Congress announces names of 124 candidates : ವರುಣಾ ಮತ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿತ್ತಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಮೊದಲ ಪಟ್ಟಿಯಲ್ಲಿ ಕೋಲಾರ ಹಾಗೂ ಬಾದಾಮಿ ಕ್ಷೇತ್ರದ ಅಭ್ಯರ್ಥಿ ಹೆಸರಿಲ್ಲ. ಸಿದ್ದರಾಮಯ್ಯ 2 ಕ್ಷೇತ್ರ ಸ್ಪರ್ಧೆ ಸುಳಿವು ಬೆನ್ನಲ್ಲೇ ಮೊದಲ ಪಟ್ಟಿಯಲ್ಲಿ ಕೋಲಾರ, ಬಾದಾಮಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿರದಿರುವುದು ಕುತೂಹಲ ಮೂಡಿಸಿದೆ.
ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೇವೆ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ಖಂಡನೀಯ, ಇಸ್ಲಾಂ ನಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಮುಸ್ಲಿಂ ಸಮುದಾಯದವರೇ ಅದನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಹಿಂದೂ ಬಗ್ಗೆ ಸತೀಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ. ನೈಜ ಸುದ್ದಿ ಬಿಟ್ಟು ಬೇರೆ ಬೇರೆ ಆಯಾಮದಲ್ಲಿ ಚರ್ಚೆ ಆರಂಭ ಆಯ್ತು. ವೈಯಕ್ತಿಕವಾಗಿ, ಪಕ್ಷಕ್ಕೆ ಡ್ಯಾಮೆಜ್ ಆಯಿತು. ನನ್ನ ಪಕ್ಷದ ಡ್ಯಾಮೆಜ್ ಆಗುವುದನ್ನು ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷಗಳ ನಡುವೆ ಶುರುವಾಯ್ತು QR ಕೋಡ್ ವಾರ್ PAY CM ಕಾಂಗ್ರೆಸ್ ಅಭಿಯಾನಕ್ಕೆ ಕೌಂಟರ್ ಕೊಟ್ಟ ಬಿಜೆಪಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಫೋಟೋ ಹಾಕಿ ಕಿಂಡಲ್ ಬೇಡಾಗಿದ್ದಾರೆ ಎಂಬ ಹೆಸರಲ್ಲಿ ಬಿಜೆಪಿ QR ಕೋಡ್ ಅಭಿಯಾನ
ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಅಂಗೀಕಾರ ಮಾಡಿದೆ. ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗಿಕಾರಕ್ಕೆ ಸಭಾಪತಿ ಸೂಚನೆ ನೀಡಿದ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಸದನದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ವಿಧಾನಪರಿಷತ್ ನ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.