Yashasvi Jaiswal: ಇತಿಹಾಸ ನಿರ್ಮಿಸಲು ಒಂದೇ ಹೆಜ್ಜೆ… ಧರ್ಮಶಾಲಾ ಟೆಸ್ಟ್’ನಲ್ಲಿ ಈ ದಾಖಲೆ ಮುರಿಯಲು ಕಾಯುತ್ತಿದ್ದಾರೆ ಯಶಸ್ವಿ ಜೈಸ್ವಾಲ್!
Yashasvi Jaiswal Test Cricket: ಧರ್ಮಶಾಲಾದಲ್ಲಿ ನಡೆಯಲಿರುವ ಐದನೇ ಟೆಸ್ಟ್’ನಲ್ಲಿ ಜೈಸ್ವಾಲ್ ಇನ್ನು 98 ರನ್ ಗಳಿಸಿದರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ಇಂಗ್ಲೆಂಡ್ ಲೆಜೆಂಡ್ ಗ್ರಹಾಂ ಗೂಚ್ ಹೆಸರಿನಲ್ಲಿದೆ
Yashasvi Jaiswal Test Cricket: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸದ್ದು ಮಾಡುತ್ತಿದ್ದಾರೆ. ಈ ಯುವ ಆಟಗಾರ ಟೂರ್ನಿಯಲ್ಲಿ ಹಲವು ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ. ಇದೀಗ ಅಂತಿಮ ಟೆಸ್ಟ್ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು ಕೆಲ ದಾಖಲೆಗಳತ್ತ ದೃಷ್ಟಿ ನೆಟ್ಟಿದ್ದಾರೆ.
ಇದನ್ನೂ ಓದಿ: Virat- Anushka: ಮುರಿದು ಬೀಳುವತ್ತ 16 ವರ್ಷಗಳ ಅಪೂರ್ವ 'ಸಂಬಂಧ'! ಅಕಾಯ್ ಜನನದ ಬೆನ್ನಲ್ಲೇ ಅನುಷ್ಕಾ ಮಹತ್ವದ ನಿರ್ಧಾರ
ಧರ್ಮಶಾಲಾದಲ್ಲಿ ನಡೆಯಲಿರುವ ಐದನೇ ಟೆಸ್ಟ್’ನಲ್ಲಿ ಜೈಸ್ವಾಲ್ ಇನ್ನು 98 ರನ್ ಗಳಿಸಿದರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ಇಂಗ್ಲೆಂಡ್ ಲೆಜೆಂಡ್ ಗ್ರಹಾಂ ಗೂಚ್ ಹೆಸರಿನಲ್ಲಿದೆ. ಗೂಚ್ 1990 ರಲ್ಲಿ ಮೂರು ಪಂದ್ಯಗಳನ್ನು ಆಡಿದ್ದು, 6 ಇನ್ನಿಂಗ್ಸ್‌ಗಳಲ್ಲಿ 125.33 ಸರಾಸರಿಯಲ್ಲಿ 752 ರನ್ ಗಳಿಸಿದರು. 34 ವರ್ಷಗಳ ನಂತರವೂ ಈ ದಾಖಲೆ ಯಥಾಸ್ಥಿತಿಯಲ್ಲಿದೆ. ಈ ಹಿಂದೆ ಜೋರೂಟ್ ಹತ್ತಿರ ಬಂದರೂ ಈ ದಾಖಲೆ ಮುರಿಯಲು ಸಾಧ್ಯವಾಗಿರಲಿಲ್ಲ. ಈ ಪಟ್ಟಿಯಲ್ಲಿ ಯಶಸ್ವಿ 655 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಧರ್ಮಶಾಲಾ ಟೆಸ್ಟ್‌ನಲ್ಲಿ 83 ರನ್ ಗಳಿಸಿದರೆ ರೂಟ್ ಅವರ ದಾಖಲೆಯನ್ನು ಮುರಿಯುತ್ತಾರೆ. 98 ರನ್ ಗಳಿಸಿದರೆ ಗೂಚ್ ದಾಖಲೆ ಅಳಿಸುವುದಲ್ಲದೇ, ಎರಡು ತಂಡಗಳ ನಡುವೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೆಸರು ಮಾಡಲಿದ್ದಾರೆ.
ಇದನ್ನೂ ಓದಿ: ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಗವಾಸ್ಕರ್ ದಾಖಲೆ ಮೇಲೆ ಕಣ್ಣು...
ಮುಂಬರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್’ನಲ್ಲಿ 120 ರನ್ ಗಳಿಸಿದರೆ, ಜೈಸ್ವಾಲ್ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆ ಬರೆಯಲಿದ್ದಾರೆ. 1971ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 4 ಟೆಸ್ಟ್ ಸರಣಿಗಳಲ್ಲಿ ಲೆಜೆಂಡರಿ ಆಟಗಾರ ಸುನಿಲ್ ಗವಾಸ್ಕರ್ 774 ರನ್ ಗಳಿಸಿದ್ದರು. ಎರಡನೇ ಸ್ಥಾನದಲ್ಲೂ ಅವರೇ ಇದ್ದಾರೆ. ಇನ್ನು ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 692 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾ