ಆರ್ಟಿಕಲ್ 370 ಮತ್ತು 35 ಎ ದೇಶದಲ್ಲಿ ಭಯೋತ್ಪಾದನೆಗೆ ಒಂದು ಹೆಬ್ಬಾಗಿಲು. ಪ್ರಧಾನಿ ನರೇಂದ್ರ ಮೋದಿ ಆ ನಿಬಂಧನೆಗಳನ್ನು ರದ್ದುಗೊಳಿಸುವ ಮೂಲಕ ಆ ಪ್ರವೇಶವನ್ನು ಮುಚ್ಚಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
2019 ರ ಅಕ್ಟೋಬರ್ 12-14ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಬೇಕಿದ್ದ ಹೂಡಿಕೆದಾರರ ಶೃಂಗಸಭೆಯನ್ನು 2020 ಕ್ಕೆ ಮುಂದೂಡಲಾಗಿದೆ. ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ರಾಜ್ಯ ಆಡಳಿತ ಮಂಡಳಿ (ಎಸ್ಎಸಿ) ಶೃಂಗಸಭೆಯನ್ನು ನಡೆಸಲು ಸಿದ್ಧತೆಯನ್ನು ಪರಿಶೀಲಿಸಿದರು ಮತ್ತು ಸನ್ನದ್ಧತೆಯ ಮಟ್ಟವನ್ನು ಗಮನಿಸಿದ ನಂತರ ಅದನ್ನು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ 2020 ಕ್ಕೆ ಮರು ನಿಗದಿಪಡಿಸಲು ನಿರ್ಧರಿಸಿದರು.
'ಜಮ್ಮು ಮತ್ತು ಕಾಶ್ಮೀರ ನಮ್ಮ ಆಂತರಿಕ ವಿಷಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಟ್ರಂಪ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಆರ್ಟಿಕಲ್ 370ನ್ನು ಹಿಂತೆಗೆದುಕೊಂಡ ನಂತರ, ಈಗ ಹಿಂದೂಸ್ತಾನ್ ಕಾಶ್ಮೀರವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ ಎಂಬುದನ್ನು ಪಾಕಿಸ್ತಾನವು ಒಪ್ಪಿಕೊಳ್ಳಲಿದೆ.'
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ 370 ನೇ ವಿಧಿಯನ್ನು ತೆಗೆದುಹಾಕಿದ 30 ದಿನಗಳಲ್ಲಿ ಮೋದಿ ಸರ್ಕಾರ ರಾಜ್ಯದ ಅಭಿವೃದ್ಧಿಗೆ 50 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್, ಪಾಕಿಸ್ತಾನದಿಂದ ಉಗ್ರರ ಒಳನುಸುಳುವಿಕೆ ಪ್ರಯತ್ನ ಪ್ರತಿದಿನವೂ ನಡೆಯುತ್ತಿವೆ ಎಂದು ಅವರು ಹೇಳಿದರು.
ಸಿಗ್ನಲ್ ಕಾರ್ಪ್ಸ್ ರೇಡಿಯೊ ಫ್ರೀಕ್ವೆನ್ಸಿ ಮೂಲಕ ಭಯೋತ್ಪಾದಕರಿಗೆ ಸಂದೇಶಗಳನ್ನು ಕಳುಹಿಸುತ್ತಿದೆ. ಪಾಕಿಸ್ತಾನ ಸೇನೆಯು ಎಫ್ಎಂ ರೇಡಿಯೊ ಕೇಂದ್ರವನ್ನು ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸ್ಥಳಾಂತರಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನದ ರಾಷ್ಟ್ರಪತಿ ಆರಿಫ್ ಅಲ್ವಿ ಆರ್ಟಿಕಲ್ 370 ನ್ನು ರದ್ದುಗೊಳಿಸಿರುವ ಭಾರತದ ನಿರ್ಧಾರದ ವಿರುದ್ಧ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಸಂಬಂಧಿಸಿದಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ನಂಬಲಾಗಿದೆ.
ಸರ್ಕಾರಿ ನೌಕರರು ತಮ್ಮ ಕಚೇರಿಗಳಿಗೆ ಹೋಗಲು ನಿರ್ಬಂಧಗಳನ್ನು ಸಡಿಲಿಸಲಾಗಿದೆ. 50,000 ಕ್ಕೂ ಹೆಚ್ಚು ಲ್ಯಾಂಡ್ಲೈನ್ ಫೋನ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ತೆಗೆದುಹಾಕಿರುವ ಭಾರತದ ನಿರ್ಧಾರದಿಂದ ಅಸಮಾಧಾನಗೊಂಡ ಪಾಕಿಸ್ತಾನವು ಭಾರತದೊಂದಿಗಿನ ತನ್ನ ವ್ಯಾಪಾರ ಸಂಬಂಧವನ್ನು ಕಡಿದುಕೊಂಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.