WTC Final 2021: ನ್ಯೂಜಿಲೆಂಡ್ ಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟ

ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲೆಂಡ್ ತಂಡವು ಭಾರತದ ವಿರುದ್ಧ ಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.ಆ ಮೂಲಕ ಉದ್ಘಾಟನಾ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ನ್ನು ತನ್ನದಾಗಿಸಿಕೊಂಡಿದೆ.

Written by - Zee Kannada News Desk | Last Updated : Jun 24, 2021, 12:06 AM IST
  • ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲೆಂಡ್ ತಂಡವು ಭಾರತದ ವಿರುದ್ಧ ಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.ಆ ಮೂಲಕ ಉದ್ಘಾಟನಾ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ನ್ನು ತನ್ನದಾಗಿಸಿಕೊಂಡಿದೆ.
  • ನ್ಯೂಜಿಲೆಂಡ್ ಪರವಾಗಿ ಜೆಮಿಸನ್ ಎರಡು ಇನಿಂಗ್ಸ್ ಗಳಿಂದ ಒಟ್ಟು ಏಳು ವಿಕೆಟ್ ಗಳನ್ನು ಪಡೆಯುವ ಮೂಲಕ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
WTC Final 2021: ನ್ಯೂಜಿಲೆಂಡ್ ಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟ  title=
Photo Courtesy: Twitter

ನವದೆಹಲಿ: ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲೆಂಡ್ ತಂಡವು ಭಾರತದ ವಿರುದ್ಧ ಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.ಆ ಮೂಲಕ ಉದ್ಘಾಟನಾ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: WTC Final 2021: ಭಾರತಕ್ಕೆ 32 ರನ್ ಗಳ ಮುನ್ನಡೆ, ಎರಡನೇ ಇನಿಂಗ್ಸ್ 64/2

ಮೊದಲು ಟಾಸ್ ಗೆದ್ದು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡ ನ್ಯೂಜಿಲೆಂಡ್ ತಂಡವು ಭಾರತವನ್ನು ಮೊದಲ ಇನಿಂಗ್ಸ್ ನಲ್ಲಿ ಕೇವಲ 217 ರನ್ ಗಳಿಗೆ ಕಟ್ಟಿ ಹಾಕಲು ಯಶಸ್ವಿಯಾಯಿತು. ಇದಕ್ಕೆ ಪ್ರತಿಯಾಗಿ ನ್ಯೂಜಿಲೆಂಡ್ ತಂಡವು 249 ರನ್ ಗಳ ಮೂಲಕ ಅಲ್ಪ ರನ್ ಗಳ ಮುನ್ನಡೆಯನ್ನು ಸಾಧಿಸಿತು.

ಇದನ್ನೂ ಓದಿ: WTC Final 2021: ಭಾರತಕ್ಕೆ 32 ರನ್ ಗಳ ಮುನ್ನಡೆ, ಎರಡನೇ ಇನಿಂಗ್ಸ್ 64/2

ಇನ್ನೊಂದೆಡೆಗೆ ಎರಡೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡವು ತನ್ನ ಎಂದಿನ ಬ್ಯಾಟಿಂಗ್ ವೈಫಲ್ಯವನ್ನು ಇಲ್ಲಿಯೂ ಮುಂದುವರೆಸಿತು. ಭಾರತದ ಪರವಾಗಿ ರಿಶಬ್ ಪಂತ್ 41 ರನ್ ಗಳನ್ನು ಗಳಿಸಿದ್ದೆ ವೈಯಕ್ತಿಕ ಗರಿಷ್ಟ ಮೊತ್ತವಾಗಿತ್ತು, ಉಳಿದವರು ಯಾರೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಇದರಿಂದಾಗಿ ಭಾರತ ತಂಡವು ಎರಡನೇ ಇನಿಂಗ್ಸ್ ನಲ್ಲಿ ಕೇವಲ 170 ರನ್ ಗಳಿಗೆ ಆಲೌಟ್ ಆಯಿತು.

ಇದನ್ನೂ ಓದಿ: WTC Final 2021: ಭಾರತ ತಂಡ 170 ಕ್ಕೆ ಆಲೌಟ್, ನ್ಯೂಜಿಲೆಂಡ್ ಗೆ 139 ರನ್ ಗಳ ಗುರಿ

ಆ ಮೂಲಕ ನ್ಯೂಜಿಲೆಂಡ್ ತಂಡಕ್ಕೆ 139 ರನ್ ಗಳ ಗೆಲುವಿನ ಗುರಿಯನ್ನು ನೀಡಿತು.ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ಎರಡು ವಿಕೆಟ್ ಕಳೆದುಕೊಂಡು 140 ರನ್ ಗಳಿಸುವ ಮೂಲಕ ವಉದ್ಘಾಟನಾ ಆವೃತ್ತಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ್ನು ತನ್ನದಾಗಿಸಿಕೊಂಡಿತು.ನ್ಯೂಜಿಲೆಂಡ್ ಪರವಾಗಿ ಜೆಮಿಸನ್ ಎರಡು ಇನಿಂಗ್ಸ್ ಗಳಿಂದ ಒಟ್ಟು ಏಳು ವಿಕೆಟ್ ಗಳನ್ನು ಪಡೆಯುವ ಮೂಲಕ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News