ಮಹಾರಾಷ್ಟ್ರದ ಮುಖ್ಯಮಂತ್ರಿ ಭಾರತೀಯ ಜನತಾ ಪಕ್ಷದಿಂದ ಇರಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಶನಿವಾರ ಹೇಳಿದ್ದಾರೆ. ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಸಿಎಂ ಆದರೆ ಅವರಿಗೆ ಯಾವುದೇ ಅನುಭವವಿಲ್ಲದ ಕಾರಣ ಅದು ಅವಮಾನ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಠಾಕ್ರೆ ಕುಟುಂಬದಿಂದ ಚುನಾವಣಾ ರಾಜಕೀಯಕ್ಕೆ ಕಾಲಿಡುತ್ತಿರುವ ಶಿವಸೇನೆಯ ಆದಿತ್ಯ ಠಾಕ್ರೆ ಅವರನ್ನು ನಟ ಸಂಜಯ್ ದತ್ ಬೆಂಬಲಿಸಿದ್ದಾರೆ ಮತ್ತು ದೇಶಕ್ಕೆ ಕ್ರಿಯಾತ್ಮಕ ಯುವ ನಾಯಕರು ಬೇಕಾಗಿರುವುದರಿಂದ ಯುವಸೇನಾ ನಾಯಕ ಭಾರಿ ಅಂತರದಿಂದ ಗೆಲ್ಲುತ್ತಾರೆ ಎಂದು ಆಶಿಸಿದ್ದಾರೆ.
ಮುಂಬೈ ಮೆಟ್ರೋ ಯೋಜನೆಗಾಗಿ 2,500 ಕ್ಕೂ ಹೆಚ್ಚು ಮರಗಳನ್ನು ಕಡಿದುಹಾಕಲು ನ್ಯಾಯಾಲಯವು ಅನುಮತಿ ನೀಡಿದ ಒಂದು ದಿನದ ನಂತರ, ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಹೆಚ್ಚಿಸಿದ್ದರಿಂದಾಗಿ ಮುಂಬೈ ಪೊಲೀಸರು ಆರೆ ಕಾಲೋನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮತ್ತೆ ಅಧಿಕಾರಕ್ಕೆ ಬಂದರೆ ಶಿವಸೇನೆ ಮುಖ್ಯಸ್ಥ ಉದವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಪದವಿ ಮೇಲೆ ಕಣ್ಣಿಟ್ಟಿರುವ ಶಿವಸೇನಾದ ಯುವ ನಾಯಕ ಆದಿತ್ಯ ಠಾಕ್ರೆ ಈಗ ಮಹಾರಾಷ್ಟ್ರದಲ್ಲಿ 4000 ಕಿಲೋಮೀಟರ್ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಜಲಗಾಂನಿಂದ ಪ್ರಾರಂಭವಾಗಿರುವ ಈ ಯಾತ್ರೆ ಮಹಾರಾಷ್ಟ್ರದ ಬಹುತೇಕ ಪ್ರದೇಶಗಳನ್ನು ಒಳಗೊಳ್ಳಲಿದೆ ಎನ್ನಲಾಗಿದೆ.
ಮುಂಬರುವ ವಿಧಾನಸಭೆಯಲ್ಲಿ ಶಿವಸೇನಾ ಪಕ್ಷವು ಯುವ ಘಟಕದ ಮುಖ್ಯಸ್ಥ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಸುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಇದೇ ಶುಕ್ರವಾರ ಅಥವಾ ಶನಿವಾರ ನಡೆಯಲಿರುವ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಆದಿತ್ಯ ಠಾಕ್ರೆ ಅವರನ್ನು ಉಪಮುಖ್ಯಮಂತ್ರಿ ಮಾಡುವಂತೆ ಬೇಡಿಕೆ ಇಟ್ಟಿದೆ ಎಂದು ಪಕ್ಷದ ಆತಂರಿಕ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.