Ruturaj Gaikwad: ಒಂದೇ ಓವರ್‌ನಲ್ಲಿ 7 ಸಿಕ್ಸರ್! ರುತುರಾಜ್ ಕಾಯಕ್ವಾಡ್ ವಿಶ್ವದಾಖಲೆ
ವಿಜಯ್ ಹಜಾರೆ ಟ್ರೋಫಿಯ 2ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಓವರ್‌ನಲ್ಲಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿರುವ ರುತುರಾಜ್ ಉತ್ತರಪ್ರದೇಶ ವಿರುದ್ಧ ದ್ವಿಶತಕ ಬಾರಿಸಿದ್ದಾರೆ.
ನವದೆಹಲಿ: ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರ್ ಟ್ರೋಫಿ 2ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಉತ್ತರ ಪ್ರದೇಶದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿರುವ ರುತುರಾಜ್ ಒಂದೇ ಓವರ್‌ನಲ್ಲಿ 7 ಸಿಕ್ಸರ್ ಬಾರಿಸಿ ವಿಶ್ವದಾಖಲೆ ಮಾಡಿದ್ದಾರೆ. ಇಂತಹ ಮಹತ್ವದ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ಹೊಸ ಇತಿಹಾಸ ನಿರ್ಮಿಸಿದ ರುತುರಾಜ್!
ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರ ಪ್ರದೇಶ ತಂಡದ ವಿರುದ್ಧ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಇತಿಹಾಸ ನಿರ್ಮಿಸಿದ್ದಾರೆ. ಲಿಸ್ಟ್ A ಕ್ರಿಕೆಟ್‌ನಲ್ಲಿ ಒಂದೇ ಓವರ್‌ನಲ್ಲಿ 7 ಸಿಕ್ಸರ್ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ರುತುರಾಜ್ ಗಾಯಕ್ವಾಡ್ ಪಾತ್ರರಾಗಿದ್ದಾರೆ. ಎಡಗೈ ಸ್ಪಿನ್ನರ್ ಶಿವ ಸಿಂಗ್ ವಿರುದ್ಧ ಇನಿಂಗ್ಸ್ ನ 49ನೇ ಓವರ್ ನಲ್ಲಿ ಅವರು ಈ ಸಾಧನೆ ಮಾಡಿದರು. ಈ ಓವರ್‌ನಲ್ಲಿ ಶಿವ ಸಿಂಗ್ 1 ಬಾಲ್ ನೋ ಬಾಲ್ ಎಸೆದಿದ್ದರು, ಇದರಿಂದಾಗಿ ರಿತುರಾಜ್ ಒಟ್ಟು 7 ಎಸೆತಗಳನ್ನು ಆಡಿದರು. ಈ ಎಲ್ಲಾ ಎಸೆತಗಳನ್ನು ಅವರು ಬೌಂಡರಿ ಗೆರೆ ದಾಟಿಸಿ ಹೊಸ ಇತಿಹಾಸ ಸೃಷ್ಟಿಸಿದರು.
IPL 2022 Final: ಗಿನ್ನಿಸ್ ರೆಕಾರ್ಡ್ ಪುಟ ಸೇರಿದ IPL 2022 ಫೈನಲ್ ಪಂದ್ಯ: ಏನಿದರ ವಿಶೇಷತೆ?
ದ್ವಿಶತಕ ಬಾರಿಸಿದ ರುತುರಾಜ್!
ಇನ್ನು ಇದೇ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 159 ಎಸೆತಗಳಲ್ಲಿ ಅಜೇಯ 220 ರನ್ ಗಳಿಸುವ ಮೂಲಕ ದ್ವಿಶತಕ ಬಾರಿಸಿ ಮಿಂಚಿದರು. ಈ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು 16 ಸಿಕ್ಸರ್ ಬಾರಿಸುವ ಮೂಲಕ ಅಬ್ಬರಿಸಿದರು. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮಹಾರಾಷ್ಟ್ರ ರುತುರಾಜ್ ಅವರ ಸ್ಫೋಟಕ ಬ್ಯಾಟಿಂಗ್‍ನಿಂದ 50 ಓವರ್‍ಗಳಲ್ಲಿ 5 ವಿಕೆಟ್‌ಗೆ 330 ರನ್‍ಗಳ ಬೃಹತ್ ಮೊತ್ತ ಪೇರಿಸಿತು. ರುತುರಾಜ್ ಗಾಯಕ್ವಾಡ್ ಇದುವರೆಗೆ ಟೀಂ ಇಂಡಿಯಾ ಪರ 1 ಏಕದಿನ ಮತ್ತು 9 ಟಿ-20 ಪಂದ್ಯಗಳನ್ನು ಆಡಿದ್ದಾರೆ.
ಕಳೆದ 6 ಇನ್ನಿಂಗ್ಸ್‌ಗಳಲ್ಲಿ 6ನೇ ಶತಕ
ವಿಜಯ್ ಹಜಾರೆ ಟ್ರೋಫಿಯ ಕೊನೆಯ 8 ಇನ್ನಿಂಗ್ಸ್‌ಗಳಲ್ಲಿ ರುತುರಾಜ್ ಗಾಯಕ್ವಾಡ್ 6 ಶತಕಗಳನ್ನು ಗಳಿಸಿದ್ದಾರೆ. ಅದೇ ರೀತಿ ಇದು 25 ವರ್ಷದ ರುತುರಾಜ್ ಅವರ ಲಿಸ್ಟ್- A ವೃತ್ತಿಜೀವನದ 13ನೇ ಶತಕವಾಗಿದೆ. ಈ ಪಂದ್ಯಕ್ಕೂ ಮುನ್ನ ರುತುರಾಜ್ ಲಿಸ್ಟ್- Aನ 69 ಪಂದ್ಯಗಳಲ್ಲಿ 55ರ ಸರಾಸರಿಯಲ್ಲಿ 3,538 ರನ್ ಗಳಿಸಿದ್ದಾರೆ.
ಇದನ್ನೂ ಓದಿ: Viral Video: ರಣರಂಗವಾಯ್ತು ಫುಟ್ಬಾಲ್ ಮೈದಾನ: ಆಟಗಾರರ ಮಧ್ಯೆ ಮಾರಾಮಾರಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.