WPL 2023: ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಶುಭಾರಂಭ, ಮೊದಲ ಪಂದ್ಯದಲ್ಲಿ ಹರ್ಮನ್‌ಪ್ರೀತ್ ದಾಖಲೆ!

ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್: ಮಹಿಳಾ ಪ್ರೀಮಿಯರ್ ಲೀಗ್ (WPL 2023)ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಶುಭಾರಂಭ ಮಾಡಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಈ ತಂಡವು ಲೀಗ್‌ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ143 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Puttaraj K Alur | Last Updated : Mar 5, 2023, 07:24 AM IST
  • ಗುಜರಾತ್ ಜೈಂಟ್ಸ್ ವಿರುದ್ಧ 143 ರನ್‍ಗಳ ಭರ್ಜರಿ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್
  • ಮಹಿಳಾ ಪ್ರೀಮಿಯರ್ ಲೀಗ್‍ನ ಮೊದಲ ಪಂದ್ಯದಲ್ಲಿಯೇ ಹರ್ಮನ್‌ಪ್ರೀತ್ ಕೌರ್ ಪಡೆಯ ಶುಭಾರಂಭ
  • ಅತಿದೊಡ್ಡ ವೈಯಕ್ತಿಕ ಇನ್ನಿಂಗ್ಸ್ ಆಡಿ ಅತ್ಯಧಿಕ ಸ್ಕೋರ್ ಗಳಿಸಿ ಹರ್ಮನ್‌ಪ್ರೀತ್ ಕೌರ್ ದಾಖಲೆ
WPL 2023: ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಶುಭಾರಂಭ, ಮೊದಲ ಪಂದ್ಯದಲ್ಲಿ ಹರ್ಮನ್‌ಪ್ರೀತ್ ದಾಖಲೆ! title=
ಭರ್ಜರಿ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್!

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ (WPL)ನ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಸೋಲಿಸುವ ಮೂಲಕ ಮುಂಬೈ ಇಂಡಿಯನ್ಸ್ ಶುಭಾರಂಭ ಮಾಡಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮುಂಬೈ 143 ರನ್‍ಗಳ ಭರ್ಜರಿ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 207 ರನ್‍ಗಳ ಬೃಹತ್ ಮೊತ್ತ ಗಳಿಸಿತು. ಕಠಿಣ ಗುರಿ ಬೆನ್ನತ್ತಿದ ಗುಜರಾತ್ ತಂಡ 15.1 ಓವರ್‌ಗಳಲ್ಲಿ 64 ರನ್ ಗಳಿಸಲಷ್ಟೇ ಶಕ್ತವಾಯಿತು.  

ಹರ್ಮನ್‌ಪ್ರೀತ್ ದಾಖಲೆ!

ಮುಂಬೈ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಈ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ. ಮಹಿಳಾ ಪ್ರೀಮಿಯರ್‌ನಲ್ಲಿ ಅತಿದೊಡ್ಡ ವೈಯಕ್ತಿಕ ಇನ್ನಿಂಗ್ಸ್ ಆಡಿದ ಅವರು ನಾಯಕಿಯಾಗಿ ಅತ್ಯಧಿಕ ಸ್ಕೋರ್ ಮಾಡಿದರು. WPLನಲ್ಲಿ ಮೊದಲ ಅರ್ಧಶತಕ ಗಳಿಸಿದ ಅವರು 22 ಎಸೆತಗಳಲ್ಲಿ ಫಿಫ್ಟಿ ಸಾಧನೆ ಮಾಡಿದರು. ಕ್ರೀಸ್‍ಗೆ ಆಗಮಿಸಿದ ಕೂಡಲೇ ಬೌಂಡರಿಗಳ ಸುರಿಮಳೆಗೈದ ಅವರು ಕೇವಲ 30 ಎಸೆತಗಳಲ್ಲಿ 65 ರನ್ ಗಳಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 14 ಬೌಂಡರಿಗಳು ಸೇರಿದ್ದವು. ಹರ್ಮನ್‌ಪ್ರೀತ್ ಹೊರತಾಗಿ ಹ್ಯಾಲಿ ಮ್ಯಾಥ್ಯೂಸ್ 31 ಎಸೆತಗಳಲ್ಲಿ 47 ರನ್ ಮತ್ತು ಎಮಿಲಿಯಾ ಕೆರ್ 24 ಎಸೆತಗಳಲ್ಲಿ ಅಜೇಯ 45 ರನ್ ಗಳಿಸಿದರು.  

ಇದನ್ನೂ ಓದಿ: IND vs AUS : ಟೆಸ್ಟ್‌ನಿಂದ ಈ ಆಟಗಾರನನ್ನು ಟೀಂನಿಂದ  ಹೊರಗಿಟ್ಟ ರೋಹಿತ್-ದ್ರಾವಿಡ್! 

4 ವಿಕೆಟ್ ಪಡೆದ ಇಶಾಕ್

ಬಂಗಾಳದ ನಿವಾಸಿ ಸೈಕಾ ಇಶಾಕ್ ಮುಂಬೈ ತಂಡದ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ 4 ವಿಕೆಟ್ ಪಡೆದರು. ಎಡಗೈ ಸ್ಪಿನ್ನರ್ ಇಶಾಕ್ 3.1 ಓವರ್‌ಗಳಲ್ಲಿ ಕೇವಲ 11 ರನ್ ನೀಡಿದರು. ಇವರಲ್ಲದೆ ನಟಾಲಿ 5 ರನ್ ನೀಡಿ 2 ವಿಕೆಟ್ ಮತ್ತು ಅಮೆಲಿಯಾ ಕೆರ್ 2 ವಿಕೆಟ್ ಕಬಳಿಸಿದರೆ, ಇಸ್ಸಿ ವಾಂಗ್ 3 ಓವರ್ ಬೌಲ್ ಮಾಡಿ 7 ರನ್ ನೀಡಿ 1 ವಿಕೆಟ್ ಪಡೆದರು. ದಯಾಲನ್ ಹೇಮಲತಾ ಗುಜರಾತ್ ತಂಡದ ಪರ ಗರಿಷ್ಠ 29 ರನ್(ಅಜೇಯ) ಗಳಿಸಿದರು. ಹೇಮಲತಾ 23 ಎಸೆತಗಳನ್ನು ಎದುರಿಸಿ 1 ಬೌಂಡರಿ, 2 ಸಿಕ್ಸರ್ ಬಾರಿಸಿದರು. ಗುಜರಾತ್ ತಂಡದ ಪರ ಬೇರಾವ ಆಟಗಾರ್ತಿಯೂ ಎರಡಂಕಿ ಮೊತ್ತ ಗಳಿಸಲು ಸಾಧ‍್ಯವಾಗಲಿಲ್ಲ.  

ಮುಂಬೈ ಪರ ಭರ್ಜರಿ ಜೊತೆಯಾಟ

ಟಾಸ್ ಗೆದ್ದ ಗುಜರಾತ್ ತಂಡದ ನಾಯಕಿ ಬೆತ್ ಮೂನಿ ಫೀಲ್ಡಿಂಗ್ ಆಯ್ದುಕೊಂಡು ಮುಂಬೈಗೆ ಮೊದಲು ಬ್ಯಾಟಿಂಗ್ ನೀಡಿದರು. ಇದರ ಸದುಪಯೋಗ ಪಡೆದುಕೊಂಡ ಮುಂಬೈ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿ ಬೃಹತ್ ಮೊತ್ತ ಗಳಿಸಿತು. ನಾಯಕಿ ಹರ್ಮನ್‌ಪ್ರೀತ್ ಮತ್ತು ಕೆರ್ 4ನೇ ವಿಕೆಟ್‌ಗೆ 89 ರನ್‌ಗಳ ಭರ್ಜರಿ ಜೊತೆಯಾಟವಾಡಿದರು. ಗುಜರಾತ್ ಪರ ಆಫ್ ಸ್ಪಿನ್ನರ್ ಸ್ನೇಹ ರಾಣಾ 43 ರನ್ ನೀಡಿ 2 ವಿಕೆಟ್ ಪಡೆದರು.

ಇದನ್ನೂ ಓದಿ: IND vs AUS : ಟೆಸ್ಟ್ ಸೋಲಿನ ನಂತರ ಟೀಂ ಇಂಡಿಯಾಗೆ ಐಸಿಸಿನಿಂದ ಮತ್ತೊಂದು ಶಾಕ್!   

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News