Yuzvendra Chahal County Championship: ಭಾರತದ ಲೆಜೆಂಡರಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಬೇರೆ ದೇಶಕ್ಕೆ ಹೋಗಿ ಕ್ರಿಕೆಟ್ ಆಡಲು ನಿರ್ಧರಿಸಿದ್ದಾರೆ. 2025 ರ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಮತ್ತೊಮ್ಮೆ ನಾರ್ಥಾಂಪ್ಟನ್‌ಶೈರ್ ಪರ ಆಡಲು ತಯಾರಿ ನಡೆಸುತ್ತಿರುವ ಅವರು, ಐಪಿಎಲ್ ನಂತರ ನಾರ್ಥಾಂಪ್ಟನ್‌ಶೈರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಯುಜ್ವೇಂದ್ರ ಚಾಹಲ್ ಕೌಂಟಿ ಚಾಂಪಿಯನ್‌ಶಿಪ್ ಮತ್ತು ODI ಕಪ್ ಎರಡರಲ್ಲೂ ಭಾಗವಹಿಸಲಿದ್ದು, ಅವರ ಮೊದಲ ಪಂದ್ಯ ಜೂನ್ 22 ರಂದು ಮಿಡ್ಲ್‌ಸೆಕ್ಸ್ ವಿರುದ್ಧ ನಡೆಯಲಿದೆ.
ಇದನ್ನೂ ಓದಿ: ವಿಚ್ಛೇದನದ ಹಾದಿಯಲ್ಲಿ ಮತ್ತೊಂದು ಸ್ಟಾರ್ ಜೋಡಿ! ಹಾಲು ಜೇನಿನಂತಿದ್ದ ಸಂಸಾರದಲ್ಲಿ ಏಕಾಏಕಿ ಡಿವೋರ್ಸ್ ಬಿರುಗಾಳಿ..
ಯುಜ್ವೇಂದ್ರ ಚಹಾಲ್ 2024 ರಲ್ಲಿ ನಾರ್ಥಾಂಪ್ಟನ್‌ಶೈರ್‌ಗಾಗಿ ಕೌಂಟಿ ಚಾಂಪಿಯನ್‌ಶಿಪ್ ಮತ್ತು ODI ಕಪ್‌ನಲ್ಲಿ ಭಾಗವಹಿಸಿದ್ದರು. ODI ಕಪ್‌ನಲ್ಲಿ ಕೆಂಟ್ ವಿರುದ್ಧದ ತಮ್ಮ ಚೊಚ್ಚಲ ಪಂದ್ಯದಲ್ಲೇ ಯುಜ್ವೇಂದ್ರ ಚಹಾಲ್ ಐದು ವಿಕೆಟ್‌ಗಳನ್ನು ಕಬಳಿಸಿದ್ದರು. ನಂತರ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಡರ್ಬಿಶೈರ್ ವಿರುದ್ಧದ ಪಂದ್ಯದಲ್ಲಿ ಯುಜ್ವೇಂದ್ರ ಚಾಹಲ್ 99 ರನ್‌ಗಳಿಗೆ 9 ವಿಕೆಟ್‌ಗಳನ್ನು ಕಬಳಿಸಿದರು, ಇದು ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾಗಿತ್ತು. ಯುಜ್ವೇಂದ್ರ ಚಾಹಲ್ 41 ಪ್ರಥಮ ದರ್ಜೆ ಪಂದ್ಯಗಳಲ್ಲಿ 33.79 ಸರಾಸರಿಯಲ್ಲಿ 115 ವಿಕೆಟ್‌ಗಳನ್ನು ಪಡೆದಿದ್ದಾರೆ.
ಆಗಸ್ಟ್ 2023 ರಿಂದ ಯುಜ್ವೇಂದ್ರ ಚಾಹಲ್ ಭಾರತ ಪರ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಇನ್ನು 2024 ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಆದರೆ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಆಡಲು ಅವಕಾಶ ಸಿಗಲಿಲ್ಲ.
ನಾರ್ಥಾಂಪ್ಟನ್‌ಶೈರ್‌ನ ಹೊಸ ಮುಖ್ಯ ತರಬೇತುದಾರ ಡ್ಯಾರೆನ್ ಲೆಹ್ಮನ್, ಯುಜ್ವೇಂದ್ರ ಚಾಹಲ್ ಅವರ ಮರಳುವಿಕೆಯ ಬಗ್ಗೆ ಮಾತನಾಡುತ್ತಾ, 'ವಿಶ್ವದ ಅತ್ಯುತ್ತಮ ಲೆಗ್-ಸ್ಪಿನ್ನರ್‌ಗಳಲ್ಲಿ ಒಬ್ಬರು ಈ ಋತುವಿನಲ್ಲಿ ನಾರ್ಥಾಂಪ್ಟನ್‌ಶೈರ್‌ಗೆ ಮರಳುತ್ತಿರುವುದು ನನಗೆ ನಿಜವಾಗಿಯೂ ಸಂತೋಷ ತಂದಿದೆ. ಜೂನ್ ಮಧ್ಯಭಾಗದಿಂದ ಋತುವಿನ ಅಂತ್ಯದವರೆಗೆ ಅವರು ಲಭ್ಯವಿದ್ದರೆ ನಮಗೆ ತುಂಬಾ ಒಳ್ಳೆಯದು" ಎಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









