆಕಾರ್ಡ್ ಇದು…!
ಮೂರನೇ ಪಂದ್ಯದಲ್ಲಿ ಆಡುವ ನಿರೀಕ್ಷೆ :
ವಿಲಿಯಮ್ಸನ್ ನಿಜವಾಗಿಯೂ ಅತ್ಯುತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಮೂರನೇ ಪಂದ್ಯದಲ್ಲಿ ಮೈದಾನಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಕೋಚ್ ತಿಳಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 2023 (ಐಪಿಎಲ್ 2023) ನಲ್ಲಿ ಕಾಣಿಸಿಕೊಂಡ ಮೊಣಕಾಲಿನ ಗಾಯದಿಂದ ವಿಲಿಯಮ್ಸನ್ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಕಾರಣದಿಂದಾಗಿ, ಅವರು 2023 ರ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲೂ ಆಡಲು ಸಾಧ್ಯವಾಗಿರಲಿಲ್ಲ.
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್‌ಗೆ ಅದ್ಭುತ ಜಯ:
ಇಂಗ್ಲೆಂಡ್ ವಿರುದ್ಧದ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸ್ಫೋಟಕ ಶೈಲಿಯನ್ನು ಪ್ರದರ್ಶಿಸಿ 9 ವಿಕೆಟ್‌ಗಳ ಜಯ ಸಾಧಿಸಿತು. ಇಂಗ್ಲೆಂಡ್ ನೀಡಿದ 283 ರನ್‌ಗಳ ಗುರಿಯನ್ನು ತಂಡದ ಇಬ್ಬರು ಬ್ಯಾಟ್ಸ್‌ಮನ್‌ಗಳು ಬೆನ್ನಟ್ಟಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ತಂಡದ ಪರ ಆರಂಭಿಕರಾದ ಡೆವೊನ್ ಕಾನ್ವೆ (152) ಮತ್ತು ರಚಿನ್ ರವೀಂದ್ರ (123) ಅಮೋಘ ಶತಕದ ಇನ್ನಿಂಗ್ಸ್‌ಗಳನ್ನು ಆಡಿದರು. ಸದ್ಯ ನ್ಯೂಜಿಲೆಂಡ್ 2 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಇದನ್ನೂಓದಿ : World Cup 2023: ಕೊಹ್ಲಿ, ರಾಹುಲ್ ಅದ್ಭುತ ಜೊತೆಯಾಟ-ಜಡೇಜಾ ಸ್ಪಿನ್ ಮೋಡಿ: ವಿಶ್ವಕಪ್’ನಲ್ಲಿ ಭಾರತಕ್ಕೆ ಗೆಲುವಿನ ಶುಭಾರಂಭ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.