ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆಯಲ್ಲಿ, ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗಾಗಿ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ನ್ಯಾಯಾಲಯವು ಅಧಿಕಾರವನ್ನು ಮರುಸ್ಥಾಪಿಸಿದೆ.
ಇಂದು ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬರ್ಗಿ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆಯಾಗಿದ್ದಾನೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮಂಕಿ ಪಾಕ್ಸ್ ಲಕ್ಷಣಗಳು ಇರುವ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಪತ್ತೆಯಾಗಿವೆ. ಕೂಡಲೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಶೆ ಹಾಗೂ ನಿಗಾ ವಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಚಲುವರಾಯಸ್ವಾಮಿ ಎಂದು ಪಾಂಡವಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಸಿದ್ದರಾಮಯ್ಯ ಪಾಂಡವಪುರ ಮಾರ್ಗವಾಗಿ ನಾಗಮಂಗಲಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರ್ಯಕರ್ತರು ಪಾಂಡವಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ ಕೋರಿದ್ರು. ಸಿದ್ದರಾಮಯ್ಯ ಪರ ಘೋಷಣೆ ಕೂಗಿದ್ರು..
ರಾಜ್ಯದಲ್ಲಿ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ರಸ್ತೆ ಬದಿ, ಓಣಿಗಳಲ್ಲಿ ನೀರು ನುಗ್ಗಿ ಬರುತ್ತಿವೆ. ಈ ನುಗ್ಗಿ ಬರುವ ನೀರಿನಲ್ಲಿ ಹಾವು ಹರಿದು ಬಂದಿದೆ. ಅದನ್ನು ನೋಡಿದ ಜನ ಹಾವು ಹಿಡಿಯುವವರಿಗೆ ಕರೆ ಮಾಡಿ, ಅದನ್ನು ಹಿಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಯಾರು ಏನೇ ಹೇಳಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ್ದೇ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಎಚ್ಡಿಕೆ, ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆ ಸಂಪೂರ್ಣಗೊಳಿಸೋದಾಗಿ ಹೇಳಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಯಾರು ಏನೇ ಹೇಳಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ್ದೇ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಎಚ್ಡಿಕೆ, ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆ ಸಂಪೂರ್ಣಗೊಳಿಸೋದಾಗಿ ಹೇಳಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಇಂದಿನಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಮೇ 18ರವರೆಗೆ ನಡೆಯಲಿದೆ. ಈ ಬಾರೀ ಒಟ್ಟು 6,84,255 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು. ರಾಜ್ಯದ ಒಟ್ಟು 1,076 ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿತ್ತು.
ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಸಲೀಂ ಅಹ್ಮದ್, ದೃವನಾರಾಯಣ್ ಸೇರಿ ಪಕ್ಷದ ಶಾಸಕರು, ಹಿರಿಯ ನಾಯಕರು ಭಾಗಿಯಾಗಿದ್ದಾರೆ.
ಆಗಸ್ಟ್ 23 ರಿಂದ 9 ರಿಂದ 12 ತರಗತಿವರೆಗಿನ ಶಾಲಾ-ಕಾಲೇಜುಗಳನ್ನ ಪುನರಾರಂಭಿಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಿಸಿದ್ದು, ಮೂರನೇ ಅಲೆಯ ಕುರಿತು ಉದ್ದೇಶಪೂರ್ವಕವಾಗಿ ಸಿಎಂ ತಜ್ಞರ ಜೊತೆ ತುರ್ತು ಸಭೆ ನಡೆಸಲಿದ್ದಾರೆ.
ಆಗಸ್ಟ್ 31ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮುಂದಿನ ಯಾವುದೇ ಪ್ರಕ್ರಿಯೆ ನಡೆಸದಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಭಾರೀ ಹಿನ್ನಡೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.