Zim vs Ind: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ದಾಖಲೆ ಅಂತರದ ಜಯ!
Zim vs Ind Match: ಜಿಂಬಾಬ್ವೆ ಮತ್ತು ಭಾರತ ನಡುವೆ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳಾದ ಅಭಿಷೇಕ್ ಶರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅಮೋಘ ಆಟವಾಡಿದರು.
India vs Zimbabwe t20 world cup: ಜಿಂಬಾಬ್ವೆ ಮತ್ತು ಭಾರತ ನಡುವೆ ಎರಡನೇ ಟಿ20 ಪಂದ್ಯ ನಡೆಯುತ್ತಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತು. ಶುಭಮನ್ ಗಿಲ್ 2 ರನ್ ಗಳಿಸಿ ಔಟಾದರು. ಅಭಿಷೇಕ್ ಶರ್ಮಾ ಶತಕ ಬಾರಿಸಿದರು.. ಬಳಿಕ ರುತುರಾಜ್ ಗಾಯಕ್ವಾಡ್ ಮತ್ತು ರಿಂಕು ಸಿಂಗ್ ಭರ್ಜರಿ ಪ್ರದರ್ಶನ ನೀಡಿದರು..
ಮೊದಲ ಟಿ20ಯಲ್ಲಿ ಜಿಂಬಾಬ್ವೆ ವಿರುದ್ಧ ಸೋತಿದ್ದ ಟೀಂ ಇಂಡಿಯಾ ಎರಡನೇ ಟಿ20ಯಲ್ಲಿ 100 ರನ್ ಗಳ ಜಯ ಸಾಧಿಸಿದೆ.. ಜಿಂಬಾಬ್ವೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಲು ಸಾಧ್ಯವಾಗಲಿಲ್ಲ. ಜಿಂಬಾಬ್ವೆ ಬ್ಯಾಟ್ಸ್‌ಮನ್‌ಗಳ ಪೈಕಿ ಮಾಧೆವೆರೆ 43, ಬ್ರಿಯಾನ್ 26 ಮತ್ತು ಲ್ಯೂಕ್ 33 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಯಾವುದೇ ಗಮನಾರ್ಹ ರನ್ ಗಳಿಸಲಿಲ್ಲ. ಪರಿಣಾಮವಾಗಿ ತಂಡ 18.4 ಓವರ್‌ಗಳಲ್ಲಿ 134 ರನ್‌ಗಳಿಗೆ ಆಲೌಟಾಯಿತು.. ಟೀಂ ಇಂಡಿಯಾದ ಬೌಲರ್‌ಗಳ ಪೈಕಿ ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್ 30 ವಿಕೆಟ್, ರವಿ ಬಿಷ್ಣೋಯ್ 2 ಮತ್ತು ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಪಡೆದರು.
ಜಿಂಬಾಬ್ವೆ 235 ಟಾರ್ಗೆಟ್
ಭಾರತದ ಬ್ಯಾಟ್ಸ್‌ಮನ್‌ಗಳಾದ ಅಭಿಷೇಕ್ ಶರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅದ್ಭುತವಾಗಿ ಆಡಿದರು ಮತ್ತು ಭಾರತವು ಜಿಂಬಾಬ್ವೆ ಮುಂದೆ 235 ರನ್‌ಗಳ ಗುರಿಯನ್ನು ನೀಡಿತು. ಶುಭಮನ್ ಗಿಲ್ 2, ಅಭಿಷೇಕ್ ಶರ್ಮಾ 100, ರುತುರಾಜ್ ಗಾಯಕ್ವಾಡ್ 77 ಮತ್ತು ರಿಂಕು ಸಿಂಗ್ 48 ರನ್ ಗಳಿಸಿದರು. ಇದರೊಂದಿಗೆ ಭಾರತ ನಿಗದಿತ 20 ಓವರ್‌ಗಳಲ್ಲಿ 234-2 ರನ್ ಗಳಿಸಿತು. ಜಿಂಬಾಬ್ವೆ ಬೌಲರ್‌ಗಳ ಪೈಕಿ ಮುಜರಬಾನಿ ಮತ್ತು ವೆಲ್ಲಿಂಗ್ಟನ್ ವಿಕೆಟ್ ಪಡೆದರು
ಭಾರತ ತಂಡ
ಶುಭಮನ್ ಗಿಲ್ (ನಾಯಕ), ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್
ಜಿಂಬಾಬ್ವೆ ತಂಡ
ವೆಸ್ಲಿ ಮಾಧೆವೆರೆ, ಇನೋಸೆಂಟ್ ಕೈಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಜಾ (ನಾಯಕ), ಡಿಯೋನ್ ಮೈಯರ್ಸ್, ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ವೆಲ್ಲಿಂಗ್ಟನ್ ಮಸಕಡ್ಜಾ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.