Yashasvi Jaiswal Records: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ 22 ವರ್ಷದ ಯಶಸ್ವಿ ಜೈಸ್ವಾಲ್ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದಾರೆ. 3 ಪಂದ್ಯಗಳ 6 ಇನ್ನಿಂಗ್ಸ್’ಗಳಲ್ಲಿ ಎರಡು ದ್ವಿಶತಕ ಮತ್ತು ಒಂದು ಅರ್ಧ ಶತಕದೊಂದಿಗೆ 545 ರನ್ ಗಳಿಸಿದ್ದಾರೆ. ಯಶಸ್ವಿ ಈ ಸರಣಿಯಲ್ಲಿ 500+ ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಎರಡೂ ತಂಡಗಳು ಮುಂದಿನ ಟೆಸ್ಟ್ ಪಂದ್ಯವನ್ನು ರಾಂಚಿಯಲ್ಲಿ ಫೆಬ್ರವರಿ 23 ರಿಂದ ಆಡಲಿದ್ದು, ಕೊನೆಯ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ.
ಇದನ್ನೂ ಓದಿ: ಜೂನಿಯರ್ ವಿರಾಟ್ ಆಗಮನದ ಬೆನ್ನಲ್ಲೇ ಸಖತ್ ಟ್ರೆಂಡ್ ಆಗ್ತಿದೆ ಎಬಿಡಿ ನೀಡಿದ ಅದೊಂದು ಹೇಳಿಕೆ! ಏನದು?
ಟೀಂ ಇಂಡಿಯಾದ ಮಾಜಿ ಲೆಜೆಂಡರಿ ಟೆಸ್ಟ್ ಆರಂಭಿಕ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಯಾವುದೇ ಭಾರತೀಯರಿಂದ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. 1971ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಿದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸುನಿಲ್ ಗವಾಸ್ಕರ್ 774 ರನ್ ಗಳಿಸಿದ್ದರು. ಇದೀಗ ಯಶಸ್ವಿ ಜೈಸ್ವಾಲ್ ಅವರಿಗೆ ಈ ದಾಖಲೆ ಮುರಿಯುವ ಅವಕಾಶ ಇದ್ದು, ಕೇವಲ 230 ರನ್ ಗಳಿಸಿದರೆ ಸಾಕು, ರೆಕಾರ್ಡ್ ಬ್ರೇಕ್ ಆಗಲಿದೆ.
ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್
- ಸುನಿಲ್ ಗವಾಸ್ಕರ್ vs ವೆಸ್ಟ್ ಇಂಡೀಸ್ (1971) - 774 ರನ್
- ಸುನಿಲ್ ಗವಾಸ್ಕರ್ vs ವೆಸ್ಟ್ ಇಂಡೀಸ್ (1978-79) - 732 ರನ್
- ವಿರಾಟ್ ಕೊಹ್ಲಿ vs ಆಸ್ಟ್ರೇಲಿಯಾ (2014-15) - 692 ರನ್
- ವಿರಾಟ್ ಕೊಹ್ಲಿ vs ಇಂಗ್ಲೆಂಡ್ (2016) - 655 ರನ್
- ದಿಲೀಪ್ ಸರ್ದೇಸಾಯಿ vs ವೆಸ್ಟ್ ಇಂಡೀಸ್ (1971) - 642 ರನ್
ಇಲ್ಲಿಯವರೆಗೆ ವಿರಾಟ್ ಕೊಹ್ಲಿ ಕೂಡ ಗವಾಸ್ಕರ್ ಅವರ ಈ ಅದ್ಭುತ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ. ಆದರೆ, ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎಂದೆನಿಸಿಕೊಂಡಿದ್ದಾರೆ ಕೊಹ್ಲಿ. ಈ ಪಟ್ಟಿಯಲ್ಲಿ ಗವಾಸ್ಕರ್ 732 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. 2014-15ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್ ಸರಣಿಯ 4 ಪಂದ್ಯಗಳಲ್ಲಿ ಕೊಹ್ಲಿ 692 ರನ್ ಗಳಿಸಿದ್ದರು. ಇದರಲ್ಲಿ 4 ಶತಕಗಳೂ ಸೇರಿದ್ದವು.
ಇದನ್ನೂ ಓದಿ: ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ
ಇನ್ನೊಂದೆಡೆ ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ 148 ರನ್ ಗಳಿಸಿದರೆ, ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿಯವರನ್ನು ಹಿಂದಿಕ್ಕಲಿದ್ದಾರೆ. ನಿರ್ದಿಷ್ಟ ಒಂದು ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಗರಿಷ್ಠ 692 ರನ್ ಗಳಿಸಿದ್ದಾರೆ. ಯಶಸ್ವಿ ಫಾರ್ಮ್’ನಲ್ಲಿ ಇದೀಗ ಕೊಹ್ಲಿ ಮತ್ತು ಗವಾಸ್ಕರ್ ದಾಖಲೆಗಳನ್ನು ಬ್ರೇಕ್ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.