147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಯಾರೂ ಮಾಡದ ಸಾಧನೆ ಮಾಡಿದ ಯಶಸ್ವಿ ಜೈಸ್ವಾಲ್!
IND vs BAN: ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 280 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಚೆನ್ನೈನಲ್ಲಿ ನಡೆದ ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಟೀಂ ಇಂಡಿಯಾದಿಂದ ಅದ್ಭುತ ಪ್ರದರ್ಶನ ಕಂಡುಬಂತು.
Yashasvi Jaiswal: ಟೀಂ ಇಂಡಿಯಾದ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಯಾರೂ ಮಾಡದ ಸಾಧನೆ ಮಾಡಿದ್ದಾರೆ. ತವರು ನೆಲದಲ್ಲಿ ಮೊದಲ 10 ಇನ್ನಿಂಗ್ಸ್‌ಗಳಲ್ಲಿ 750ಕ್ಕೂ ಹೆಚ್ಚು ರನ್ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಹೌದು, ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್ ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ (56) ಹಾಗೂ 2ನೇ ಇನ್ನಿಂಗ್ಸ್‌ನಲ್ಲಿ 10 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಒಟ್ಟು 66 ರನ್ ಗಳಿಸಿದ ಜೈಸ್ವಾಲ್ ಯಾರೂ ಮಾಡದ ವಿಶೇಷ ದಾಖಲೆಯೊಂದನ್ನು ತಮ್ಮ ಮಾಡಿದರು. 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ತವರು ನೆಲದಲ್ಲಿ ಮೊದಲ 10 ಇನ್ನಿಂಗ್ಸ್‌ಗಳಲ್ಲಿ 750ಕ್ಕೂ ಹೆಚ್ಚು ರನ್ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಅನ್ನೋ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡರು.
ಇದನ್ನೂ ಓದಿ: 2ನೇ ಟೆಸ್ಟ್‌ಗೆ ತಂಡ ಪ್ರಕಟಿಸಿ ಈ ಮೂರು ಆಟಗಾರರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ.. ನಿವೃತ್ತಿ ಖಚಿತ?!
ಟೀಂ ಇಂಡಿಯಾಗೆ ೨೮೦ ರನ್‌ಗಳ ಭರ್ಜರಿ ಗೆಲುವು!
ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 280 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಚೆನ್ನೈ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಟೀಂ ಇಂಡಿಯಾದಿಂದ ಅದ್ಭುತ ಪ್ರದರ್ಶನ ಕಂಡುಬಂತು. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ಭಾರತ ತಂಡದ ಪ್ರದರ್ಶನ ಅಮೋಘವಾಗಿತ್ತು. ಅದರಲ್ಲೂ ಮೊದಲ ಇನ್ನಿಂಗ್ಸ್‌ನಲ್ಲಿ ಅಮೋಘ ಶತಕ (113) ಸಿಡಿಸಿ ಮಿಂಚಿದ್ದ ಆರ್.ಅಶ್ವಿನ್ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳನ್ನು ಪೆಡೆದು ಮಿಂಚಿದ್ದರು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 91.2 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 376 ರನ್ ಗಳಿಸಿತು. ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 47.1 ಓವರ್‌ಗಳಲ್ಲಿ 149ರನ್‌ಗೆ ಸರ್ವಪತನ ಕಂಡಿತು. ಈ ಮೂಲಕ 227 ರನ್‌ಗಳ ಭಾರೀ ಹಿನ್ನಡೆ ಅನುಭವಿಸಿತು.
ಭಾರತ ತನ್ನ 2ನೇ ಇನ್ನಿಂಗ್ಸ್‌ನಲ್ಲಿ 64 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 287 ರನ್‌ಗಳಿಗೆ ಡಿಕ್ಲೇರ್ ಘೋಷಿಸಿತು. ಈ ಮೂಲಕ ಬಾಂಗ್ಲಾಗೆ 515 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತು. ದೊಡ್ಡ ಗುರಿ ಬೆನ್ನುಹತ್ತಿದ ಬಾಂಗ್ಲಾದೇಶ ಭಾರತೀಯರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ 62.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 234 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರತ ತಂಡವು ಮೊದಲ ಟೆಸ್ಟ್ ಪಂದ್ಯವನ್ನು 280 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು.
ಇದನ್ನೂ ಓದಿ: ಹೊರಬಿತ್ತು CSK ರಿಟೈನ್ ಲಿಸ್ಟ್: ಧೋನಿಗೋಸ್ಕರ ತಂಡದ ಪ್ರಮುಖ ಆಟಗಾರನನ್ನೇ ಹೊರಗಿಟ್ಟ ಫ್ರಾಂಚೈಸಿ! ಆತ ಬೇರಾರು ಅಲ್ಲ...
ಕಾನ್ಪುರ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ
ಟೀಂ ಇಂಡಿಯಾದ ಆಯ್ಕೆಗಾರರು ಕಾನ್ಪುರದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದ್ದಾರೆ. ಈ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 2ನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಸೆಪ್ಟೆಂಬರ್ 27ರಿಂದ ನಡೆಯಲಿದೆ. ಈ ಸರಣಿಯ ಕೊನೆಯ ಪಂದ್ಯ ಗೆಲ್ಲಲು ಟೀಂ ಇಂಡಿಯಾ ಈಗಾಗಲೇ ಪ್ಲ್ಯಾನ್ ಮಾಡಿದೆ. ಇದರಿಂದ ಈ ಸರಣಿಯಲ್ಲಿ ಬಾಂಗ್ಲಾದೇಶವನ್ನು ಕ್ಲೀನ್ ಸ್ವೀಪ್ ಮಾಡಬಹುದಾಗಿದೆ.
2ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.